ರೋಹಿತ್‌ಗೆ ಗಾಯ, ವಿರಾಟ್ ವಿಶ್ರಾಂತಿ: ಕುತೂಹಲ ಮೂಡಿಸಿದೆ ಅಜರುದ್ದೀನ್ ಪ್ರತಿಕ್ರಿಯೆ!

ದಕ್ಷಿಣ ಆಫ್ರಿಕಾ ಸರಣಿಗೆ ಮುನ್ನವೇ ಟೀಮ್ ಇಂಡಿಯಾ ಬೇಡದ ಕಾರಣಕ್ಕೆ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಮ್ ಇಂಡಿಯಾದಲ್ಲಿ ಒಂದರ ಬಳಿಕ ಒಂದರಂತೆ ಗೊಂದಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು ತಂಡದಲ್ಲಿ ಏನಾಗುತ್ತಿದೆ ಎಂಬ ಅನುಮಾನಗಳು ಮೂಡುವಂತಾಗಿದೆ. ಏಕದಿನ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಣಕ್ಕಿಳಿಸಿದ ಬಳಿಕ ಈ ಬೆಳವಣಿಗೆಗಳು ನಡೆಯುತ್ತಿರುವುದು ಕಾಕತಾಳೀಯವಲ್ಲ ಎಂಬುದು ಭಾರತೀಯ ಕ್ರಿಕೆಟ್ ತಂಡವನ್ನು ಅನುಸರಿಸುತ್ತಿರುವ ಅಭಿಮಾನಿಗಳ ಅಭಿಪ್ರಾಯವಾಗಿದೆ. ಇದಕ್ಕೆ ಪೂರಕವಾಗಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಏಕದಿನ ಸರಣಿಯ ಪ್ರವಾಸಕ್ಕೆ ಮುನ್ನವೇ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯ ಬಳಿಕ ನಡೆಯಲಿರುವ ಏಕದಿನ ಸರಣಿಯಿಂದ ವಿಶ್ರಾಂತಿಯನ್ನು ಪಡೆಯಲು ನಿರ್ಧರಿಸಿದ್ದಾರೆ. ಇದಕ್ಕೆ ಮೊಹಮ್ಮದ್ ಅಜರುದ್ದೀನ್, ವಿಶ್ರಾಂತಿಯನ್ನು ಪಡೆಯುವುದು ತಪ್ಪಲ್ಲ ಆದರೆ ವಿಶ್ರಾಂತಿ ಪಡೆಯುತ್ತಿರುವ ಸಮಯ ಇನ್ನಷ್ಟು ಉತ್ತಮವಾಗಿರಬಹುದಿತ್ತು ಎಂದಿದ್ದಾರೆ. ಗಮನಾರ್ಹ ಸಂಗತಿಯೆಂದರೆ ಭಾರತೀಯ ಟೆಸ್ಟ್ ತಂಡದ ಉಪನಾಯಕನಾಗಿರುವ ರೋಹಿತ್ ಶರ್ಮಾ ಈ ಸರಣಿಗೂ ಮುನ್ನವೇ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.

ಟ್ವೀಟ್‌ನಲ್ಲಿ ಅಜರುದ್ದೀನ್ ಹೇಳಿದ್ದೇನು?
"ವಿರಾಟ್ ಕೊಹ್ಲಿ ಏಕದಿನ ಸರಣಿಗೆ ಲಭ್ಯವಿರುವುದಿಲ್ಲ ಎಂದು ಮಾಹಿತಿಯನ್ನು ನೀಡಿದ್ದಾರೆ. ಮತ್ತು ರೋಹಿತ್ ಶರ್ಮಾ ಮುಂಬರುವ ಟೆಸ್ಟ್ ಸರಣಿಗೆ ಲಭ್ಯವಿರುವುದಿಲ್ಲ. ವಿಶ್ರಾಂತಿಯನ್ನು ಪಡೆಯುವುದರಲ್ಲಿ ಯಾವುದೇ ಸಮಸ್ಯೆಗಳು ಇಲ್ಲ. ಆದರೆ ಅದರ ಸಮಯ ಉತ್ತಮವಾಗಿರಬಹುದಾಗಿತ್ತು. ಇದು ಇಬ್ಬರು ಆಟಗಾರರ ನಡುವಿನ ಬಿರುಕನ್ನು ಸಮರ್ಥಿಸುತ್ತದೆ" ಎಂದು ಮೊಹಮ್ಮದ್ ಅಜರುದ್ದೀನ್ ಟ್ವೀಟ್ ಮೂಲಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕುಟುಂಬದೊಂದಿಗೆ ಕಾಲ ಕಳೆಯಲು ವಿಶ್ರಾಂತಿ
ಸೀಮಿತ ಓವರ್‌ಗಳ ನಾಯಕನಾಗಿ ಮಾತ್ರವೇ ಉಳಿದಿರುವ ವಿರಾಟ್ ಕೊಹ್ಲಿ ಮುಂಬರುವ ಏಕದಿನ ಸರಣಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಇಂದು ಬಿಸಿಸಿಐ ಮೂಲಗಳಿಂದ ದೊರೆತ ಮಾಹಿತಿಯಂತೆ ವಿರಾಟ್ ಕೊಹ್ಲಿ ಟೆಸ್ಟ್ ಸರಣಿ ಮುಕ್ತಾಯವಾದ ಬಳಿಕ ಜನವರಿ ತಿಂಗಳಿನಲ್ಲಿ ವಿಶ್ರಾಂತಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. "ಹೌದು ವಿರಾಟ್ ಕೊಹ್ಲಿ ಜನವರಿ ತಿಂಗಳಿನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಲು ಸಣ್ಣ ವಿರಾಮವನ್ನು ಬಯಸಿದ್ದಾರೆ. ಅದರರ್ಥ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಅವರು ಹೊರಗುಳಿಯಲಿದ್ದಾರೆ" ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ವಿವರಗಳನ್ನು ನೀಡಿದ್ದರು.

ರೋಹಿತ್ ಶರ್ಮಾ ಗಾಯ, ಟೆಸ್ಟ್ ಸರಣಿಯಿಂದ ಹೊರಕ್ಕೆ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಅಭ್ಯಾಸದ ಸಂದರ್ಭದಲ್ಲಿ ಟೆಸ್ಟ್ ತಂಡದ ಉಪ ನಾಯಕನಾಗಿರುವ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಹೀಗಾಗಿ ಟೆಸ್ಟ್ ಸರಣಿಯಿಂದ ಅವರು ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಹೀಗಾಗಿ ಆ ಸ್ಥಾನಕ್ಕೆ ಭಾರತ ಎ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಬಿಸಿಸಿಐ ನಡೆಸಿಕೊಂಡ ರೀತಿಯಿಂದ ಕೊಹ್ಲಿಗೆ ಬೇಸರ
ಟಿ20 ವಿಶ್ವಕಪ್‌ನ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಟಿ20 ಮಾದರಿಯ ನಾಯಕತ್ವವನ್ನು ವಿಶ್ವಕಪ್ ಮುಕ್ತಾಯದ ಬಳಿಕ ತೊರೆಯುವುದಾಗಿ ಘೋಷಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಮುನ್ನ ಏಕದಿನ ನಾಯಕತ್ವ ತೊರೆಯಲು ಬಿಸಿಸಿಐ ವಿರಾಟ್ ಕೊಹ್ಲಿಗೆ 48 ಗಂಟೆಗಳ ಕಾಲಾವಕಾಶ ನೀಡಿತ್ತು. ಆದರೆ ಅದಕ್ಕೆ ವಿರಾಟ್ ಕೊಹ್ಲಿ ಸ್ಪಂದಿಸದಿದ್ದಾಗ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಕ್ಕಿಳಿಸಿ ರೋಹಿತ್ ಶರ್ಮಾಗೆ ಆ ಜವಾಬ್ಧಾರಿಯನ್ನು ನೀಡಲಾಗಿತ್ತು. ಅದಾದ ಬಳಿಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ತಂಡವನ್ನು ಕೂಡ ತಡವಾಗಿ ಸೇರಿಕೊಂಡಿದ್ದಾರೆ. ಇದೆಲ್ಲವೂ ಕೂಡ ವಿರಾಟ್ ಕೊಹ್ಲಿ ಅಸಮಾಧಾವನ್ನು ಬಹಿರಂಗವಾಗಿ ವ್ಯಕ್ತಪಡಿಸುವಂತೆ ಭಾಸವಾಗುತ್ತಿದೆ. ಈ ಮೂಲಕ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾರಿ ಹೇಳುತ್ತಿದೆ.
{document1}x
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications