ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ ತಂಡ ಮಾತ್ರ ಆಸ್ಟ್ರೇಲಿಯಾ ನೆಲದಲ್ಲಿ ಅದಕ್ಕೆ ಚಾಲೆಂಜ್ ಮಾಡಲು ಸಾಧ್ಯ: ಮೈಕಲ್ ವಾನ್

Michael Vaughan names ‘only’ team which can beat Aus on home soil

ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ಹೀನಾಯವಾಗಿ ಸರಣಿಯನ್ನು ಸೋತಿದೆ. ಅಡಿಲೇಡ್‌ನಲ್ಲಿ ನಡೆದ ಡೇ-ನೈಟ್ ಪಂದ್ಯವನ್ನು ಆಸ್ಟ್ರೇಲಿಯಾ ಇನ್ನಿಂಗ್ಸ್‌ ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದ ಬಳಿಕ ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇದು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಪಾಕ್-ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾಪಾಕ್-ಆಸ್ಟ್ರೇಲಿಯಾ ಟೆಸ್ಟ್ ಸರಣಿ: ಕ್ಲೀನ್ ಸ್ವೀಪ್ ಮಾಡಿದ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡ ವಿದೇಶದಲ್ಲಿ ಒಂದಷ್ಟು ಸಮಯಗಳಿಂದ ಉತ್ತಮ ಪ್ರದರ್ಶನ ನೀಡದಿರಬಹುದು. ಆದರೆ ತವರಿನಲ್ಲಿ ಆಡುವಾಗ ಅದನ್ನು ಎದುರಿಸುವುದು ಸಾಧ್ಯವೇ ಇಲ್ಲ ಎಂಬ ಮಾತಿದೆ. ಅದಕ್ಕೆ ಪೂರಕವಾಗಿ ತನ್ನ ನೆಲದಲ್ಲಿ ಇಲ್ಲಿಯವರೆಗೆ ಅದೇ ರೀತಿಯಲ್ಲಿ ಪ್ರದರ್ಶನವನ್ನೂ ನೀಡಿದೆ. ಇಂದು ಅಂತ್ಯವಾದ ಪಾಕಿಸ್ತಾನದ ವಿರುದ್ಧದ ಸರಣಿಯನ್ನೂ ಕ್ಲೀನ್ ಸ್ವೀಪ್ ಮಾಡಿ ಗೆದ್ದುಕೊಂಡಿದೆ. ಪಂದ್ಯದಲ್ಲಿ ಪಾಕಿಸ್ತಾನ ಕೇವಲ ಮೂರು ವಿಕೆಟನ್ನಷ್ಟೇ ಕಬಳಿಸಲು ಸಾಧ್ಯವಾಯಿತು. ಆಸ್ಟ್ರೇಲಿಯಾದ ಪ್ರಮುಖ ಆಟಗಾರ ಸ್ಟೀವ್ ಸ್ಮಿತ್ ವಿಕೆಟನ್ನು ಬೇಗನೆ ಕಳೆದುಕೊಂಡರೂ ಮೂರು ವಿಕೆಟ್‌ ನಷ್ಟಕ್ಕೆ 589 ರನ್ ಗಳಿಸಿತ್ತು. ಇದು ತವರಿನಲ್ಲಿ ಆಸ್ಟ್ರೇಲಿಯಾದ ಹೊಂದಿರುವ ಪ್ರಾಬಲ್ಯ.

ಮೈಕಲ್ ವಾನ್ ಇದೇ ವಿಚಾರವಾಗಿ ಟ್ವಿಟರ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಈ ಪೋಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವ ಅಸ್ತ್ರವಿರುವುದು ಭಾರತದಲ್ಲಿ ಮಾತ್ರ ಎಂದು ಹೇಳಿದ್ದಾರೆ. ಈ ಮೂಲಕ ಭಾರತ ಮಾತ್ರವೇ ಆಸ್ಟ್ರೇಲಿಯಾವನ್ನು ಅದರ ನೆಲದಲ್ಲಿ ಸೋಲಿಸಲು ಶಕ್ತವಾಗಿರುವ ತಂಡ ಎಂದು ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್ ಹೇಳಿಕೆಯನ್ನು ನೀಡಿದ್ದಾರೆ.

ಲಾರಾ 400* ದಾಖಲೆ ಮುರಿಯಲು ಈ ಭಾರತೀಯನಿಂದ ಸಾಧ್ಯ: ಡೇವಿಡ್ ವಾರ್ನರ್ಲಾರಾ 400* ದಾಖಲೆ ಮುರಿಯಲು ಈ ಭಾರತೀಯನಿಂದ ಸಾಧ್ಯ: ಡೇವಿಡ್ ವಾರ್ನರ್

ಇತ್ತೀಚೆಗೆ ಟೀಮ್ ಇಂಡಿಯಾ ಟೆಸ್ಟ್‌ನಲ್ಲಿ ಅದ್ಭುತವಾಗಿ ಆಡುತ್ತಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್ ಅರಂಭವಾದ ಬಳಿಕ ಆಡಿರುವ ಏಳು ಪಂದ್ಯಗಳಲ್ಲೂ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ವರ್ಷಾರಂಭದಲ್ಲಿ ವಿರಾಟ್ ಪಡೆ ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಸರಣಿಯನ್ನು ಗೆದ್ದು ಬೀಗಿತ್ತು.

Story first published: Monday, December 2, 2019, 20:34 [IST]
Other articles published on Dec 2, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X