For Quick Alerts
ALLOW NOTIFICATIONS  
For Daily Alerts
 

ಚಾಂಪಿಯನ್ಸ್‌ ಟ್ರೋಫಿ ಫೈನಲ್ ಸೋಲು: ನ್ಯೂಜಿಲೆಂಡ್ ತಂಡದ ನಾಯಕ ಬದಲು

ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ, ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಈ ಮೂಲಕ ಎರಡನೇ ಬಾರಿಗೆ ಚಾಂಪಿಯನ್ಸ್‌ ಟ್ರೋಫಿಗೆ ಮುತ್ತಿಡುವ ಕಿವೀಸ್‌ ಕನಸು ನುಚ್ಚುನೂರಾಗಿದೆ. ಈ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಲ್‌ರೌಂಡರ್‌ ಮಿಚೆಲ್‌ ಸ್ಯಾಂಟ್ನರ್‌ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ಮುಂಬರುವ ಪಾಕಿಸ್ತಾನ ವಿರುದ್ದದ ಸರಣಿಗೆ ಇವರಿಂದ ನಾಯಕತ್ವವನ್ನು ಸ್ಟಾರ್‌ ಆಟಗಾರನಿಗೆ ನೀಡಲಾಗಿದೆ.

ಮಿಚೆಲ್‌ ಸ್ಯಾಂಟ್ನರ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಉತ್ತಮವಾಗಿ ತಂಡವನ್ನು ಮುನ್ನಡೆಸಿದ್ದರು. ಇವರಲ್ಲಿನ ನಾಯಕತ್ವದ ಗುಣಗಳನ್ನು ನೋಡಿಯೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಇವರಿಗೆ ಸ್ಥಾನ ನೀಡಲಾಗಿದೆ. ಇವರ ಬದಲಿಗೆ ಫೈನಲ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದ ಪ್ಲೇಯರ್‌ ಕಿವೀಸ್‌ ನಾಯಕತ್ವವನ್ನು ನೀಡಲಾಗಿದೆ. ಮಿಚೆಲ್‌ ಸ್ಯಾಂಟ್ನರ್‌ ಅವರಿಗೂ ಮುಂದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಪಾಕ್‌ ವಿರುದ್ದ ಟಿ20 ಸರಣಿಗೆ ತಂಡಕ್ಕೆ ನೂತನ ನಾಯಕನ ಎಂಟ್ರಿ ಆಗಿದೆ.

Michael Bracewell to Lead New Zealand in T20 Series Against Pakistan

ಕಿವೀಸ್‌ ನಾಯಕ ಯಾರು?

ಮಿಚೆಲ್‌ ಸ್ಯಾಂಟ್ನರ್‌ರಿಂದ ತೆರವಾದ ಸ್ಥಾನಕ್ಕೆ ನ್ಯೂಜಿಲೆಂಡ್ ಮೈಕೆಲ್ ಬ್ರೇಸ್‌ವೆಲ್ ಅವರನ್ನು ನೇಮಿಸಲಾಗಿದೆ. ಇವರು ಭಾರತದ ವಿರುದ್ಧ ಪಂದ್ಯದಲ್ಲಿ ಒತ್ತಡದ ಸನ್ನಿವೇಶದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಅಲ್ಲದೆ 40 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೆಯ 53 ರನ್‌ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಬೌಲಿಂಗ್‌ನಲ್ಲೂ ಇವರು ಸ್ಥಿರ ಪ್ರದರ್ಶನ ನೀಡಿ, 28 ರನ್‌ಗೆ 2 ವಿಕೆಟ್‌ ಕಬಳಿಸಿದ್ದರು. ಇವರ ಈ ಸ್ಥಿರ ಪ್ರದರ್ಶನಕ್ಕೆ ಈಗ ಪ್ರತಿಫಲ ಸಿಕ್ಕಿದೆ.

ನ್ಯೂಜಿಲೆಂಡ್ ತಂಡ ಫೈನಲ್‌ ಹಂತವನ್ನು ತಲುಪುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಯುವ ಆಟಗಾರ ರಚಿನ್‌ ರವೀಂದ್ರ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರು ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತ್ತು.

Michael Bracewell to Lead New Zealand in T20 Series Against Pakistan

ಫೈನಲ್‌ ಪಂದ್ಯ

ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ನ್ಯೂಜಿಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 7 ವಿಕೆಟ್‌ಗೆ 251 ರನ್‌ ಕಲೆ ಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ರನ್‌ ಗಳಿಸಿತು.

ನ್ಯೂಜಿಲೆಂಡ್‌ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಫಿನ್ ಅಲೆನ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ, ಜ್ಯಾಕ್ ಫೌಲ್ಕ್ಸ್, ಮಿಚ್ ಹೇ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ವಿಲ್ ಒ'ರೂರ್ಕ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ.

ನ್ಯೂಜಿಲೆಂಡ್ ಪ್ರವಾಸ ಬೆಳೆಸಲಿರುವ ಪಾಕಿಸ್ತಾನ
ಉಭಯ ದೇಶಗಳ ಸರಣಿಯ ವೇಳಾ ಪಟ್ಟಿ
ಮೊದಲ ಟಿ20, ಮಾ.16, ಕ್ರೈಸ್ಟ್‌ಚರ್ಚ್
ಎರಡನೇ ಟಿ20, ಮಾ.18, ಡುನೆಡಿನ್
ಮೂರನೇ ಟಿ20, ಮಾ.21, ಆಕ್ಲೆಂಡ್‌
ನಾಲ್ಕನೇ ಟಿ20, ಮಾ.23, ಮೌಂಟ್ ಮೌಂಗನುಯಿ
ಐದನೇ ಟಿ20, ಮಾ.26, ವಿಲ್ಲಿಂಗ್‌ಟನ್‌

Story first published: Tuesday, March 11, 2025, 9:45 [IST]
Other articles published on Mar 11, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+