MI vs RCB IPL 2024: ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಹೆಡ್-ಟು-ಹೆಡ್ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ದೊಡ್ಡ ಪ್ರತಿಸ್ಪರ್ಧಿಗಳಾಗಿವೆ. ಎರಡೂ ತಂಡಗಳೂ ತಮ್ಮ ಹಿಂದೆ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದು, ಇದೀಗ 2024ರ ಆವೃತ್ತಿಯಲ್ಲಿ ಮತ್ತೆ ಕಾದಾಟಕ್ಕೆ ಸಜ್ಜಾಗಿವೆ.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದ ಫಲಿತಾಂಶದ ಹೊರತಾಗಿಯೂ, ಎರಡೂ ತಂಡಗಳಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಸ್ಟಾರ್ ಆಟಗಾರರಿದ್ದಾರೆ.

ಗುರುವಾರ, ಏಪ್ರಿಲ್ 11ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 25ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ್ತು ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕದನಕ್ಕೆ ಸಿದ್ಧವಾಗಿವೆ.
ಇದೇ ವೇಳೆ ಐಪಿಎಲ್ 2024ರ ಆವೃತ್ತಿಯು ಈವರೆಗೆ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳಿಗೆ ಉತ್ತಮವಾಗಿಲ್ಲ.ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 8ನೇ ಪಡೆದಿದ್ದರೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ.
ತಮ್ಮ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಅದೇ ಆವೇಗವನ್ನು ಮುಂದುವರೆಸಲು ಎದುರು ನೋಡುತ್ತಿದೆ. ಬಿಗ್-ಹಿಟ್ಟರ್ ರೊಮಾರಿಯೋ ಶೆಫರ್ಡ್ ಅವರ ಬ್ಯಾಟಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಶಿಸ್ತಿನ ಬೌಲಿಂಗ್ ತಂಡದ ಶಕ್ತಿಯಾಗಿದೆ.

ಮತ್ತೊಂದೆಡೆ, ಆರ್‌ಸಿಬಿ ತಂಡಕ್ಕೆ ಈ ಬಾರಿಯೂ ಸಂಪೂರ್ಣ ಬೌಲಿಂಗ್ ವಿಭಾಗ ಕೈಕೊಟ್ಟಿದೆ. ಆದರೆ, ವಿರಾಟ್ ಕೊಹ್ಲಿ ಬ್ಯಾಟ್‌ನೊಂದಿಗೆ ಅಗ್ರಸ್ಥಾನದಲ್ಲಿ ಏಕಾಂಗಿ ಹೋರಾಟ ನಡೆಸುತ್ತಿದ್ದು, ಉಳಿದ ಬ್ಯಾಟರ್‌ಗಳಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ.
ನಾಯಕ ಫಾಫ್ ಡು ಪ್ಲೆಸಿಸ್ ಸೇರಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಕ್ಯಾಮೆರಾನ್ ಗ್ರೀನ್ ಎಲ್ಲರೂ ರನ್‌ಗಳಿಗಾಗಿ ಪರದಾಡುತ್ತಿದ್ದಾರೆ.
ಪ್ರಸಕ್ತ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಪಂದ್ಯವು ಮತ್ತೊಂದು ಮಹತ್ವದ ಕ್ಷಣವನ್ನು ಹೊಂದಿದೆ. ಏಕೆಂದರೆ ಇದು ಸುಮಾರು ಒಂದು ದಶಕದಲ್ಲಿ ಉಭಯ ತಂಡಗಳ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ತಂಡವನ್ನು ಮುನ್ನಡೆಸುವುದನ್ನು ಅಭಿಮಾನಿಗಳು ನೋಡುತ್ತಿಲ್ಲ.

ಮುಂಬೈ ಇಂಡಿಯನ್ಸ್ vs ಆರ್‌ಸಿಬಿ: ಹೆಡ್-ಟು-ಹೆಡ್ ದಾಖಲೆ
ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳು 32 ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್‌ಸಿಬಿ ತಂಡ 14 ಪಂದ್ಯಗಳಲ್ಲಿ ಗೆದ್ದಿದೆ.
ಮುಂಬೈ ಇಂಡಿಯನ್ಸ್ vs ಆರ್‌ಸಿಬಿ: ತಂಡಗಳ ಸುದ್ದಿ
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ವೇಳೆ ಮುಂಬೈ ಇಂಡಿಯನ್ಸ್ ತಮ್ಮ ಹಿಂದಿನ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಅಗ್ರ ಕ್ರಮಾಂಕದಲ್ಲಿ ರೋಹಿತ್ ಶರ್ಮಾ, ಇಶಾನ್ ಕಿಶನ್, ಟಿಮ್ ಡೇವಿಡ್ ಮತ್ತು ರೊಮಾರಿಯೋ ಶಫರ್ಡ್ ಮಿಂಚುತ್ತಿದ್ದಾರೆ.
ಇನ್ನು ಆರ್‌ಸಿಬಿ ತಂಡದಲ್ಲಿ ಸ್ಥಾನಪಲ್ಲಟ ಮತ್ತು ಸಂಯೋಜನೆಯ ಕುರಿತ ಗೊಂದಲ ಮುಂದುವರಿಯುತ್ತಿವೆ. ಸದ್ಯ ಆರ್‌ಸಿಬಿ ತಮ್ಮ ಆದ್ಯತೆಯ ಆಡುವ 11ರ ಬಳಗದಲ್ಲಿ ಬದಲಾವಣೆ ಮಾಡಲೇಬೇಕಾಗಿದೆ. ವಿಲ್ ಜ್ಯಾಕ್ಸ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯ ಆಡುವ ಸಾಧ್ಯತೆ ಇದೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೈಬಿಟ್ಟ ಮಹಿಪಾಲ್ ಲೊಮ್ರೋರ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಮತ್ತೆ ತಂಡಕ್ಕೆ ಮರಳಲಿದ್ದಾರೆ. ಇನ್ನು ಸುಯಶ್ ಪ್ರಭುದೇಸಾಯಿ ಕೂಡ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವುದನ್ನು ನೋಡಬಹುದು.
ಮುಂಬೈ ಇಂಡಿಯನ್ಸ್ vs ಆರ್‌ಸಿಬಿ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ತಿಲಕ್ ವರ್ಮಾ, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ.
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್/ವಿಲ್ ಜಾಕ್ಸ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್/ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರೀಸ್ ಟೋಪ್ಲೆ, ಮಯಾಂಕ್ ಡಾಗರ್, ವೈಶಾಕ್ ವಿಜಯ್‌ಕುಮಾರ್, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications