For Quick Alerts
ALLOW NOTIFICATIONS  
For Daily Alerts
 

CT 2025: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಪಾಕಿಸ್ತಾನಕ್ಕೆ ಡಬಲ್ ಶಾಕ್; ಸ್ಟಾರ್ ವೇಗಿ ನಿವೃತ್ತಿ

ಪಾಕಿಸ್ತಾನದ ಆಲ್‌ರೌಂಡರ್ ಇಮಾದ್ ವಾಸಿಮ್ ನಂತರ ವೇಗದ ಬೌಲರ್ ಮೊಹಮ್ಮದ್ ಅಮೀರ್ ಮತ್ತೊಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಅಮೀರ್ ಕೂಡ ನಿವೃತ್ತಿಯಾಗಿದ್ದಾರೆ ಎಂದು ತಿಳಿಸಲಾಗಿದೆ. ಅಮೀರ್ 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದರು. ಇದಾದ ನಂತರ 2024ರಲ್ಲಿ ತಂಡಕ್ಕೆ ಹಿಂತಿರುಗಿದ್ದರು. ಇದೀಗ ವರ್ಷಾಂತ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಮೀರ್ ವಿದಾಯ ಹೇಳಿದ್ದಾರೆ. ಕೊನೆಯ ಬಾರಿಗೆ ಅಮೀರ್ ಪಾಕಿಸ್ತಾನ ಪರ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದರು.

ಮೊಹಮ್ಮದ್ ಅಮೀರ್ ಕೂಡ ತಮ್ಮ ನಿವೃತ್ತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. 'ಪಾಕಿಸ್ತಾನಕ್ಕಾಗಿ ಎಲ್ಲಾ ಮೂರು ಮಾದರಿಗಳಲ್ಲಿ ಆಡುವುದು ನನಗೆ ದೊಡ್ಡ ಗೌರವವಾಗಿದೆ. ನಿವೃತ್ತಿ ಘೋಷಿಸುವುದು ಕಠಿಣ ನಿರ್ಧಾರ ಎಂದು ನನಗೆ ತಿಳಿದಿದೆ.

Mohammad Amir Announces Retirement from International Cricket

ಆದರೆ ಮುಂದಿನ ಪೀಳಿಗೆಗೆ ಪಾಕಿಸ್ತಾನ ಕ್ರಿಕೆಟ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಇದು ಸರಿಯಾದ ಸಮಯ ಅಂದುಕೊಂಡಿದ್ದೇನೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಕೃತಜ್ಞತೆ ಹೇಳಲು ಬಯಸುತ್ತೇನೆ. ನನ್ನ ವೃತ್ತಿಜೀವನದಲ್ಲಿ ಯಾವಾಗಲೂ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಪಾಕಿಸ್ತಾನಿ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಅಮೀರ್ 2009 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಅವರು ಪಾಕಿಸ್ತಾನ ಪರ 36 ಟೆಸ್ಟ್, 61 ಏಕದಿನ ಮತ್ತು 62 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರ ವೃತ್ತಿಜೀವನದ ಅವಧಿಯಲ್ಲಿ ಎಲ್ಲಾ ಸ್ವರೂಪಗಳಲ್ಲಿ 271 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದು, 1179 ರನ್ ಗಳಿಸಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಪರ ಕೊನೆಯ ಬಾರಿ ಆಡಿದ್ದರು. ಈ ಐಸಿಸಿ ಟೂರ್ನಿ ನಂತರ ಅವರನ್ನು ತಂಡದಿಂದ ಕೈಬಿಡಲಾಯಿತು.

ಮೊಹಮ್ಮದ್ ಅಮೀರ್ 2009ರ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಅವರು ಪಾಕಿಸ್ತಾನ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಾದ ನಂತರ ಭಾರತ ವಿರುದ್ಧ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಅವರ ಮ್ಯಾಚ್-ವಿನ್ನಿಂಗ್ ಬೌಲಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿತ್ತು. ಅವರ ವೃತ್ತಿಜೀವನವು ವಿವಾದಗಳಿಂದ ತುಂಬಿದೆ.

ಜೈಲು ಶಿಕ್ಷೆ

ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದ ಕಾರಣ 2010 ರಿಂದ 2015 ರವರಗೆ ಐದು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದರು. ಅಲ್ಲದೆ, ಇಂಗ್ಲೆಂಡ್‌ನಲ್ಲಿ ಜೈಲು ಶಿಕ್ಷೆಯನ್ನೂ ಅನುಭವಿಸಬೇಕಾಯಿತು. ಐದು ವರ್ಷಗಳ ನಂತರ ಅಮೀರ್ 2016 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದರು. ಪಾಕಿಸ್ತಾನ 2017ರ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಳಿಕ ಅವರು 2019 ರ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಪಾಕಿಸ್ತಾನ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

Story first published: Saturday, December 14, 2024, 19:08 [IST]
Other articles published on Dec 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+