MI vs RR IPL 2024: ಬೌಲ್ಟ್, ಚಹಾಲ್ ಬೌಲಿಂಗ್‌ಗೆ ತತ್ತರಿಸಿದ ಮುಂಬೈ ಬ್ಯಾಟರ್ಸ್; ರಾಜಸ್ಥಾನ್‌ಗೆ ಸಾಧಾರಣ ಗುರಿ
ಸೋಮವಾರ, ಏಪ್ರಿಲ್ 1ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 14ನೇ ಪಂದ್ಯದಲ್ಲಿ ಅತಿಥೇಯ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 125 ರನ್‌ಗಳನ್ನು ಗಳಿಸಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 126 ರನ್‌ಗಳ ಸಾಧಾರಣ ಗುರಿ ನೀಡಿದೆ. ಅಲ್ಲದೆ, ತವರಿನ ಅಂಗಳದಲ್ಲಿ ಮತ್ತೊಂದು ಸೋಲಿನ ಸುಳಿಗೆ ಸಿಲುಕಿದೆ.

ತವರಿನ ವಾಂಖೆಡೆ ಅಂಗಳಿದಲ್ಲಿಯೂ ಅಬ್ಬರಿಸಲು ಮುಂಬೈ ಇಂಡಿಯನ್ಸ್ ಬ್ಯಾಟರ್‌ಗಳು ವಿಫಲರಾದರು. ಅಗ್ರ ಕ್ರಮಾಂಕದ ಮೂವರು ಬ್ಯಾಟರ್‌ಗಳು ಗೋಲ್ಡನ್ ಡಕ್‌ಗೆ ಔಟಾದರು.
3.3 ಓವರ್‌ಗಳಲ್ಲಿ 20 ರನ್ ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮಾಜಿ ನಾಯಕ ರೋಹಿತ್ ಶರ್ಮಾ, ನಮನ ಧಿರ್ ಮತ್ತು ಡೆವಾಲ್ಡ್ ಬ್ರೆವಿಸ್ ಸೊನ್ನೆಗೆ ಔಟಾದರು. ಆರಂಭಿಕ ಇಶಾನ್ ಕಿಶನ್ ಅವರು 14 ಎಸೆತಗಳಲ್ಲಿ 16 ರನ್ ಗಳಿಸಿದರು.
ನಂತರ ಜೊತೆಗೂಡಿದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ತಿಲಕ್ ವರ್ಮಾ ಕುಸಿದಿದ್ದ ತಂಡವನ್ನು ಮೇಲೆತ್ತಲು ಪ್ರಯತ್ನಿಸಿದರು. ಈ ಜೋಡಿ 5ನೇ ವಿಕೆಟ್‌ಗೆ 56 ರನ್‌ಗಳ ಜೊತೆಯಾಟ ನಿರ್ಮಿಸಿತು. ಹಾರ್ದಿಕ್ ಪಾಂಡ್ಯ 21 ಎಸೆತಗಳಲ್ಲಿ 6 ಬೌಂಡರಿ ಸಮೇತ 34 ರನ್ ಗಳಿಸಿದರು. ಇನ್ನು ತಿಲಕ್ ವರ್ಮಾ 29 ಎಸೆತಗಳಲ್ಲಿ 2 ಸಿಕ್ಸರ್‌ಗಳ ಸಮೇತ 32 ರನ್ ಬಾರಿಸಿದರು,
ಉಳಿದಂತೆ ಪಿಯೂಷ್ ಚಾವ್ಲಾ 3 ರನ್, ಟಿಮ್ ಡೇವಿಡ್ 17 ರನ್, ಜೆರಾಲ್ಡ್ ಕೊಯಟ್ಜಿ 4 ರನ್, ಜಸ್ಪ್ರೀತ್ ಬುಮ್ರಮಾ ಮತ್ತು ಆಕಾರ್ಶ ತಲಾ 4 ರನ್ ಗಳಿಸಿದರು.
ಇನನ್ಉ ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಟ್ರೆಂಟ್ ಬೌಲ್ಟ್ 4 ಓವರ್‌ಗಳಲ್ಲಿ 11 ರನ್ ನೀಡಿ 3 ವಿಕೆಟ್ ಪಡೆದರೆ, ಯುಜ್ವೇಂದ್ರ ಚಹಾಲ್ 4 ಓವರ್‌ಗಳಲ್ಲಿ 11ರನ್ ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ನಾಂದ್ರೆ ಬರ್ಗರ್ 2 ವಿಕೆಟ್ ಮತ್ತು ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications