RCB vs MI: ಬುಡಮೇಲಾಯ್ತು ಆರ್‌ಸಿಬಿ ಲೆಕ್ಕಾಚಾರ: ಮೊದಲ ಪಂದ್ಯಕ್ಕೆ ಇಬ್ಬರು ಅಲಭ್ಯ ಖಚಿತ, ಇಬ್ಬರು ಅನುಮಾನ!
ಆರ್‌ಸಿಬಿ ತಂಡ ಐಪಿಎಲ್ 16ನೇ ಆವೃತ್ತಿಯಲ್ಲಿ ಮೊದಲ ಪಂದ್ಯವನ್ನಾಡಲು ಸಜ್ಜಾಗುತ್ತಿದೆ. ಮೊದಲ ಪಂದ್ಯ ಭಾನುವಾರ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆಯಲಿದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್‌ಸಿಬಿ ತಂಡಕ್ಕೆ ಕೆಲ ಆಟಗಾರರು ಅಲಭ್ಯವಾಗುತ್ತಿರುವುದು ಹಿನ್ನಡೆಯುಂಟು ಮಾಡಲಿದೆ. ಅದರಲ್ಲೂ ಇಬ್ಬರರು ಸ್ಟಾರ್ ಆಟಗಾರರು ಆರಂಭಿಕ ಪಂದ್ಯಕ್ಕೆ ಅಲಭ್ಯವಾಗುವುದು ಖಚಿತವಾಗಿದೆ.
ಮುಂಬೈ ಇಂಡಿಯನ್ಸ ವಿರುದ್ಧ ನಡೆಯಲಿರುವ ಮೊದಲ ಪಂದ್ಯಕ್ಕೆ ಆರ್‌ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರಾದ ಜೋಶ್ ಹೇಜಲ್‌ವುಡ್ ಹಾಗೂ ವನಿಂದು ಹಸರಂಗ ಅಲಭ್ಯವಾಗುವುದು ಈಗಾಗಲೇ ಖಚಿತವಾಗಿದೆ. ಇವರಿಬ್ಬರು ಮಾತ್ರವಲ್ಲದೆ ಮತ್ತಿಬ್ಬರು ಸ್ಟಾರ್ ಆಟಗಾರರು ಕೂಡ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಡುವ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ. ಈ ಇಬ್ಬರು ಕೂಡ ಆಡದಿದ್ದರೆ ಆರ್‌ಸಿಬಿ ಬಳಗಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಜೋಶ್ ಹೇಜಲ್‌ವುಡ್ ಗಾಯದ ಕಾರಣದಿಂದಾಗಿ ಈ ಬಾರಿಯ ಐಪಿಎಲ್‌ನ ಆರಂಬಿಕ ಹಂತದ ಕೆಲ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಸ್ಟಾರ್ ವೇಗಿ ಆರಂಭಿಕ 7 ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ವನಿಂದು ಹಸರಂಗ ರಾಷ್ಟ್ರೀಯ ತಂಡದ ಜವಾಬ್ಧಾರಿಯ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡದ ಆರಂಭಿಕ ಕೆಲ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಗ್ಲೆನ್ ಮ್ಯಾಕ್ಸ್‌ವೆಲ್ ಅನುಮಾನ: ಇನ್ನು ಆರ್‌ಸಿಬಿ ತಂಡದ ಪ್ರಮುಖ ಅಸ್ತ್ರವಾಗಿರುವ ಆಲ್‌ರೌಂಡರ್ ಮೊದಲ ಪಂದ್ಯದಲ್ಲಿ ಆಡುವ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ. ಗಾಯದಿಂದ ಚೇತರಿಸಿಕೊಂಡು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೆ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಆರಂಭಿಕ ಪಂದ್ಯದಲ್ಲಿ ಅವರು ಆಡುವ ಬಗ್ಗೆ ಅನುಮಾನಗಳು ಮೂಡಿದೆ. ಆದರೆ ಆರ್‌ಸಿಬಿ ತಂಡದ ಅಭ್ಯಾಸ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಆಡಿರುವ ಕಾರಣ ಅಭಿಮಾನಿಗಳಿಗೆ ಒಂದುಇ ಭರವಸೆ ಇದ್ದೇ ಇದೆ.
ಗಾಯಗೊಂಡಿದ್ದಾರೆ ರಜತ್ ಪಾಟಿದಾರ್: ಇನ್ನು ಆರ್‌ಸಿಬಿ ತಂಡದ ಯುವ ಆಟಗಾರ ರಜತ್ ಪಾಟಿದಾರ್ ಕಳೆದ ಐಪಿಎಲ್ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಆದರೆ ಈ ಬಾರಿ ಐಪಿಎಲ್ ಟೂರ್ನಿಯ ಆರಂಭಕ್ಕೂ ಮುನ್ನ ಅವರು ಗಾಯಗೊಂಡಿದ್ದು ಅಭ್ಯಾಸದಲ್ಲಿಯೂ ಕಾಣಿಸಿಕೊಂಡಿಲ್ಲ. ಆದರೆ ರಜತ್ ಪಾಟಿದಾರ್ ಅಲಭ್ಯತೆಯ ಬಗ್ಗೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಯಾವುದೇ ಸ್ಪಷ್ಟತೆ ನೀಡಿಲ್ಲ.
ಕುತೂಹಲ ಮೂಡಿಸಿದೆ ಆರ್‌ಸಿಬಿ ಆಡುವ ಬಳಗದ ಆಯ್ಕೆ: ಮುಂಬೈ ಇಂಡಿಯ್ಸ್ ತಂಡದ ವಿರುದ್ಧ ಕೆಲ ಪ್ರಮುಖ ಆಟಗಾರರು ಅಲಭ್ಯವಾಗಲಿರುವ ಕಾರಣದಿಂದಾಗಿ ಆರ್‌ಸಿಬಿ ತಂಡ ಯಾವ ರೀತಿಯ ಸಂಯೋಜನೆಯೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಆಟಗಾರರ ಬದಲಿಗೆ ಯಾರಿಗೆ ಆಡುವ ಬಳಗದಲ್ಲಿ ಅವಕಾಶ ದೊರೆಯಲಿದ್ದು ಆ ಅವಕಾಶವನ್ನು ಅವರು ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದಕ್ಕೆ ಭಾನುವಾರ ಉತ್ತರ ದೊರೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications