ಶೀಘ್ರದಲ್ಲೇ ಭಾರತ ತಂಡಕ್ಕೆ ಮೊಹಮ್ಮದ್ ಶಮಿ ಕಮ್‌ಬ್ಯಾಕ್; ನೆಟ್ಸ್‌ನಲ್ಲಿ ಬೆವರರಿಸಿದ ವೇಗಿ!
ಜುಲೈ 17 ಬುಧವಾರ, ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಗಾಯದ ಚೇತರಿಸಿಕೊಂಡಿದ್ದಾರೆ. ಐಸಿಸಿ 2023ರ ಏಕದಿನ ವಿಶ್ವಕಪ್ ಟೂರ್ನಿ ಬಳಿಕ ಟೀಮ್ ಇಂಡಿಯಾದಿಂದ ಶಮಿ ದೂರ ಉಳಿದಿದ್ದಾರೆ.
ಇದೀಗ ಮೊಹಮ್ಮದ್ ಶಮಿ ಬಗ್ಗೆ ದೊಡ್ಡ ಸುದ್ದಿಯೊಂದು ಹೊರ ಬಿದ್ದಿದೆ. ಗಾಯದ ನೋವಿನಿಂದ ಗುಣಮುಖರಾಗಿರುವ ಶಮಿ ನೆಟ್ಸ್‌ನಲ್ಲಿ ಬೌಲಿಂಗ್ ಆರಂಭಿಸಿದ್ದಾರೆ. ಶಮಿ ಅವರ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಶಮಿ ಮೈದಾನಕ್ಕೆ ಮರಳಿದ್ದು, ನೆಟ್ಸ್‌ನಲ್ಲಿ ಬಿರುಸಿನ ಬೌಲಿಂಗ್ ಮಾಡುತ್ತಿದ್ದಾರೆ. ಇದನ್ನು ನೋಡಿದ ಕ್ರಿಕೆಟ್ ಅಭಿಮಾನಿಗಳು ಅದಷ್ಟು ಬೇಗ ಶಮಿ ಮೈದಾನಕ್ಕೆ ಮರಳುತ್ತಾರೆ ಎಂದು ಭವಿಷ್ಯ ನುಡಿದ್ದಾರೆ.
ಮೊಹಮ್ಮದ್ ಶಮ್ಮಿ ಅವರು ತಮ್ಮ ಕೊನೆಯ ಪಂದ್ಯವನ್ನು 2023ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ನಲ್ಲಿ ಆಡಿದರು. ಇದಾದ ನಂತರ, ಶಮಿ ತಮ್ಮ ಬಲ ಪಾದದ ಹಿಮ್ಮಡಿಯಲ್ಲಿ ಗಾಯಗೊಂಡ ಕಾರಣ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡಿದ್ದರು.
ನಂತರ ಶಮಿ ಅವರು ಮಾರ್ಚ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗ ಗಾಯದ ನೋವಿನಿಂದ ಶೀಘ್ರ ಚೇತರಿಸಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶಮಿ ಟೀಮ್ ಇಂಡಿಯಾಗೆ ಮರಳಬಹುದು ಎಂದು ನಿರೀಕ್ಷಿಸಲಾಗಿದೆ.
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಶಮಿ ಲಭ್ಯ?
ಮೊಹಮ್ಮದ್ ಶಮಿ ಬಾಂಗ್ಲಾದೇಶದ ವಿರುದ್ಧ ಪುನರಾಗಮನ ಮಾಡಬಹುದು ಎನ್ನಲಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ ಭಾರತ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ. ಶಮಿಗೆ ಈ ಸರಣಿಯಲ್ಲಿ ಆಡುವ ಅವಕಾಶ ಸಿಗಬಹುದು.
ಆದರೆ ಈ ಸರಣಿಯಲ್ಲಿ ಸ್ಥಾನ ಪಡೆಯುವುದು ಮೊಹಮ್ಮದ್ ಶಮಿ ಅವರ ಫಿಟ್ನೆಸ್ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುತ್ತದೆ. ಶಮಿ ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್‌ಗಳಲ್ಲಿ ಒಬ್ಬರು.
ಏಕದಿನ ವಿಶ್ವಕಪ್‌ನಲ್ಲಿ ಶಮಿ ಪ್ರದರ್ಶನ
2023ರ ಏಕದಿನ ವಿಶ್ವಕಪ್‌ನಲ್ಲಿ ಮೊಹಮ್ಮದ್ ಶಮಿ ಅಮೋಘ ಪ್ರದರ್ಶನ ನೀಡಿದ್ದರು . ಈ ಟೂರ್ನಿಯಲ್ಲಿ ಅವರು ಆಡಿದ 7 ಪಂದ್ಯಗಳಲ್ಲಿ ಗರಿಷ್ಠ 24 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಪೈಕಿ ನ್ಯೂಜಿಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಶಮಿ 7 ವಿಕೆಟ್ ಪಡೆದು ಮಿಂಚಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications