ರೋಹಿತ್ ಶರ್ಮಾ ಕಮ್‌ಬ್ಯಾಕ್ ಬಗ್ಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಿಗ್ ಅಪ್ಡೇಟ್ಸ್
MI Vs LSG IPL 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ (ಮೇ 4) ನಡೆಯಲಿರುವ ಹೈವೋಲ್ಟೇಜ್ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದಲ್ಲಿ ಎಂಐ ಪರ ಹಿಟ್ ಮ್ಯಾನ್ ರೋಹಿತ್ ಶರ್ವಮಾ ಅವರು ಕಣಕ್ಕಿಯಲಿದ್ದಾರಾ? ಇಲ್ಲಿದೆ ನೋಡಿ ಫ್ರಾಂಚೈಸಿ ಕೊಟ್ಟ ಬಿಗ್ ಅಪ್ಡೇಟ್.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತನ್ನ ಮಾಜಿ ನಾಯಕ ರೋಹಿತ್ ಶರ್ಮಾ ಮರಳಿ ತಂಡ ಸೇರುವ ಬಗ್ಗೆ ದೊಡ್ಡ ಸುಳಿವು ನೀಡಿದೆ. ಆಡಿದ 9 ಪಂದ್ಯಗಳಲ್ಲಿ 7ರಲ್ಲಿ ಸೋಲನುಭವಿಸಿರುವ ಎಂಐ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ತಂಡಕ್ಕೆ ಪ್ಲೇಆಫ್ ಪ್ರವೇಶದ ಬಾಗಿಲು ಸಂಪೂರ್ಣ ಮುಚ್ಚಿದ್ದು, ಒಂದು ವೇಳೆ ಹೋದ್ರೆ ಪವಾಡವೇ ನಡೆಯಬೇಕಿದೆ.

ನೆಟ್ಸ್‌ನಲ್ಲಿ ರೋಹಿತ್ ಭರ್ಜರಿ ಅಭ್ಯಾಸ
ಈ ಪರಿಸ್ಥಿತಿಯಲ್ಲೇ ರೋಹಿತ್ ಶರ್ಮಾ ಗಾಯದ ಕಾರಣದಿಂದ ಹೊರಗುಳಿದಿದ್ದು, ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಇತ್ತ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಕೂಡ ತಮ್ಮ ಫಾರ್ಮ್‌ಗೆ ಮರಳಲು ಪರದಾಡುತ್ತಿದ್ದಾರೆ. ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ ಅವರು ತರಬೇತಿ ನಡೆಸುತ್ತಿರುವುದು ಮತ್ತು ನೆಟ್ಸ್‌ನಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿದೆ.
ರೋಹಿತ್ ಶರ್ಮಾ ಅವರು ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋಗೆ 'ನಾವು ಕೊನೆಯವರೆಗೂ ಹೋರಾಡುತ್ತೇವೆ,' ಎಂಬ ಶೀರ್ಷಿಕೆಯನ್ನು ಕೂಡ ನೀಡಲಾಗಿದೆ. ಇದು ರೋಹಿತ್ ಶರ್ಮಾ ಸೋಮವಾರದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಭರವಸೆಯನ್ನು ಅಭಿಮಾನಿಗಳಲ್ಲಿ ಮೂಡಿಸಿದೆ.
ಚೇತೇಶ್ವರ್ ಪೂಜಾರ ಪೂಜಾರಾ ಹೇಳಿದ್ದೇನು?
ವಾಂಖೆಡೆಯಲ್ಲಿ ಇಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಬಹುನಿರೀಕ್ಷಿತ ಐಪಿಎಲ್ ಪಂದ್ಯದ ಕುರಿತು ಭಾರತದ ಮಾಜಿ ಕ್ರಿಕೆಟಿಗ ಚೇತೇಶ್ವರ್ ಪೂಜಾರ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಂಕಪಟ್ಟಿಯಲ್ಲಿ ಕೆಳಭಾಗದಲ್ಲಿರುವ ಮುಂಬೈ ತಂಡಕ್ಕೆ ಈ ಪಂದ್ಯವು ಅತ್ಯಂತ ನಿರ್ಣಾಯಕವಾಗಿದ್ದು, ಪೂಜಾರ ಅವರ ಹೇಳಿಕೆಯು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ.
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಪೂಜಾರ ಅವರು, ಈ ಪಂದ್ಯವು ಎರಡೂ ತಂಡಗಳಿಗೂ ಎಷ್ಟು ಮುಖ್ಯ ಎಂಬುದನ್ನು ತಿಳಿಸಿದ್ದಾರೆ. "ಈ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ಹಲವು ಸವಾಲುಗಳನ್ನು ಎದುರಿಸಿದೆ. ಈಗ ಅಭಿಮಾನಿಗಳಿಗಾಗಿ, ತಂಡದ ಗೌರವಕ್ಕಾಗಿ ಮತ್ತು ಕಷ್ಟಪಟ್ಟು ಶ್ರಮಿಸಿರುವ ಆಟಗಾರರಿಗಾಗಿ ಭರ್ಜರಿ ಪುನರಾಗಮನ ಮಾಡುವ ಅಗತ್ಯವಿದೆ. ಇಷ್ಟು ದೊಡ್ಡ ತಂಡ ಅಂದ್ರೆ ಸಹಜವಾಗಿಯೇ ನಿರೀಕ್ಷೆಗಳು ಹೆಚ್ಚಿರುತ್ತವೆ, ಹೀಗಾಗಿ ಅವರು ಈ ಪಂದ್ಯದಲ್ಲಿ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಲು ಉತ್ಸುಕರಾಗಿರುತ್ತಾರೆ," ಎಂದು ಹೇಳಿ ಗಮನ ಸೆಳೆದಿದ್ದಾರೆ.
ತಮ್ಮ ಗೌರವಕ್ಕಾಗಿ ಎರಡೂ ತಂಡಗಳ ಹೋರಾಟ
ಮುಂಬೈ ಇಂಡಿಯನ್ಸ್ ಎದುರಿಸುತ್ತಿರುವ ಸಂಕಷ್ಟಗಳ ನಡುವೆಯೂ, ತಂಡದ ದೊಡ್ಡ ಇತಿಹಾಸ ಮತ್ತು ಅಭಿಮಾನಿಗಳ ನಿರೀಕ್ಷೆಗಳು ಆಟಗಾರರ ಮೇಲೆ ಅಪಾರ ಒತ್ತಡವನ್ನು ಹೇರಿವೆ ಎಂದು ಮಾಜಿ ಕ್ರಿಕೆಟಿಗ ಚೇತೇಶ್ವರ್ ಪೂಜಾರ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, "ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ ತುಂಬಾ ಹಿನ್ನಡೆಯನ್ನು ಎದುರಿಸುತ್ತಿದೆ. ಆದ್ದರಿಂದ ಪ್ಲೇಆಫ್‌ಗೆ ಹೋಗುವ ಅವಕಾಶಗಳು ಇರಲಿ, ಬಡಲು, ಇಂದು ಎರಡೂ ತಂಡಗಳು ತಮ್ಮ ಗೌರವಕ್ಕಾಗಿ ಹೋರಾಡಲಿವೆ," ಎಂದು ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications