Mohammed Shami: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುವ ಬಯಕೆ ವ್ಯಕ್ತಪಡಿಸಿದ ಶಮಿ
ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿನ ಸೋಲಿನಿಂದ ಚೇತರಿಸಿಕೊಳ್ಳುತ್ತಿದೆ. ಆದರೆ ಇದೇ ವೇಳೆ ಭಾರತ ತಂಡಕ್ಕೆ ಶುಭ ಸುದ್ದಿಯೊಂದು ಹೊರಬಿದ್ದಿದೆ. ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ ಫಿಟ್ನೆಸ್ ಬಗ್ಗೆ ಅಪ್ಡೇಟ್ ನೀಡಿದ್ದಾರೆ.
ಮೊಹಮ್ಮದ್ ಶಮಿ ಮತ್ತೊಮ್ಮೆ ಭಾರತ ತಂಡಕ್ಕೆ ಪುನರಾಗಮನ ಮಾಡಲು ಶ್ರಮಿಸುತ್ತಿದ್ದಾರೆ. ಟೀಮ್ ಇಂಡಿಯಾ ಪರ ಶಮಿ ಶೀಘ್ರದಲ್ಲೇ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಆಸ್ಟ್ರೇಲಿಯಾ ಪ್ರವಾಸಕ್ಕೆ ಸಂಪೂರ್ಣ ಸಿದ್ಧ ಎಂದು ಶಮಿ ಹೇಳಿದ್ದಾರೆ. ಈ ಸುದ್ದಿ ತಿಳಿದ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಸವಾಲು ಎದುರಾಗಿದೆ.

ಕಳೆದ ವರ್ಷ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶಮಿ ಗಂಭೀರ ಗಾಯಕ್ಕೆ ಬಲಿಯಾಗಿದ್ದರು. ಇದಾದ ನಂತರ ಅವರು ಐಪಿಎಲ್ ಜೊತೆಗೆ 2024ರ ಟಿ 20 ವಿಶ್ವಕಪ್ ಅನ್ನು ಕಳೆದುಕೊಂಡರು. ಟೀಮ್ ಇಂಡಿಯಾಕ್ಕೆ ಹಿಂದಿರುಗುವ ಮೊದಲು ರಣಜಿ ಟ್ರೋಫಿಯಲ್ಲಿ ತನ್ನನ್ನು ತಾನು ಪರೀಕ್ಷಿಸಲು ಬಯಸುತ್ತೇನೆ ಎಂದು ಶಮಿ ತಿಳಿಸಿದ್ದಾರೆ.
ಎನ್‌ಸಿಎಯಲ್ಲಿ ತಯಾರು
ಟಿ20 ವಿಶ್ವಕಪ್‌ಗೂ ಮುನ್ನ ಶಮಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರ ಭಾರತ ತಂಡಕ್ಕೆ ಮರಳುವ ಬಗ್ಗೆ ತೀವ್ರ ಚರ್ಚೆ ನಡೆದಿದೆ. ಆದರೆ ಶಮಿ ಸಂಪೂರ್ಣ ಫಿಟ್ ಇಲ್ಲದ ಕಾರಣ ಅವರನ್ನು ಆಯ್ಕೆ ಮಾಡಿರಲಿಲ್ಲ. ಈ ನಡುವ ಶಮಿ ಆಸ್ಟ್ರೇಲಿಯಾ ಪ್ರವಾಸದಿಂದ ಹೊರಗುಳಿದಿರುವ ಊಹಪೋಪಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದ್ದವು. ಈ ಬಗ್ಗೆ ಸ್ವತಃ ಶಮಿ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದರು.
ಆದರೆ ಪ್ರಸ್ತುತ ಶಮಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ವೈದ್ಯಕೀಯ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋತ ನಂತರ, ಶಮಿ ನೆಟ್ಸ್‌ನಲ್ಲಿ ಅಭ್ಯಾಸ ಮಾಡಲು ಅದೇ ಮೈದಾನಕ್ಕೆ ಹೋಗಿದ್ದರು. ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭಮನ್ ಗಿಲ್ ಹಾಗೂ ಕೋಚ್ ಅಭಿಷೇಕ್ ನಾಯರ್‌ಗೆ ಶಮಿ ಕೆಲಕಾಲ ಬೌಲಿಂಗ್ ಮಾಡಿದ್ದರು. ಶಮಿ ಎಡಗಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.
