Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs RR IPL 2024: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ

ಸೋಮವಾರ, ಏಪ್ರಿಲ್ 1ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 14ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಅತಿಥೇಯ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೆಣಸಾಡುತ್ತಿದೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

MI vs RR IPL 2024 Mumbai Indians vs Rajasthan Royals Match Toss Report And Playing 11

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ತಮ್ಮ ಎರಡೂ ಆರಂಭಿಕ ಪಂದ್ಯಗಳಲ್ಲಿ ಸೋತಿರುವ ಕಾರಣ ತಮ್ಮ ಗೆಲುವಿನ ಖಾತೆಯನ್ನು ಇನ್ನೂ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಸೊರಗುತ್ತಿದೆ.

ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಮ್ಮ ಆರಂಭಿಕ ಎರಡು ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ವಿರುದ್ಧ ಗೆಲುವಿನ ಮೂಲಕ ಈ ಋತುವಿನ ಅದ್ಭುತ ಆರಂಭವನ್ನು ಹೊಂದಿದ್ದಾರೆ.

ಐಪಿಎಲ್ 2024ರಲ್ಲಿ ಮುಂಬೈ ಇಂಡಿಯನ್ಸ್ ತವರು ಮೈದಾನದಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡುತ್ತಿರುವುದರಿಂದ, ಋತುವಿನ ಮೊದಲ ಗೆಲುವನ್ನು ಎದುರು ನೋಡುತ್ತಿದ್ದಾರೆ.

MI vs RR IPL 2024 Mumbai Indians vs Rajasthan Royals Match Toss Report And Playing 11

ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್: ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ

ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2024ರ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಆಡುವ 11ರ ಬಳಗ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಜೆರಾಲ್ಡ್ ಕೊಯೆಟ್ಜಿ, ಆಕಾಶ್ ಮಧ್ವಲ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ಕ್ವೆನಾ ಮಫಕಾ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ನಾಂದ್ರೆ ಬರ್ಗರ್, ಅವೇಶ್ ಖಾನ್.

Story first published: Monday, April 1, 2024, 19:07 [IST]
Other articles published on Apr 1, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+