MI vs SRH IPL 2024: ಮುಂಬೈ vs ಹೈದರಾಬಾದ್ ನಡುವೆ ಹೈ-ವೋಲ್ಟೇಜ್ ಪಂದ್ಯ; ಸಂಭಾವ್ಯ ಆಡುವ 11ರ ಬಳಗ
ಸೋಮವಾರ, ಮೇ 6ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 55ನೇ ರೋಚಕ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಮತ್ತು ಪ್ರವಾಸಿ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಲು ಸಜ್ಜಾಗಿವೆ.
ಉಭಯ ತಂಡಗಳು ಗುಂಪು ಹಂತದ ತಮ್ಮ ಎರಡನೇ ಪಂದ್ಯದಲ್ಲಿ ಮತ್ತೊಂದು ಹೈ-ವೋಲ್ಟೇಜ್ ಮತ್ತು ಹೈ-ಸ್ಕೋರಿಂಗ್ ಕಾಳಗದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹಿಂದಿನ ಪಂದ್ಯದಲ್ಲಿ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ದಾಖಲೆ ಮೊತ್ತದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿತ್ತು.

ಆ ವೇಳೆ ಐಪಿಎಲ್ ಪಂದ್ಯಾವಳಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಇದುವರೆಗೆ ಗಳಿಸಿದ 277 ರನ್‌ಗಳ ಅತ್ಯಧಿಕ ಮೊತ್ತದ ದಾಖಲೆಯನ್ನು ನೋಂದಾಯಿಸಿತು. ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಗೆಲುವಿನೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ತಂಡವು ಸೋಮವಾರವೂ ಅದೇ ಆತ್ಮವಿಶ್ವಾಸದಲ್ಲಿದೆ.
ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿಕೊಂಡ ನಂತರ, ಮುಂಬೈ ಇಂಡಿಯನ್ಸ್ ಕಾಣೆಯಾದಂತೆ ಕಾಣುತ್ತದೆ. ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ ಉಳಿದ ಯಾರೂ ಸ್ಥಿರವಾದ ಪ್ರದರ್ಶನ ನೀಡುತ್ತಿಲ್ಲ.
ಐಪಿಎಲ್ 2024ರಲ್ಲಿ ಮುಂಬೈ ಇಂಡಿಯನ್ಸ್ ಇದುವರೆಗೆ ಆಡಿದ 11 ಪಂದ್ಯಗಳಲ್ಲಿ 3 ಗೆಲುವು ಮತ್ತು 8 ಸೋಲು ಅನುಭವಿಸಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಮತ್ತೊಂದೆಡೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಆಡಿದ 10 ಪಂದ್ಯಗಳಲ್ಲಿ 6 ಗೆಲುವು ಮತ್ತು 4 ಸೋಲು ಕಂಡಿದ್ದು, 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳ ಆಕ್ರಮಣಕಾರಿ ವಿಧಾನವು ಐಪಿಎಲ್ ಪಂದ್ಯಾವಳಿ ಹೊಸ ಮಜಲನ್ನು ರೂಪಿಸಿದೆ. ಕ್ರೀಸ್‌ಗೆ ಬರುವ ಎಲ್ಲರೂ ಬಿಗ್-ಶಾಟ್‌ಗಳ ಮೂಲಕ ಮೊತ್ತವನ್ನು ಹೆಚ್ಚಿಸಲು ಎದುರು ನೋಡುತ್ತದೆ. ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ನಿತೀಶ್ ರೆಡ್ಡಿ ಸ್ಫೋಟಕ ಆಟವಾಡುತ್ತಾರೆ.
ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ದೊಡ್ಡ ಆಟಗಾರರಿದ್ದರೂ, ಇದುವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ಟಿಮ್ ಡೇವಿಡ್ ಅವರಂತಹ ಆಟಗಾರರನ್ನು ಒಳಗೊಂಡಿದೆ.

MI vs SRH: ಹೆಡ್-ಟು-ಹೆಡ್ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇದುವರೆಗೆ 22 ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 12 ಪಂದ್ಯಗಳನ್ನು ಗೆದ್ದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ 10 ಪಂದ್ಯಗಳನ್ನು ಗೆದ್ದಿದೆ.
ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ
ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೋಯಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ 11ರ ಬಳಗ
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನ್ಮೋಲ್‌ಪ್ರೀತ್ ಸಿಂಗ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications