ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಿಥಾಲಿ ರಾಜ್ ನಿವೃತ್ತಿ: ಚೊಚ್ಚಲ ಪಂದ್ಯದಲ್ಲಿಯೇ ಶತಕ, 23 ವರ್ಷಗಳ ಕ್ರಿಕೆಟ್ ಬದುಕಿನ ಮಹತ್ತರ ಸಾಧನೆಗಳು

Mithali Raj retires: India women cricket skippers Records & Achievements
Mithali Raj ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದೇಕೆ | *Sports | Oneindia Kannada

ಭಾರತೀಯ ಮಹಿಳಾ ಕ್ರಿಕೆಟ್‌ನ ನಾಯಕಿಯಾಗಿದ್ದ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿರುವುದಾಗಿ ಮಿಥಾಲಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಸುದೀರ್ಘ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮಿಥಾಲಿ ರಾಜ್ ಪೂರ್ಣ ವಿರಾಮವಿಟ್ಟಿದ್ದಾರೆ.

ಮಿಥಾಲಿ ರಾಜ್ ತಮ್ಮ 16ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಚೊಚ್ಚಲ ಪಂದ್ಯದಲ್ಲಿಯೇ ಶತಕ ಸಿಡಿಸಿ ಮಿಂಚಿದ್ದ ಮಿಥಾಲಿ ರಾಜ್ ಬಳಿಕ ಹಿಂದಿರುಗಿ ನೋಡಲೇ ಇಲ್ಲ. ಮಹಿಳಾ ಕ್ರಿಕೆಟ್‌ನ ಅದೆಷ್ಟೋ ದಾಖಲೆಗಳನ್ನು ಮಿಥಾಲಿ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ. ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಮಹಿಳಾ ಆಟಗಾರ್ತಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ ಮಿಥಾಲಿ ರಾಜ್.

ಹಾಗಾದರೆ ಮಿಥಾಲಿ ರಾಜ್ ಜೀವನದ ಕೆಲ ಮಹತ್ವದ ಸಾಧನೆಗಳೇನು? ಆ ಬಗ್ಗೆ ಕೆಲ ಮಾಹಿತಿಗಳು ಇಲ್ಲಿದೆ.

1999: ಮಿಥಾಲಿ ರಾಜ್ ತಮ್ಮ 16ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಐರ್ಲೆಂಡ್ ವಿರುದ್ಧ ಆಡಿದ ಆ ಚೊಚ್ಚಲ ಪಂದ್ಯದಲ್ಲಿಯೇ ಮಿಥಾಲಿ ಭರ್ಜರಿ ಶತಕ ಸಿಡಿಸಿದರು. ಅಜೇಯ 114 ರನ್‌ಗಳನ್ನು ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಮೊದಲ ಪಂದ್ಯದಲ್ಲಿಯೇ ಪ್ರದರ್ಶಿಸಿದರು.

2002: ಮಿಥಾಲಿ ರಾಜ್ 2002ರ ಆಗಸ್ಟ್‌ನಲ್ಲಿ ತಮ್ಮ 19ನೇ ವಯಸ್ಸಿನಲ್ಲಿ ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಟೌಂಟಾನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಮಿಥಾಲಿ 214 ರನ್ ಸಿಡಿಸಿ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. (2004ರಲ್ಲಿ ಈ ದಾಖಲೆಯನ್ನು ಪಾಕಿಸ್ತಾನದ ಆಟಗಾರ್ತಿ ಕಿರಣ್ ಬಲೂಚ್ ಮುರಿದರು)

2005: ಭಾರತ ತಂಡವನ್ನು ವಿಶ್ವಕಪ್‌ನಲ್ಲಿ ಮುನ್ನಡೆಸಿದ ಮಿಥಾಲಿ ರಾಜ್ ಭಾರತ ತಂಡವನ್ನು ಫೈನಲ್ ಹಂತದವರೆಗೆ ತಲುಪಿಸಿದ್ದರು. ದುರದೃಷ್ಟವಶಾತ್ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡಕ್ಕೆ ಶರಣಾಗುವ ಮೂಲಕ ವಿಶ್ವಕಪ್ ಕನಸನ್ನು ಭಗ್ನಗೊಂಡಿತು.

2008: ಭಾರತ ಮಹಿಳಾ ತಂಡ ಸತತ ನಾಲ್ಕನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಪಟ್ಟಕ್ಕೇರಿತು. ಈ ತಂಡದ ನಾಯಕತ್ವ ಕೂಡ ಮಿಥಾಲಿ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ 3000 ರನ್‌ಗಳ ಮೈಲಿಗಲ್ಲನ್ನು ಮಿಥಾಲಿ ದಾಟಿದ್ದರು.

2013: ಈ ವರ್ಷ ನಡೆದ ಮಹಿಳಾ ವಿಶ್ವಕಪ್‌ನ ಸಂದರ್ಭದಲ್ಲಿ ಮಿಥಾಲಿ ರಾಜ್ ಏಕದಿನ ಕ್ರಿಕೆಟ್ ಮಾದರಿಯಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕದ ಆಟಗಾರ್ತಿ ಎನಿಸಿಕೊಂಡರು.

2015: ಭಾರತ ಸರ್ಕಾರ 2015ರಲ್ಲಿ ಭಾರತೀಯ ಕ್ರಿಕೆಟ್‌ಗೆ ನೀಡಿದ ಸೇವೆಗಾಗಿ ಮಿಥಾಲಿ ರಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು.

2017: ಮಹಿಳಾ ಏಕದಿನ ಇತಿಹಾಸದಲ್ಲಿ 6000 ರನ್‌ಗಳ ಮೈಲಿಗಲ್ಲು ದಾಟಿದ ಮೊದಲ ಮಹಿಳಾ ಕ್ರಿಕೆಟರ್ ಎನಿಸಿದರು ಮಿಥಾಲಿ ರಾಜ್.
2017: ಮಿಥಾಲಿ ರಾಜ್ ಭಾರತ ತಂಡದ ನಾಯಕಿಯಾಗಿ ಎರಡನೇ ಬಾರಿಗೆ 2017ರಲ್ಲಿ ವಿಶ್ವಕಪ್‌ನ ಫೈನಲ್‌ಗೆ ತಲುಪಿಸಿದರು. ಈ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 9 ರನ್‌ಗಳ ಅಂತರದಿಂದ ಸೋಲು ಅನುಭವಿಸಿತ್ತು. 2017ರಲ್ಲಿ ಐಸಿಸಿ ಪ್ರಕಟಿಸಿದ ಮಹಿಳಾ ತಂಡದಲ್ಲಿಯೂ ಸ್ಥಾನವನ್ನು ಪಡೆದುಕೊಂಡರು.

2019: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ 20 ವರ್ಷಗಳನ್ನು ಪೂರೈಸಿದ ಪ್ರಥಮ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಂಬ ದಾಖಲೆಯನ್ನು ಬರೆದರು.

2022: 22 ವರ್ಷ 274 ದಿನಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮಿಥಾಲಿ ರಾಜ್ 2022ರ ಜೂನ್ 8ರಂದು ನಿವೃತ್ತಿ ಘೋಷಣೆ ಮಾಡಿದ್ದಾರೆ.

Story first published: Wednesday, June 8, 2022, 16:08 [IST]
Other articles published on Jun 8, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X