For Quick Alerts
ALLOW NOTIFICATIONS  
For Daily Alerts
 

MI vs RCB IPL 2024: ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಹೈ-ವೋಲ್ಟೇಜ್ ಪಂದ್ಯ; ಸಂಭಾವ್ಯ ಆಡುವ 11ರ ಬಳಗ

ಗುರುವಾರ, ಏಪ್ರಿಲ್ 11ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 2024ರ 25ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ್ತು ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಕಾಳಗ ನಡೆಸಲು ಸಿದ್ಧವಾಗಿವೆ.

ಉಭಯ ತಂಡಗಳು ಪ್ರಸಕ್ತ ಅವೃತ್ತಿಯಲ್ಲಿ ಕಳಪೆ ಆರಂಭವನ್ನು ಹೊಂದಿವೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಒಂದು ಗೆಲುವು ಪಡೆದಿದೆ.

MI vs RCB IPL 2024 Mumbai Indians vs Royal Challengers Bengaluru Match Report Probable Playing 11

ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದ್ದು, ಹ್ಯಾಟ್ರಿಕ್ ಸೋಲಿನ ಸರಣಿ ಮುರಿದು ಗೆಲುವಿನ ಟ್ರ್ಯಾಕ್‌ಗೆ ಮರಳಲು ಎದುರು ನೋಡುತ್ತಿದೆ.

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳು ಒಟ್ಟಾರೆ 34 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ 20 ಗೆಲುವಿನೊಂದಿಗೆ ಸ್ಪಷ್ಟ ಮುನ್ನಡೆಯನ್ನು ಹೊಂದಿದ್ದರೆ, ಬೆಂಗಳೂರು ತಂಡ 14 ಪಂದ್ಯಗಳಲ್ಲಿ ಗೆಲುವು ಪಡೆಯಲು ಯಶಸ್ವಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಮುಂಬೈ ಇಂಡಿಯನ್ಸ್ ಒಂದಾಗಿದೆ. ಐದು ಬಾರಿ (2013, 2015, 2017, 2019, 2020) ಐಪಿಎಲ್ ಟ್ರೋಫಿ ಗೆದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಅತಿ ಪ್ರಶಸ್ತಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಜಂಟಿಯಾಗಿ ಅಗ್ರಸ್ಥಾನದಲ್ಲಿದೆ.

MI vs RCB IPL 2024 Mumbai Indians vs Royal Challengers Bengaluru Match Report Probable Playing 11


ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ನಿರಂತರ ಯಶಸ್ಸು ಮತ್ತು ನಿಷ್ಠಾವಂತ ಅಭಿಮಾನಿಗಳಿಂದ ನಿರಂತರ ಬೆಂಬಲವನ್ನು ಅನುಭವಿಸಿದೆ. ಐಪಿಎಲ್‌ನಲ್ಲಿ ಮೂರು ಬಾರಿ ಫೈನಲ್ ಪ್ರವೇಶಿಸಿದ್ದರೂ, ಟ್ರೋಫಿ ಗೆಲ್ಲಲು ವಿಫಲವಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು ಪ್ರತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅವೃತ್ತಿಗಳಲ್ಲಿ ಅತ್ಯಂತ ಸ್ಮರಣೀಯ ಮತ್ತು ರೋಮಾಂಚನಕಾರಿ ಪಂದ್ಯಗಳಲ್ಲಿ ಒಂದಾಗಿರುತ್ತದೆ.

ಮುಂಬೈ ಇಂಡಿಯನ್ಸ್ vs ಆರ್‌ಸಿಬಿ ಪಂದ್ಯದ ವಿವರ

ಸ್ಥಳ ಮತ್ತು ದಿನಾಂಕ: ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು ಗುರುವಾರ, ಏಪ್ರಿಲ್ 11ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

MI vs RCB IPL 2024 Mumbai Indians vs Royal Challengers Bengaluru Match Report Probable Playing 11

ಪಂದ್ಯದ ಸಮಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

ಮುಂಬೈ ಇಂಡಿಯನ್ಸ್ vs ಆರ್‌ಸಿಬಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಆರ್‌ಸಿಬಿ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಯಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಸೌರವ್ ಚೌಹಾಣ್, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರೀಸ್ ಟೋಪ್ಲೆ, ಮಯಾಂಕ್ ಡಾಗರ್, ವೈಶಾಕ್ ವಿಜಯ್‌ಕುಮಾರ್, ಯಶ್ ದಯಾಳ್.

Story first published: Thursday, April 11, 2024, 7:30 [IST]
Other articles published on Apr 11, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+