ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬೆನ್ ಸ್ಟೋಕ್ಸ್ ಇಂಗ್ಲೆಂಡ್‌ನ ಸಾರ್ವಕಾಲಿಕ ಶ್ರೇಷ್ಠ ನಾಯಕನಾಗಲಿದ್ದಾರೆ ಎಂದು ಭವಿಷ್ಯ ನುಡಿದ ಮಾಜಿ ಕ್ರಿಕೆಟಿಗ

Michael Atherton prises Ben Stokes said he is going to be one of the greatest-ever England captain

ಇಂಗ್ಲೆಂಡ್ ತಂಡ ಟೆಸ್ಟ್ ಮಾದರಿಯಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಾ ಮಿಂಚುತ್ತಿದೆ. ಬೆನ್ ಸ್ಟೋಕ್ಸ್ ನಾಯಕತ್ವ ಹಾಗೂ ಕೋಚ್ ಬ್ರೆಂಡನ್ ಮೆಕ್ಕಲಮ್ ಅವರ ಮಾರ್ಗದರ್ಶನದಲ್ಲಿ ಇಂಗ್ಲೆಂಡ್ ತಂಡದ ಆಟದ ಶೈಲಿ ಸಂಪೂರ್ಣವಾಗಿ ಬದಲಾಗಿದೆ. ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿರುವ ಇಂಗ್ಲೆಂಡ್ ಇದರಲ್ಲಿ ಸತತವಾಗಿ ಯಶಸ್ಸು ಸಾಧಿಸುತ್ತಿದೆ. ಪಾಕಿಸ್ತಾನದ ವಿರುದ್ಧದ ಸರಣಿಯಲ್ಲಿಯೂ ಗೆಲುವು ಸಾಧಿಸಿರುವ ಇಂಗ್ಲೆಂಡ್ ಎಲ್ಲರ ಚಿತ್ತವನ್ನು ಮತ್ತೊಮ್ಮೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಸಂದರ್ಭದಲ್ಲಿ ಸಾಕಷ್ಟು ವಿಶ್ಲೇಷಣೆಗಳು ನಡೆಯುತ್ತಿದ್ದು ಅನೇಕ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಮಾಜಿ ಕ್ರಿಕೆಟಿಗ ಮೈಕಲ್ ಅಥರ್ಟನ್ ಪ್ರತಿಕ್ರಿಯಿಸಿದ್ದು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬಗ್ಗೆ ವಿಶೇಷ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಆಲ್‌ರೌಂಡರ್ ಆಟಗಾರ ಇಂಗ್ಲೆಂಡ್ ತಂಡದ ಸರ್ವಾಕಾಲಿಕ ಶ್ರೇಷ್ಠ ನಾಯಕನಾಗುವ ಸಂಭವವಿದೆ ಎಂದಿದ್ದಾರೆ.

ಭಾರತದ ಅತ್ಯುತ್ತಮ ODI 11ರ ಬಳಗ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಸ್ಟಾರ್ ಬ್ಯಾಟರ್‌ಗಿಲ್ಲ ಸ್ಥಾನ!ಭಾರತದ ಅತ್ಯುತ್ತಮ ODI 11ರ ಬಳಗ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಸ್ಟಾರ್ ಬ್ಯಾಟರ್‌ಗಿಲ್ಲ ಸ್ಥಾನ!

"ಅವರು ಇಂಗ್ಲೆಂಡ್ ಟೆಸ್ಟ್ ತಂಡವನ್ನು ಸಂಪೂರ್ಣವಾಗಿ ಬದಲಾಯಿಸಿದ್ದಾರೆ. ಹಿಂದಿನ ಅದೇ ಆಟಗಾರರಿದ್ದರು ಕೂವ ಅವರಲ್ಲಿ ವಿಶೇಷ ಹುರುಪು ಮೂಡಿಸಿದ್ದಾರೆ ಸ್ಟೋಕ್ಸ್. ಆಶಸ್ ಹಾಗೂ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾಗಿಯಾಗಿದ್ದ ಅದೇ ಆಟಗಾರರು ಈ ತಂಡದಲ್ಲಿದ್ದಾರೆ. ಎರಡ್ಮೂರು ಬದಲಾವಣೆಗಳನ್ನು ಮಾತ್ರವೇ ಕಾಣಬಹುದು. ಆದರೆ ಆಟದ ಶೈಲಿ ಮಾತ್ರ ಸಂಪೂರ್ಣ ಬದಲಾಗಿದೆ. ಇದು ನಾಯಕತ್ವವನ್ನು ಹೇಳುತ್ತದೆ" ಎಂದಿದ್ದಾರೆ ಅಥರ್ಟನ್.

"ನಾಯಕನಾಗಿ ಜವಾಬ್ಧಾರಿ ವಹಿಸಿಕೊಂಡ ತಕ್ಷಣವೇ ಇಷ್ಟು ದೊಡ್ಡ ಪ್ರಮಾಣದ ಬದಲಾವಣೆಗೆ ಕಾರಣವಾದ ಯಾವುದೇ ನಾಯಕ ನನಗೆ ನೆನಪಿಗೆ ಬರುತ್ತಿಲ್ಲ. ಕೇವಲ ಇಂಗ್ಲೆಂಡ್ ಮಾತ್ರವಲ್ಲ ವಿಶ್ವ ಮಟ್ಟದಲ್ಲಿಯೂ ಯಾರೂ ಕೂಡ ಇಲ್ಲ" ಎಂದಿದ್ದಾರೆ ಇಂಗ್ಲೆಂಡ್ ತಂಡದ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಮೈಕಲ್ ಅಥರ್ಟನ್.

ಪಾಕಿಸ್ತಾನ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ನಾಲ್ಕನೇ ದಿನಕ್ಕೆ ಅಂತ್ಯವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ತೀವ್ರ ಪೈಪೋಟಿಯನ್ನು ನೀಡಿತಾದರೂ ಅಂತಿಮ ಹಂತದಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಸರಣಿ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಐತಿಹಾಸಿಕ ಸರಣಿ ಗೆಲುವು ಸಾಧಿಸಿದೆ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡ. ಈ ಸೋಲಿನ ಬಳಿಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮಾತನಾಡಿದ್ದು ಬ್ಯಾಟಿಂಗ್ ವಿಭಾಗದ ವೈಫಲ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನ ತಂಡಕ್ಕೆ ಗೆಲ್ಲುವ ಉತ್ತಮ ಅವಕಾಶವಿತ್ತು. ನಾಲ್ಕನೇ ದಿನದಾಟದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳಿಂದ 157 ರನ್‌ಗಳನ್ನು ಗಳಿಸುವ ಸವಾಲು ಪಡೆದುಕೊಂಡಿತ್ತು. ಒಂದು ಹಂತದಲ್ಲಿ ಗೆಲುವಿನ ಭರವಸೆ ಮೂಡಿಸಿತ್ತಾದರೂ ಮತ್ತೊಮ್ಮೆ ಹಠಾತ್ ಕುಸಿತಕ್ಕೆ ಒಳಗಾಗಿ 26 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ 281 ರನ್‌ಗಳನ್ನು ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸಿದ್ದು 202 ರನ್ ಮಾತ್ರ. ನಂತರ ಎರಡೇ ಇನ್ನಿಂಗ್ಸ್‌ನಲ್ಲಿ 275 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿತ್ತು. ಹೀಗಾಗಿ ಪಾಕಿಸ್ತಾನ ಅಂತಿಮ ಇನ್ನಿಂಗ್ಸ್‌ನಲ್ಲಿ 354 ರನ್‌ಗಳನ್ನು ಗಳಿಸುವ ಸವಾಲು ಸ್ವೀಕರಿಸಿತ್ತು. ಆದರೆ ಪಾಕಿಸ್ತಾನ 328 ರನ್‌ಗಳಿಸಿ ಆಲೌಟ್ ಆಗುವ ಊಲಕ ಸೋಲು ಅನುಭವಿಸಿದೆ.

PAK Vs ENG 2nd Test: ರೋಚಕ ಗೆಲುವು ಸಾಧಿಸಿದ ಇಂಗ್ಲೆಂಡ್‌, ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಸರಣಿ ಜಯPAK Vs ENG 2nd Test: ರೋಚಕ ಗೆಲುವು ಸಾಧಿಸಿದ ಇಂಗ್ಲೆಂಡ್‌, ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಸರಣಿ ಜಯ

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಜಾಹಿದ್ ಮಹಮೂದ್, ಮೊಹಮ್ಮದ್ ಅಲಿ, ಅಬ್ರಾರ್ ಅಹ್ಮದ್ ಬೆಂಚ್ ಅಜರ್ ಅಲಿ, ನಸೀಮ್ ಶಾ, ಸರ್ಫರಾಜ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ವಾಸಿಂ ಜೂನಿಯರ್, ನೌಮನ್ ಅಲಿ

ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ವಿಲ್ ಜ್ಯಾಕ್ಸ್, ಆಲಿ ರಾಬಿನ್ಸನ್, ಜ್ಯಾಕ್ ಲೀಚ್, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್
ಬೆಂಚ್: ಕೀಟನ್ ಜೆನ್ನಿಂಗ್ಸ್, ರೆಹಾನ್ ಅಹ್ಮದ್, ಬೆನ್ ಫೋಕ್ಸ್, ಜೇಮೀ ಓವರ್ಟನ್

Story first published: Monday, December 12, 2022, 21:52 [IST]
Other articles published on Dec 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X