MI vs RCB IPL 2024: ಐಪಿಎಲ್‌ನ ಬಿಗ್‌ಬಾಸ್‌ಗಳ ಕಾಳಗ; ಟಾಸ್ ವರದಿ, ಆಡುವ 11ರ ಬಳಗ; ವಿಲ್ ಜ್ಯಾಕ್ಸ್ ಎಂಟ್ರಿ
ಗುರುವಾರ, ಏಪ್ರಿಲ್ 11ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 25ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ (ಎಂಐ) ಮತ್ತು ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ತಮ್ಮ ಆರ್‌ಸಿಬಿ ತಂಡದ ಪರ ಚೊಚ್ಚಲ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರು ಮೊದಲ ಕ್ಯಾಪ್ ಹಸ್ತಾಂತರಿಸಿದ್ದಾರೆ. ಆರ್‌ಸಿಬಿ ತಂಡವು ಕ್ಯಾಮೆರಾನ್ ಗ್ರೀನ್ ಅವರನ್ನು ಬದಲಾಯಿಸಿ ವಿಲ್ ಜ್ಯಾಕ್ಸ್ ಅವರನ್ನು ಕರೆತಂದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ದೊಡ್ಡ ಪ್ರತಿಸ್ಪರ್ಧಿಗಳಾಗಿವೆ. ಎರಡೂ ತಂಡಗಳೂ ತಮ್ಮ ಹಿಂದೆ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದು, ಇದೀಗ 2024ರ ಋತುವಿನಲ್ಲಿ ಮತ್ತೆ ಹಣಾಹಣಿಗೆ ಸಜ್ಜಾಗಿವೆ.
ಐಪಿಎಲ್ 2024ರ ಆವೃತ್ತಿಯು ಈವರೆಗೆ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ತಂಡಗಳಿಗೆ ಉತ್ತಮವಾಗಿಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಮತ್ತೊಂದೆಡೆ, ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಆಡಿದ ಐದು ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಒಂದು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದಿದೆ.
ಮುಂಬೈ ಇಂಡಿಯನ್ಸ್ vs ಆರ್‌ಸಿಬಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಮುಂಬೈ ಇಂಡಿಯನ್ಸ್ vs ಆರ್‌ಸಿಬಿ ಆಡುವ 11ರ ಬಳಗ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಟ್ಜಿ, ಆಕಾಶ್ ಮಧ್ವಲ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮಹಿಪಾಲ್ ಲೋಮ್ರೋರ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications