ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ಮುಖಾಮಯಖಿಯಾಗಿದ್ದು ಪೈಪೋಟಿಯ ಕದನ ಏರ್ಪಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭದಲ್ಲಿ ಬ್ಯಾಟಿಂಗ್ ನಡೆಸಿತು. ಆದರೆ ಈ ಪಂದ್ಯದಲ್ಲು ರಾಜಸ್ಥಾನ್ ರಾಯಲ್ಸ್ ಪರವಾಗಿ ಆರಂಭಿಕ ಆಟಗಾರ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮಾತ್ರವೇ ಅಮೋಘ ಪ್ರದರ್ಶನ ನೀಡಿದ್ದು ಉಳಿದ ಬ್ಯಾಟರ್‌ಗಳು ನೀರಸ ಪ್ರದರ್ಶನ ನೀಡಿದ್ದಾರೆ.
ಆದರೆ ಯಶಸ್ವಿ ಜೈಸ್ವಾಲ್ ಕೊನೆಯ ತನಕವೂ ಹೋರಾಟ ನಡೆಸಿದ್ದು ಅಮೋಘ ಶತಕ ಸಿಡಿಸಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಶತಕ ಸಿಡಿಸಿದ ನಾಲ್ಕನೇ ಕಿರಿಯ ಬ್ಯಾಟರ್ ಎನಿಸಿದ್ದಾರೆ ಜೈಸ್ವಾಲ್. ಮೂಲತಃ ಮುಂಬೈನವರಾದ ಯಶಸ್ವಿ ಜಸ್ವಾಲ್ ತನ್ನ ತವರಿನ ಮೈದಾನದಲ್ಲಿ ಸಿಡಿಸಿದ ಈ ಶತಕಕ್ಕೆ ಪ್ರೇಕ್ಷಕರಿಂದಲೂ ಭಾರೀ ನಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಎದುರಾಳಿ ತಂಡವಾಗಿರುವ ಮುಂಬೈ ಇಂಡಿಯನ್ಸ್ ಯಶಸ್ವಿ ಜೈಸ್ವಾಳ್ ಅವರ ಈ ಶತಕಕ್ಕೆ ವಿಶೇಷ ಪದಗಳಿಂದ ಪ್ರಶಂಸೆ ವ್ಯಕ್ತಪಡಿಸಿದೆ.

ಈ ಪಂದ್ಯದಲ್ಲಿ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ ಅವರು ಶತಕದ ಬಳಿಕ ಸಂಭ್ರಮಿಸುತ್ತಿರುವ ಫೋಟೊವನ್ನು ಹಂಚಿಕೊಂಡಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಈ ರೀತಿಯಾಗಿ ಬರೆದುಕೊಂಡಿದೆ. "ಅದ್ಭುತವಾಗಿ ಆಡಿದಿರಿ ಯಶಸ್ವಿ ಜೈಸ್ವಾಲ್. ಮುಂಬೈ ಮೈದಾನದಿಂದ ಚೊಚ್ಚಲ ಐಪಿಎಲ್ ಶತಕದವರೆಗೆ" ಎಂದು ಮುಂಬೈ ಇಂಡಿಯನ್ಸ್ ಟ್ವೀಟ್‌ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದೆ.
ಈ ಪಂದ್ಯದಲ್ಲಿ 62 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 124 ರಬ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 16 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಒಳಗೊಂಡಿತ್ತು. ಯಶಸ್ವಿ ಜೈಸ್ವಾಲ್ ಹೊರತುಪಡಿಸಿದರೆ ಉಳಿದ ಯಾವ ಆಟಗಾರನ ಬ್ಯಾಟ್‌ನಿಂದ ಕೂಡ 18ಕ್ಕಿಂತ ಹೆಚ್ಚಿನ ರನ್ ಹರಿದು ಬಂದಿಲ್ಲ ಎಂಬುದು ವಿಶೇಷ. ಹಾಗಿದ್ದರೂ ತಂಡ 212 ರನ್‌ಗಳ ಬೃಹತ್ ಮೊತ್ತಗಳಿಸಲು ಸಾದ್ಯವಾಗಿದ್ದು ಅಷ್ಟರ ಮಟ್ಟಿಗೆ ಈ ಪಂದ್ಯದಲ್ಲಿ ಜೈಸ್ವಾಲ್ ಅಬ್ಬರಿಸಿದ್ದಾರೆ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯ, ರಿಲೆ ಮೆರೆಡಿತ್, ಅರ್ಷದ್ ಖಾನ್
ಬೆಂಚ್: ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ರಮಣ್‌ದೀಪ್ ಸಿಂಗ್, ಜೇಸನ್ ಬೆಹ್ರೆನ್‌ಡಾರ್ಫ್, ಸಂದೀಪ್ ವಾರಿಯರ್, ಹೃತಿಕ್ ಶೋಕೀನ್, ಆಕಾಶ್ ಮಧ್ವಲ್, ದುವಾನ್ ಜಾನ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಬೆಂಚ್: ಡೊನಾವೊನ್ ಫೆರೇರಾ, ಮುರುಗನ್ ಅಶ್ವಿನ್, ರಿಯಾನ್ ಪರಾಗ್, ಕುಲದೀಪ್ ಯಾದವ್, ಕುಲದೀಪ್ ಸೇನ್, ಆಡಮ್ ಜಂಪಾ, ಜೋ ರೂಟ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕೆಎಂ ಆಸಿಫ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್