India vs Pakistan: ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಬಾರಿ ಗೆಲ್ಲೋದ್ಯಾರು?; ಮಾಜಿ ಕ್ರಿಕೆಟಿಗ ಹೇಳಿದ್ದೇನು?
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ. ಉಭಯ ತಂಡ ಈ ಪಂದ್ಯ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಮೊಹಮ್ಮದ್ ಅಮೀರ್ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಗೆಲ್ಲುವುದು ಯಾರು ಎಂಬ ಭವಿಷ್ಯ ನುಡಿದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನವು ಭಾರತಕ್ಕಿಂತ ಮೇಲುಗೈ ಸಾಧಿಸುತ್ತದೆ ಎಂದು ಮೊಹಮ್ಮದ್ ಅಮೀರ್ ಭವಿಷ್ಯ ಹೇಳಿದ್ದಾರೆ.
ಭಾರತ ತಂಡವು ಯಾವಾಗಲೂ ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಮ್ಮೆ ಮಾತ್ರ ತನ್ನ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಭಾರತ ಸೋಲನ್ನು ಎದುರಿಸಿದೆ. ಪ್ರಸ್ತುತ ಟೀಮ್ ಇಂಡಿಯಾದ ಕೆಲವು ಆಟಗಾರರು ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಮೀರ್ ನುಡಿದಿರುವ ಭವಿಷ್ಯದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಅಮೀರ್ ಭವಿಷ್ಯ
ಸಂದರ್ಶನವೊಂದರಲ್ಲಿ ಮಾತನಾಡಿರುವ ಮೊಹಮ್ಮದ್ ಅಮೀರ್, 'ಪಾಕಿಸ್ತಾನ ಇತ್ತೀಚೆಗೆ ತೋರಿದ ಆಟವು ಅದ್ಭುತವಾಗಿದೆ. ತವರಿನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವುದು ಮತ್ತು ನಂತರ ದಕ್ಷಿಣ ಆಫ್ರಿಕಾವನ್ನು ಸೋಲಿಸುವುದು ಪಾಕಿಸ್ತಾನದ ಶಕ್ತಿಯನ್ನು ತೋರಿಸುತ್ತದೆ. ವಿಶೇಷವಾಗಿ ಸಾಗರೋತ್ತರ ಸರಣಿಗಳಲ್ಲಿ ಪಾಕಿಸ್ತಾನದ ಇತ್ತೀಚಿನ ಪ್ರದರ್ಶನವನ್ನು ನೋಡಿದರೆ, ಭಾರತದ ವಿರುದ್ಧ ನಾವು ಮೇಲುಗೈ ಸಾಧಿಸುತ್ತೇವೆ ಎನಿಸುತ್ತದೆ. ಮೆಗಾ ಟೂರ್ನಿಗಳಲ್ಲಿ ಭಾರತ ಯಾವಾಗಲೂ ನನ್ನ ನೆಚ್ಚಿನ ತಂಡವಾಗಿದ್ದರೂ, ಭಾರತ ತಂಡವು ಒತ್ತಡದಲ್ಲಿದೆ. ಇತ್ತೀಚಿನ ಸೋಲಿನಿಂದ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ ಎಂದು ಅಮೀರ್ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನ ತಂಡವು ಭಾರತಕ್ಕಿಂತ ಮೇಲುಗೈ ಸಾಧಿಸಿದೆ. ಕಳೆದ ಬಾರಿ 2017ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತವನ್ನು 180 ರನ್‌ಗಳಿಂದ ಸೋಲಿಸಿತ್ತು. ಪಾಕಿಸ್ತಾನ ತಂಡ ಭಾರತಕ್ಕೆ 339 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ 180 ರನ್‌ಗಳಿಂದ ಸೋಲನುಭವಿಸಿತು. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದರೆ, ಭಾರತ 2 ರಲ್ಲಿ ಜಯ ಸಾಧಿಸಿದೆ.
ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಗ್ರೂಪ್ ಹಂತದ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ ಕುರಿತು ಮಾತನಾಡಿದ ಮೊಹಮ್ಮದ್ ಅಮೀರ್, 'ಬುಮ್ರಾ ಇಲ್ಲದಿದ್ದರೆ, ಭಾರತದ ಬೌಲಿಂಗ್ ದಾಳಿಯು 40-50 ಪ್ರತಿಶತದಷ್ಟು ದುರ್ಬಲಗೊಳ್ಳುತ್ತದೆ. ಬುಮ್ರಾ ಇಲ್ಲದಿದ್ದರೆ ಭಾರತಕ್ಕೆ ದೊಡ್ಡ ನಷ್ಟ. ಅವರು ಭಾರತದ ಅಗ್ರ ಬೌಲರ್ ಆಗಿದ್ದು, ತಂಡವನ್ನು ಮುಂಚೂಣಿಯಿಂದ ಮುನ್ನಡೆಸಿದ್ದಾರೆ ಎಂದಿದ್ದಾರೆ.
ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಟೂರ್ನಿಯಲ್ಲಿ ಅಭಿಯಾನ ಶುರು ಮಾಡಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ. ಮಾರ್ಚ್ 2 ರಂದು ಟೀಮ್ ಇಂಡಿಯಾ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications