T20 world cup 2024: ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಬಲ್ಲ 4 ತಂಡಗಳನ್ನು ಆಯ್ಕೆ ಮಾಡಿದ ಇಂಗ್ಲೆಂಡ್ ಮಾಜಿ ನಾಯಕ
ಭಾರತದಲ್ಲಿ ನಡೆಯುತ್ತಿರುವ 2024ರ ಐಪಿಎಲ್ ಮುಗಿಯುತ್ತಿದ್ದಂತೆ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಜೂನ್ 1 ರಿಂದ ಶುರುವಾಗುತ್ತಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ದೇಶಗಳು ಈ ಮೆಗಾ ಟೂರ್ನಿಗೆ ಆತಿಥ್ಯೆ ವಹಿಸಿಕೊಂಡಿವೆ. ಜೊತೆಗೆ ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ತಮ್ಮ 15 ಸದಸ್ಯರ ಹೆಸರನ್ನು ಪ್ರಕಟಿಸಿವೆ.
ಇದರ ಬೆನ್ನೆಲ್ಲೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಬಲ್ಲ 4 ತಂಡಗಳನ್ನು ಆಯ್ಕೆ ಮಾಡಿದ್ದಾರೆ. ಈ ನಾಲ್ಕು ತಂಡಗಳ ಪೈಕಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವುದಿಲ್ಲ ಎಂದುಎಂದು ಮೈಕಲ್ ವಾನ್ ಭವಿಷ್ಯ ನುಡಿದ್ದಾರೆ.

ಸಾಮಾಜಿಕ ಜಾಲತಾಣದ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೈಕಲ್ ವಾನ್ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ತಂಡಗಳು ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಬಲ್ಲವು ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಈಗಾಗಲೇ ಇಂಗ್ಲೆಂಡ್ ತಮ್ಮ ತಂಡವನ್ನು ಘೋಷಿಸಿದ್ದು, ಇದರಲ್ಲಿ ವೇಗಿ ಜೋಫ್ರಾ ಆರ್ಚರ್ ಗಾಯದಿಂದ ಚೇತರಿಸಿಕೊಂಡು ಪುನರಾಗನ ಮಾಡಿದ್ದಾರೆ. ಇದು ಕ್ರಿಕೆಟ್ ಜನಕರ ಬೌಲಿಂಗ್ ಬಳಗಕ್ಕೆ ಬಲ ತಂದಿದೆ. ಹಾಲಿ ಚಾಂಪಿಯನ್ ಆದ ಇಂಗ್ಲೆಂಡ್ ಈ ಹಿಂದೆ ತಂಡದಲ್ಲಿದ್ದ ಬಹುತೇಕ ಆಟಗಾರರನ್ನು ಉಳಿಸಿಕೊಂಡಿದೆ. ಇವರೊಂದಿಗೆ ಸ್ಪಿನ್ನರ್ ಟಾಮ್ ಹಾರ್ಟ್, ವಿಶ್ವದ ಎರಡನೇ ಶ್ರೇಯಾಂಕದ ಟಿ20 ಬ್ಯಾಟರ್ ಫಿಲ್ ಸಾಲ್ಟ್ ಮತ್ತು ಇಂಗ್ಲೆಂಡ್‌ನ ಟೆಸ್ಟ್ ಆರಂಭಿಕ ಬೆನ್ ಡಕೆಟ್ ಅವರಿಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಈ ಮೆಗಾ ಟೂರ್ನಿಯಲ್ಲಿ ಅವಕಾಶಗಳನ್ನು ನೀಡಲಾಗಿದೆ. ಈ ಪ್ರಯೋಗದ ಮೂಲಕ ಪ್ರಶಸ್ತಿ ಗೆಲ್ಲುವ ತಂಡಗಳಲ್ಲಿ ಇಂಗ್ಲೆಂಡ್ ಕೂಡ ಒಂದಾಗಿದೆ.

ಇಂಗ್ಲೆಂಡ್ ತಂಡ:
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.
ಏಪ್ರಿಲ್ 30 ರಂದು ದಕ್ಷಿಣ ಆಫ್ರಿಕಾ ಕೂಡ ತಮ್ಮ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಅನುಭವಿ ಆಟಗಾರರಾದ ಕ್ವಿಂಟನ್ ಡಿ ಕಾಕ್, ರೀಜ್ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಐಡೆನ್ ಮಾರ್ಕ್ರಾಮ್ ಮತ್ತು ಡೇವಿಡ್ ಮಿಲ್ಲರ್ ಅವರಂತಹ ಸ್ಪೋಟಕ ಬ್ಯಾಟಿಂಗ್ ಲೈನ್-ಅಪ್ ಅನ್ನು ಹೊಂದಿದೆ. ಇದು ಹರಿಣಗಳ ಪಡೆ ಗೆಲುವಿಗೆ ಹೆಚ್ಚು ನೆರವಾಗಲಿದೆ.
ಈ ವರ್ಷ ಎಸ್‌ಎ20 ಆವೃತ್ತಿ ಎರಡರಲ್ಲಿ 530 ರನ್ ಗಳಿಸಿದ ರಿಯಾನ್ ರಿಕೆಲ್ಟನ್, 18 ವಿಕೆಟ್‌ಗಳನ್ನು ಪಡಯುವ ಮೂಲಕ ಬೌಲಿಂಗ್ ಮಿಂಚಿದ್ದಾರೆ. ಟ್ರಿಸ್ಟಾನ್ ಸ್ಟಬ್ಸ್ ಮತ್ತು ಒಟ್ನಿಯೆಲ್ ಅವರಂತಹ ಯುವ ಬ್ಯಾಟರ್‌ಗಳ ಸೇರ್ಪಡೆ ತಂಡಕ್ಕೆ ಬಹಳಷ್ಟು ಕೊಡುಗೆ ನೀಡಲಿದೆ. ಮತ್ತೊಂದೆಡೆ ಬಹುದಿನಗಳ ಬಳಿಕ ಟಿ20 ಕ್ರಿಕೆಟ್ ಮರಳಿರುವ ಆನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ಆಲ್-ರೌಂಡರ್ ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್ ಮತ್ತು ತಬ್ರೈಜ್ ಶಮ್ಸಿ ಅವರಂತಹ ಬೌಲರ್‌ಗಳು ಕೂಡ ಬ್ಯಾಟರ್‌ಗಳನ್ನು ಕಟ್ಟಿ ಹಾಕುವಂತ ಸಾಮರ್ಥ್ಯ ಹೊಂದಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ:
ಐಡಿನ್ ಮಾರ್ಕ್ರಾಮ್ (ನಾಯಕ) ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್ , ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ರಿಯಾನ್ ರಿಜೆಲ್‌ಟನ್, ಟ್ಯಾಬ್ರಾಡ್ ಟ್ರಿಸ್ಟಾನ್ ಸ್ಟಬ್ಸ್.
ಮೇ 1 ರಂದು ಆಸ್ಟ್ರೇಲಿಯಾ ಕೂಡ ತಮ್ಮ ತಂಡವನ್ನು ಪ್ರಕಟಿಸಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರು ವಿಭಾಗಗಳಲ್ಲಿ ಅಳೆದು ತೂಗಿ ತಂಡವನ್ನು ಕಟ್ಟಲಾಗಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಗೆದ್ದಿರುವ ಕಾಂಗೂರು ಪಡೆ ಈ ಬಾರಿ ಟಿ20 ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿದೆ.

ಆಸ್ಟ್ರೇಲಿಯಾ ತಂಡ:
ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.
ಕುತೂಹಲ ಕೆರಳಿಸಿರುವ ವೆಸ್ಟ್ ಇಂಡೀಸ್ ತಮ್ಮ ತಂಡವನ್ನು ಇನ್ನೂ ಪ್ರಕಟಿಸಿಲ್ಲ. ಆದರೆ ಆಂಡ್ರೆ ರಸೆಲ್, ಶಿಮ್ರಾನ್ ಹೆಟ್ಮೆಯರ್, ಜಾಹ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್, ರೋವ್‌ಮನ್ ಪೊವೆಲ್, ರೊಮಾರಿಯೊ ಶೆಫರ್ಡ್ ಅವರಂತಹ ಭಾರೀ ಹಿಟ್ಟರ್‌ಗಳನ್ನು ತಂಡದಲ್ಲಿ ನೋಡಬಹುದು. ಈ ಆಟಗಾರರಿಗೆ ಯಾವ ಸಮಯದಲ್ಲಾದರೂ ಪಂದ್ಯದ ಸ್ಥಿತಿಯನ್ನು ಬದಲಾಯಿಸುವ ಶಕ್ತಿ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications