Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rohit Sharma: ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಲು ಮುಂದಾದ ಮುಂಬೈ ಇಂಡಿಯನ್ಸ್: ಕಾರಣ ಇಲ್ಲಿದೆ!

ಮುಂಬೈ ಇಂಡಿಯನ್ಸ್ ತಂಡ ಭಾನುವಾರ ಈ ಬಾರಿಯ ಆವೃತ್ತಿಯ 8ನೇ ಪಂದ್ಯವನ್ನಾಡಲಿದೆ. ರಾಜಸ್ತಾನ್ ರಾಯಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಯೇ ನಡೆಯಲಿದ್ದು ಪಂದ್ಯ ಕುತೂಹಲ ಕೆರಳಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ಫ್ರಾಂಚೈಸಿ ತನ್ನ ತಂಡದ ನಾಯಕನಿಗೆ ವಿಶೇಷ ಗೌರವ ಸಲ್ಲಿಸಲು ಸಿದ್ಧತೆ ನಡೆಸಿದೆ. ಇದಕ್ಕೆ ಕಾರಣವೂ ಇದೆ.

ರೋಹಿತ್ ಶರ್ಮಾ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವು ನಾಯಕ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಅದಕ್ಕೆ ಕಾರಣ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್ ಶರ್ಮಾ ನೇತೃತ್ವದಲ್ಲಿ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಮುಂಬೈ ಇಂಡಿಯನ್ಸ್ ತಂಡದ ಈ ಶ್ರೇಷ್ಠ ನಾಯಕ ಇದೀಗ ಐಪಿಎಲ್‌ನಲ್ಲಿ ಎಂಐ ತಂಡವನ್ನು 10ನೇ ವರ್ಷದಲ್ಲಿ ಮುನ್ನಡೆಸುತ್ತಿದ್ದಾರೆ. ಈಬ ಕಾರಣಕ್ಕಾಗಿಯೇ ಮುಂಬೈ ಇಂಡಿಯನ್ಸ ರೋಹಿತ್ ಶರ್ಮಾಗೆ ಗೌರವ ನೀಡಲು ಮುಂದಾಗಿದೆ.

MI vs RR: Mumbai Indians will pay tribute to captain Rohit Sharma

ಈ ವಿಚಾರವನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಶನಿವಾರ ತನ್ನ ಸಾಮಾಜಿಕ ಜಾಲತಾಂ ಖಾತೆಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭಾನುವಾರ ನಡೆಯಲಿರುವ ಪಂದ್ಯ ನಾಯಕ ರೋಹಿತ್ ಶರ್ಮಾಗೆ ಅರ್ಪಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

2013ರಲ್ಲಿ ರಿಕಿ ಪಾಂಟಿಂಗ್ ಅವರಿಂದ ರೋಹಿತ್ ಶರ್ಮಾ ನಾಯಕತ್ವವನ್ನು ವಹಿಸಿಕೊಂಡಿದ್ದರು. ಆ ಆವೃತ್ತಿಯಲ್ಲಿ ಪಾಂಟಿಂಗ್ ನಾಯಕತ್ವದಲ್ಲಿ ಪರದಾಡಿದ್ದ ಮುಂಬೈ ಇಂಡಿಯನ್ಸ್ ತಂಡ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭರ್ಜರಿ ಯಶಸ್ಸು ಸಾಧಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟವನ್ನೇರಿತು. ಅದಾದ ಬಳಿಕ ನಾಲಗ್ಕು ಬಾರಿ ಅಂದರೆ ಒಟ್ಟು ಐದು ಬಾರಿ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಚಾಂಪಿಯನ್ಸ್ ಪಟ್ಟಕ್ಕೇರಿದೆ.

ಇನ್ನು ಈ ಬಾರಿಯ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ ತಂಡದಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ಆರಂಬಿಕ ಎರಡು ಪಂದ್ಯಗಳನ್ನು ಸೋಲು ಕಾಣುವ ಮೂಲಕ ಕಳಪೆ ಆರಂಭ ಪಡೆದ ಮುಂಬೈ ಇಂಡಿಯನ್ಸ್ ನಂತರದ ಮೂರು ಪಂದ್ಯಗಳಲ್ಲಿ ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸಿತು. ಈ ಮೂಲಕ ಮತ್ತೆ ಲಯಕ್ಕೆ ಮರಳಿತು ಎಂದುಕೊಳ್ಳುವಾಗ ಎಂಎಸ್ ಮತ್ತೆ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಏಳು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ 3 ಗೆಲುವು ಹಾಗೂ 4 ಸೋಲು ಅನುಭವಿಸಿದ್ದು 6 ಅಂಕಗಳನ್ನು ಹೊಂದಿದೆ. ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್

Story first published: Saturday, April 29, 2023, 17:31 [IST]
Other articles published on Apr 29, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+