ಸೂರ್ಯಕುಮಾರ್ ಯಾದವ್ ಕಟ್ಟಿಹಾಕಲು ಇಂಗ್ಲೆಂಡ್‌ಗೆ ಮಿಸ್ಬಾ ಉಲ್ ಹಕ್ ಸಲಹೆ

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅದ್ಭುತ ಫಾರ್ಮ್‌ನಲ್ಲಿದ್ದು ಭಾರತದ ಯಶಸ್ಸಿಗೆ ಪ್ರಮುಖ ಕಾರಣವಾಗಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿಯೂ ಸೂರ್ಯಕುಮಾರ್ ಯಾದವ್ ಮೇಲೆ ಸಾಕಷ್ಟು ನಿರೀಕ್ಷೆಗಳು ಇವೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಇಂಗ್ಲೆಂಡ್‌ಗೆ ಸೂರ್ಯಕುಮಾರ್ ಯಾದವ್ ಅವರನ್ನು ಕಟ್ಟಿ ಹಾಕಲು ಸಲಹೆ ನೀಡಿದ್ದಾರೆ.

ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಅವರ ಸಾಮರ್ಥ್ಯವನ್ನು ಉಲ್ಲೇಖಿಸಿರುವ ಮಿಸ್ಬಾ ಉಲ್ ಹಕ್ ಅದಕ್ಕೆ ಪ್ರತಿತಂತ್ರವನ್ನು ಹೆಣೆಯುವಂತೆ ಸೂಚಿಸಿದ್ದಾರೆ. ಸೂರ್ಯಕುಮಾರ್ ಯಾದವ್ ಬೌಲರ್‌ಗಳ ವೇಗವನ್ನು ಅದ್ಭುತವಾಗಿ ಬಳಸಿಕೊಂಡು ಬ್ಯಾಟಿಂಗ್ ನಡೆಸುತ್ತಾರೆ. ಅದಕ್ಕೆ ಇಂಗ್ಲೆಂಡ್ ಆಟಗಾರರು ಪ್ರತಿತಂತ್ರವನ್ನು ಹೆಣೆಯಬೇಕಿದೆ ಎಂದಿದ್ದಾರೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಮಾಜಿ ಕೋಚ್ ಮಿಸ್ಬಾ ಉಲ್ ಹಕ್ ಸಲಹೆ ನೀಡಿದ್ದಾರೆ.

ಸೆಮಿಫೈನಲ್‌ನಲ್ಲಿ ರೋಹಿತ್ ಶರ್ಮಾ ಈ ಎರಡು ಕೆಲಸ ಮಾಡಿದರೆ ಗೆಲುವು ನಮ್ಮದೇ ಎಂದ ಇರ್ಫಾನ್ ಪಠಾಣ್ಸೆಮಿಫೈನಲ್‌ನಲ್ಲಿ ರೋಹಿತ್ ಶರ್ಮಾ ಈ ಎರಡು ಕೆಲಸ ಮಾಡಿದರೆ ಗೆಲುವು ನಮ್ಮದೇ ಎಂದ ಇರ್ಫಾನ್ ಪಠಾಣ್

ಈ ಬಾರಿಯ ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಎದುರಾಳಿಗಳ ವಿರುದ್ಧ ಭರ್ಜರಿ ಮೇಲುಗೈ ಸಾಧಿಸಿದ್ದಾರೆ. ಆಡಿರುವ ಎಲ್ಲಾ ಪಂದ್ಯಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡಿರುವ ಸೂರ್ಯ ಐದು ಪಂದ್ಯಗಳಲ್ಲಿ 225 ರನ್‌ಗಳನ್ನು ಗಳಿಸಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಮೂರನೇ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ.

"ನನ್ನ ಪ್ರಕಾರ ಆತ ವೇಗವನ್ನು ಅದ್ಭುತವಾಗಿ ಬಳಸಿಕೊಳ್ಳುಯತ್ತಾರೆ. ಒಂದು ವೇಳೆ ಈ ಪಂದ್ಯದಲ್ಲಿ ವುಡ್ ಆಡುತ್ತಿದ್ದರೆ ಅವರಿಗೆ ಅವರಿಗೆ ಹೆಚ್ಚು ಅವಕಾಶ ನೀಡದಂತೆ ಮಾಡಬೇಕಿದೆ. ಆಗ ಮಾತ್ರವೇ ಆತನನ್ನು ಕಟ್ಟು ಹಾಕಲು ಸಾಧ್ಯ" ಎಂದಿದ್ದಾರೆ ಮಿಸ್ಬಾ ಉಲ್ ಹಕ್.

ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲುವಿಗೆ ಕಾರಣ ಹೇಳಿದ ಹರ್ಭಜನ್ ಸಿಂಗ್ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲುವಿಗೆ ಕಾರಣ ಹೇಳಿದ ಹರ್ಭಜನ್ ಸಿಂಗ್

ಟೀಮ್ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್, ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಹಾಲ್, ಹರ್ಷಲ್ ಪಟೇಲ್, ದೀಪಕ್ ಹೂಡಾ

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಡೇವಿಡ್ ವಿಲ್ಲಿ, ಟೈಮಲ್ ಮಿಲ್ಸ್, ಡೇವಿಡ್ ಮಲನ್, ಮಾರ್ಕ್ ವುಡ್

For Quick Alerts
ALLOW NOTIFICATIONS
For Daily Alerts
Story first published: Thursday, November 10, 2022, 13:49 [IST]
Other articles published on Nov 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X