ಈ ಬಾರಿಯ ವಿಶ್ವಕಪ್ ಗೆಲ್ಲೋದು ಇದೇ ತಂಡ: ಮೈಕಲ್ ವಾನ್ ಹೆಸರಿಸಿದ ತಂಡ ಯಾವುದು?

ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯ. ಅದರಲ್ಲೂ ಟೀಮ್ ಇಂಡಿಯಾ ವಿರುದ್ಧ ಆಗಾಗ ಕಾಲೆಳೆಯುವ ಟ್ವೀಟ್‌ಗಳನ್ನು ಮಾಡುತ್ತಾ ಹೇಳಿಕೆಗಳನ್ನು ನೀಡುತ್ತಿರುವ ಕಾರಣ ಭಾರತೀಯ ಅಭಿಮಾನಿಗಳು ಮೈಕಲ್ ವಾನ್ ಅವರನ್ನು ಮರೆಯಲು ಸಾಧ್ಯವಿಲ್ಲ. ಇದೀಗ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಹಿನ್ನೆಲೆಯಲ್ಲಿ ಮೈಕಲ್ ವಾನ್ ಕುತೂಹಲಕಾರಿ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯದ ಸಂದರ್ಭದಲ್ಲಿ ಮೈಕಲ್ ವಾನ್ ಟ್ವೀಟ್‌ನಲ್ಲಿ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಯಾವುದು ಎಂಬುದರ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಮೈಕಲ್ ವಾನ್ ಅವರ ಈ ಟ್ವೀಟ್ ಭಾರತೀಯ ಅಭಿಮಾನಿಗಳ ಪಾಲಿಗೆ ಖುಷಿಯ ಜೊತೆಗೆ ಅಚ್ಚರಿಯನ್ನುಂಟು ಮಾಡುವಂತಿದೆ.
ಹಾಗಾದರೆ ಮೈಕಲ್ ವಾನ್ ಪ್ರಕಾರ ಈ ಬಾರಿಯ ಏಕದಿನ ವಿಶ್ವಕಪ್ ಗೆಲ್ಲುವ ತಂಡ ಯಾವುದು? ಮುಂದೆ ಓದಿ..

ಭಾರತವನ್ನು ಕುರಿತು ಮೈಕಲ್ ವಾನ್ ಟ್ವೀಟ್
ಅಂದ ಹಾಗೆ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಈ ವರ್ಷಾಂತ್ಯದಲ್ಲಿ ನಡೆಯುವ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಹೆಸರಿಸಿದ್ದು ಬೇರೆ ಯಾವುದನ್ನೂ ಅಲ್ಲ. ಟೀಮ್ ಇಂಡಿಯಾವನ್ನು. ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ನೀಡಿದ ಅಮೋಘ ಪ್ರದರ್ಶನದ ಬಳಿಕ ಮೈಕಲ್ ವಾನ್ ಟ್ವೀಟ್ ಮಾಡಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಭಾರತ ತಂಡ ಏಕದಿನ ಕ್ರಿಕೆಟ್‌ನಲ್ಲಿ ಪ್ರದರ್ಶಿಸುತ್ತಿರುವ ಆಕ್ರಮಣಕಾರಿ ಧೋರಣೆಯಿಂದಾಗಿ ಈ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಳ್ಳುತ್ತದೆ ಎಂದಿದ್ದಾರೆ ಮೈಕಲ್ ವಾನ್.
ಮೈಕಲ್ ವಾನ್ ಮಾಡಿರುವ ಟ್ವೀಟ್‌ನಲ್ಲೇನಿದೆ?
ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಟೀಮ್ ಇಂಡಿಯಾದ ಬ್ಯಾಟಿಂಗ್ ಪ್ರದರ್ಶನದ ಸಂದರ್ಭದಲ್ಲಿಯೇ ಮೈಕಲ್ ವಾನ್ ಈ ಟ್ವೀಟ್ ಮಾಡಿದ್ದಾರೆ. "ಕಡೆಗೂ ಭಾರತ ಏಕದಿನ ಕ್ರಿಕೆಟನ್ನು ಆಕ್ರಮಣಕಾರಿ ಮನೋಭಾವದಲ್ಲಿ ಆಡಲು ಆರಂಭಿಸಿದೆ. ಈ ಕಾರಣದಿಂದಾಗಿ ಈ ವರ್ಷ ನಡೆಯಲಿರುವ ವಿಶ್ವಕಪ್‌ನಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿ ಭಾರತ ಗೋಚರಿಸುತ್ತಿದೆ" ಎಂದು ಮೈಕಲ್ ವಾನ್ ಟ್ವೀಟ್ ಮಾಡಿದ್ದಾರೆ.

ಏಕದಿನ ದ್ವಿಪಕ್ಷೀಯ ಸರಣಿಯಲ್ಲಿ ಮುಂದುವರಿದ ಭಾರತದ ಅಬ್ಬರ
ಇನ್ನು ಟೀಮ್ ಇಂಡಿಯಾ ಈ ವರ್ಷವೂ ಏಕದಿನ ದ್ವಿಪಕ್ಷೀಯ ಸರಣಿಯಲ್ಲಿ ತನ್ನ ಆರ್ಭಟವನ್ನು ಮುಂಡುವರಿಸಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ವೈಟ್‌ವಾಶ್ ಮಾಡಿಕೊಂಡ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿಯೂ ವೈಟ್‌ವಾಶ್‌ನತ್ತ ಹೆಜ್ಜೆಯಿಟ್ಟಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಭಾರತ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಕಿವೀಸ್ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯದಲ್ಲಿಯೂ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗದ ಪ್ರದರ್ಶನ ಗಮನಾರ್ಹವಾಗಿತ್ತು. ಅದರಲ್ಲೂ ಅಗ್ರಕ್ರಮಾಂಕದ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಭಾರತಕ್ಕೆ ಅದ್ಭುತ ಆರಂಭವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಶುಬ್ಮನ್ ಗಿಲ್ ಟೀಮ್ ಇಂಡಿಯಾದ ಆರಂಭಿಕನಾಗಿ ದೊಡ್ಡ ಭರವಸೆ ಮೂಡಿಸಿದ್ದು ರನ್ ಮಳೆ ಹರಿಸಿದ್ದಾರೆ.
ಇತ್ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಜಾಕೋಬ್ ಡಫ್ಫಿ, ಬ್ಲೇರ್ ಟಿಕ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications