Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

MI vs SRH: ಪುಟಿದೇಳುವ ಕನಸಿನಲ್ಲಿ ಮುಂಬೈ ಇಂಡಿಯನ್ಸ್‌

ಮುಂಬೈ: 19ನೇ ಆವೃತ್ತಿ ಐಪಿಎಲ್‌ನ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (ಎಂಐ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್‌) ತಂಡಗಳು ಕಾದಾಟ ನಡೆಸಲಿವೆ. ಬುಧವಾರ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪುಟಿದೇಳುವ ಮೂಲಕ ಗೆಲುವಿನ ಟ್ರ್ಯಾಕ್‌ಗೆ ಮರಳುವ ಕನಸು ಕಾಣುತ್ತಿದೆ.

ಸನ್‌ರೈಸರ್ಸ್‌ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ 25 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಎಸ್‌ಆರ್‌ಎಚ್‌ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮುಂಬೈ 25 ಗೆಲುವು ದಾಖಲಿಸಿದೆ. ಆದರೆ ಈಗಿನ ಪ್ರದರ್ಶನವನ್ನು ನೋಡಿದರೆ ಸನ್‌ ತಂಡದ ಕೈ ಮೇಲಾಗುತ್ತದೆ.

MI vs SRH

ಪ್ಲೇಆಫ್‌ ಚಿತ್ರಣ

ಸನ್‌ರೈಸರ್ಸ್‌ ಹೈದರಾಬಾದ್ ತಂಡ ಈಗಾಗಲೇ ಆಡಿದ 8 ಪಂದ್ಯಗಳಲ್ಲಿ 5 ಜಯ, 3 ಸೋಲು ಕಂಡಿದ್ದು, 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್‌ ಆಡಿದ 7 ಪಂದ್ಯಗಳಲ್ಲಿ 2 ಜಯ, 5 ಸೋಲು ಕಂಡಿದ್ದು 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮುಂಬೈ ತಂಡ ಪ್ಲೇ ಆಫ್‌ ಪ್ರವೇಶಿಸಲು ಮುಂದಿನ ಎಲ್ಲ ಪಂದ್ಯಗಳು ಮಹತ್ವದಾಗಿದೆ.

ಒತ್ತಡದಲ್ಲಿ ಮುಂಬೈ

ತವರು ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಸಂಘಟಿತ ಆಟವನ್ನು ಆಡುವ ಕನಸು ಕಾಣುತ್ತಿದೆ. ಮುಂಬೈ ತಂಡ ಪ್ಲೇ ಆಫ್‌ ಪ್ರವೇಶ ಪಡೆಯಲು ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲುವು ಅನಿವಾರ್ಯವಾಗಿದೆ. ಗಾಯಕ್ಕೆ ತುತ್ತಾಗಿದ್ದ ರೋಹಿತ್ ಶರ್ಮಾ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ. ಭರವಸೆಯ ಆಟಗಾರರಾದ ಕ್ವಿಂಟನ್ ಡಿಕಾಕ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.

MI vs SRH

ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ಸಹ ಬಲಿಷ್ಠವಾಗಿದೆ. ಆದರೆ ಶಿಸ್ತುಬದ್ಧ ದಾಳಿ ನಡೆಸುವ ಅನಿವಾರ್ಯತೆ ಇದೆ. ಜಸ್ಪ್ರೀತ್ ಬುಮ್ರಾ ವಿಕೆಟ್‌ ಪಡೆಯುವಲ್ಲಿ ಹಿಂದೆ ಬಿದ್ದಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಅಶ್ವನಿ ಕುಮಾರ್‌ ವಿಕೆಟ್‌ ಬೇಟೆ ನಡೆಸುತ್ತಿದ್ದಾರೆ. ಸ್ಪಿನ್ ವಿಭಾಗದಲ್ಲಿ ಎ.ಎಂ. ಗಜನ್‌ಫರ್ ಹಾಗೂ ಮಿಚೆಲ್ ಸ್ಯಾಂಟ್ನರ್‌ ಮಧ್ಯದ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿದರೆ 2 ಅಂಕದ ಕನಸು ನನಸಾಗುತ್ತದೆ.

ಅಭಿಷೇಕ್‌ ಆಕರ್ಷಣೆ

ಸನ್‌ರೈಸರ್ಸ್‌ ತಂಡದ ಟಾಪ್ ಆರ್ಡರ್‌ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಟ್ರಾವಿಸ್ ಹೆಡ್‌ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (380), ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಕ್ ಕ್ಲಾಸೆನ್ (349), ಇಶಾನ್‌ ಕಿಶನ್ (312) ರನ್‌ ಕಲೆ ಹಾಕಿ ಮಿಂಚಿದ್ದಾರೆ. ಇನ್ನು ವೇಗದ ಬೌಲರ್‌ಗಳಾದ ಇಶಾನ್‌ ಮಲಿಂಗ್, ಸಕೀಬ್ ಹುಸೇನ್‌, ಪ್ಯಾಟ್ ಕಮಿನ್ಸ್‌, ಹರ್ಷ್ ದುಬೆ, ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್‌ ಬೇಟೆ ನಡೆಸಬೇಕಿದೆ. ಅಂದಾಗ ಅಂಕಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ನನಸಾಗುತ್ತದೆ.

Story first published: Tuesday, April 28, 2026, 20:12 [IST]
Other articles published on Apr 28, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+