ಶಮಿ ಹೇಳಿದ್ದೇನು?
ಕಾರ್ಯಕ್ರಮವೊಂದರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಮಿ, 'ನಿನ್ನೆಯ ಬೌಲಿಂಗ್‌ನಿಂದ ನನಗೆ ತುಂಬಾ ಸಂತೋಷವಾಗಿದೆ. ಅದಕ್ಕೂ ಮೊದಲು, ನಾನು ಹೆಚ್ಚಿನ ಹೊರೆ ತೆಗೆದುಕೊಳ್ಳಲು ಬಯಸದ ಕಾರಣ ಅರ್ಧ ರನ್-ಅಪ್‌ನಿಂದ ಬೌಲಿಂಗ್ ಮಾಡುತ್ತಿದ್ದೆ. ಆದರೆ ನಿನ್ನೆ ನಾನು ಪೂರ್ಣ ಶಕ್ತಿಯೊಂದಿಗೆ ಬೌಲಿಂಗ್ ಮಾಡಲು ನಿರ್ಧರಿಸಿದೆ. ಅದರಂತೆ ನಾನು 100 ರಷ್ಟು ಬೌಲಿಂಗ್ ಮಾಡಿದ್ದು, ಫಲಿತಾಂಶವು ಉತ್ತಮವಾಗಿದೆ. ನಾನು 100 ರಷ್ಟು ನೋವು ಮುಕ್ತನಾಗಿದ್ದೇನೆ. ನಾನು ಆಸ್ಟ್ರೇಲಿಯಾ ಸರಣಿಗೆ ಆಡಲು ಸಾಧ್ಯವೇ? ಇಲ್ಲವೇ? ಎಂದು ಬಹಳ ದಿನಗಳಿಂದ ಎಲ್ಲರೂ ಯೋಚಿಸುತ್ತಿದ್ದರು. ಆದರೆ ಇದಕ್ಕೆ ಇನ್ನೂ ಸ್ವಲ್ಪ ಸಮಯವಿದೆ ಎಂದು ಹೇಳಿದ್ದಾರೆ.
ಆಸ್ಟ್ರೇಲಿಯಾ ಸರಣಿಗೆ ತಯಾರು
ನಾನು ಸಂಪೂರ್ಣ ಫಿಟ್ ಆಗಿದ್ದೇನೆ. ಆಸ್ಟ್ರೇಲಿಯ ಸರಣಿಗೆ ನಾನು ಎಷ್ಟು ಫಿಟ್ ಆಗಿದ್ದೇನೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ನನ್ನ ಮನಸ್ಸಿನಲ್ಲಿದೆ ಎಂದು ಶಮಿ ತಿಳಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಮಗೆ ಯಾವ ರೀತಿಯ ಬೌಲಿಂಗ್ ಮಾಡಬಬೇಕು ಎಂಬುದನ್ನು ನೋಡಬೇಕು. ನಾನು ಮೈದಾನದಲ್ಲಿ ಹೆಚ್ಚು ಸಮಯ ಕಳೆಯಬೇಕಾಗುತ್ತದೆ. ನಾನು ಹೊರಡುವ ಮೊದಲು ಕೆಲವು (ರಣಜಿ) ಪಂದ್ಯಗಳನ್ನು ಆಡಲು ಬಯಸುತ್ತೇನೆ ಎನ್ನುವ ಮೂಲಕ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುವ ಬಯಕೆಯನ್ನು ಶಮಿ ವ್ಯಕ್ತಪಡಿಸಿದ್ದಾರೆ.
ರೋಹಿತ್ ಕಳವಳ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶಮಿ ಫಿಟ್ನೆಸ್ ಬಗ್ಗೆ ಪ್ರಶ್ನೆ ಕೇಳಿದಾಗ ಅವರು ಕಳವಳ ವ್ಯಕ್ತಪಡಿಸಿದ್ದರು. ಶಮಿಯನ್ನು ಆಸ್ಟ್ರೇಲಿಯಾಕ್ಕೆ ಕರೆದುಕೊಂಡು ಹೋಗುವ ಮೂಲಕ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಹಿಟ್‌ಮ್ಯಾನ್ ಸೂಚಿಸಿದ್ದರು. ಆದರೆ ಈಗ ಶಮಿ ಉತ್ಸಾಹ ನೋಡಿದರೆ ನವೆಂಬರ್ 22 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಸರಣಿಗೆ ತಯಾರಾಗಿರುವ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications