ಮಹಿಳಾ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಮಿಥಾಲಿ ರಾಜ್

ಭಾರತೀಯ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಎಲ್ಲಾ ಮಾದರಿಗಳಲ್ಲಿಯೂ ಅತ್ಯಂತ ಹೆಚ್ಚು ರನ್‌ಗಳಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆಯನ್ನು ಮಾಡಿದ್ದಾರೆ ಮಿಥಾಲಿ ರಾಜ್. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಈ ದಾಖಲೆ ನಿರ್ಮಾಣವಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಚಾರ್ಲೊಟ್ ಎಡ್ವರ್ಡ್ಸ್ ಹೆಸರಿನ್ಲಲಿ ಈ ದಾಖಲೆಯಿತ್ತು. ಐದು ವರ್ಷಗಳಿಂದ ಈ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಾಗಿರಲಿಲ್ಲ. ಆದರೆ ಭಾರತೀಯ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ತಮ್ಮ 317ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಈ ದಾಖಲೆಯನ್ನು ಮುರಿದಿದ್ದಾರೆ.

2ನೇ ಹಂತದ ಐಪಿಎಲ್ 2021ರ ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ಆಡುತ್ತಿಲ್ಲ!2ನೇ ಹಂತದ ಐಪಿಎಲ್ 2021ರ ಪಂದ್ಯಗಳಲ್ಲಿ ಸ್ಟೀವ್ ಸ್ಮಿತ್ ಆಡುತ್ತಿಲ್ಲ!

ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ತವರಿನಲ್ಲಿ ನಡೆದ ಪಂದ್ಯದಲ್ಲಿ 10,000 ರನ್‌ಗಳ ಮೈಲಿಗಲ್ಲನ್ನು ದಾಟಿದ್ದರು ಮಿಥಾಲಿ ರಾಜ್. ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕಿ ಎಡ್ವರ್ಡ್ಸ್ ಅವರು 309 ಪಂದ್ಯಗಳನ್ನು ಆಡಿ 10,273 ರನ್‌ಗಳಿಸಿದ್ದರು. ಈ ದಾಖಲೆಯನ್ನು ಮುರಿಯಲು ಮಿಥಾಲಿ 317 ಪಂದ್ಯಗಳನ್ನು ಬಳಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಮಿಥಾಲಿ ರಾಜ್ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಆಡಿದ ಮೂರು ಏಕದಿನ ಪಂದ್ಯಗಳಲ್ಲಿಯೂ ಮಿಥಾಲು ರಾಜ್ ಅರ್ಧಶತಕವನ್ನು ಗಳಿಸಿದ್ದರು. ಅಂತಿಮ ಪಂದ್ಯದಲ್ಲಿ ಮಿಥಾಲಿ ಆಡಿದ ಅಜೇಯ ಆಟ ತಂಡದ ಗೆಲುಯವಿಗೆ ಕಾರಣವಾಗಿತ್ತು. ಈ ಮೂಲಕ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿದೆ.

Ravi Shastri ಸ್ಥಾನ ತುಂಬಬಲ್ಲ ಈ ಮಾಜಿ ಆಟಗಾರರಲ್ಲಿ ಯಾರು ಬೆಸ್ಟ್? | Team Indian Coach | Oneindia Kannada

ಇನ್ನು ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ಮಹಿಳೆಯರ ವಿರುದ್ಧ ಟಿ20 ಸರಣಿಯನ್ನು ಆಡಲಿದ್ದಾರೆ. ಈ ಚುಟುಕು ಸರಣಿ ಕೂಡ ಮೂರು ಪಂದ್ಯಗಳನ್ನು ಒಳಗೊಂಡಿದ್ದು ಜುಲೈ 9ರಿಂದ ಆರಂಭವಾಗಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, July 4, 2021, 12:01 [IST]
Other articles published on Jul 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X