For Quick Alerts
ALLOW NOTIFICATIONS  
For Daily Alerts
 

IND vs NZ 2nd Test: ಭಾರತದ ಪ್ಲೇಯಿಂಗ್-11 ರಿಂದ 'ಡಿಎಸ್‌ಪಿ ಸಾಹೇಬ್ರು' ಹೊರಗುಳಿಯುತ್ತಾರಾ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯ ಗುರುವಾರ (ಅಕ್ಟೋಬರ್ 24) ರಿಂದ ಪುಣೆಯಲ್ಲಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಕಿವೀಸ್ ತಂಡ 8 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆದ್ದು 2-0 ಅಂತರದ ಮುನ್ನಡೆ ಸಾಧಿಸುವತ್ತ ದೃಷ್ಟಿ ನೆಟ್ಟಿದೆ. ಮತ್ತೊಂದೆಡೆ ಭಾರತ ಬಲಿಷ್ಠ ಪುನರಾಗಮನದತ್ತ ಕಣ್ಣಿಟ್ಟಿದೆ. ಭಾರತ ತವರು ನೆಲದಲ್ಲಿ ಕಳೆದ 18 ಸರಣಿಗಳಲ್ಲಿ ಸೋತಿಲ್ಲ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲು ರೆಡಿಯಾಗಿದೆ. ಆದರೆ, ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳು ಮಾಡುವ ಸಾಧ್ಯತೆಗಳಿವೆ.

Mohammad Siraj out of India playing-11 for second Test against New Zealand

ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ನಾಯಕ ರೋಹಿತ್ ಶರ್ಮಾಗೆ ಟೆನ್ಷನ್ ಹೆಚ್ಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ 'ಡಿಎಸ್‌ಪಿ ಸಾಹೇಬ್' ಎಂದೇ ಖ್ಯಾತರಾಗಿರುವ ಸಿರಾಜ್ ಈ ವರ್ಷ ತವರು ನೆಲದಲ್ಲಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಿಲ್ಲ. ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಅವರಿಗೆ ಸಾಥ್ ನೀಡಲು ಸಿರಾಜ್ ಅವರಿಂದ ಸಾಧ್ಯವಾಗಿಲ್ಲ. ಸಿರಾಜ್ ತವರಿನಲ್ಲಿ ನಡೆದ ಕಳೆದ 7 ಟೆಸ್ಟ್ ಪಂದ್ಯಗಳ 14 ಇನ್ನಿಂಗ್ಸ್‌ಗಳಲ್ಲಿ ಕೇವಲ 12 ವಿಕೆಟ್‌ಗಳನ್ನು ಗಳಿಸಲು ಶಕ್ತರಾಗಿದ್ದಾರೆ. ಅವರ ಪ್ರದರ್ಶನವು ರೋಹಿತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ಚಿಂತೆಗೀಡು ಮಾಡಿದೆ.

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಕೈಬಿಟ್ಟರೆ, ಅವರ ಬದಲಿಗೆ ವೇಗದ ಬೌಲರ್ ಯಾರು ಎಂಬ ಪ್ರಶ್ನೆ ಎದಿದ್ದೆ. ಪುಣೆ ಪಿಚ್ ಸ್ಪಿನ್ ಬೌಲಿಂಗ್‌ಗೆ ಹೆಚ್ಚು ಅನುಕೂಲಕರವಾಗಿದೆ. ಹೀಗಾಗಿ ನಾಯಕ ರೋಹಿತ್ ಹೆಚ್ಚುವರಿ ಸ್ಪಿನ್ ದಾಳಿಯೊಂದಿಗೆ ಕಣಕ್ಕಿಳಿಯಬಹುದು. ಇಂತಹ ಸಂದರ್ಭದಲ್ಲಿ ಸಿರಾಜ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವರಿಗೆ ತಂಡದ ಆಡುವ ಅವಕಾಶ ಸಿಗಬಹುದು. ಇತ್ತೀಚೆಗೆ ವಾಷಿಂಗ್ಟನ್ ಸುಂದರ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಬೌಲಿಂಗ್ ಮಾತ್ರವಲ್ಲದೆ, ಬ್ಯಾಟಿಂಗ್‌ನಲ್ಲಿಯೂ ಅವರು ಮಿಂಚು ಹರಿಸಿದ್ದಾರೆ.

ಸಿರಾಜ್ ಟೆಸ್ಟ್ ವೃತ್ತಿಜೀವನ

ಭಾರತದ ಪರ ಟೆಸ್ಟ್‌ ಕ್ರಿಕೆಟ್‌ ಸಿರಾಜ್ 2020ರಲ್ಲಿ ಪದಾರ್ಪಣೆ ಮಾಡಿದ್ದರು. ಅಂದಿನಿಂದ ಅವರು 30 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 80 ವಿಕೆಟ್ ಪಡೆದಿದ್ದಾರೆ. ಸಿರಾಜ್ ತಮ್ಮ ವೃತ್ತಿಜೀವನದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿರುವ 2 ಟೆಸ್ಟ್ ಪಂದ್ಯಗಳಲ್ಲಿ 5 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ತವರು ನೆಲದಲ್ಲಿ ಸಿರಾಜ್ 13 ಪಂದ್ಯಗಳಲ್ಲಿ 19 ವಿಕೆಟ್ ಪಡೆದು ಹೆಚ್ಚು ಪ್ರಭಾವ ಬೀರಿಲ್ಲ. ಆದರೆ ವಿದೇಶದಲ್ಲಿ ಸಿರಾಜ್ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ವಿದೇಶಿ ನೆಲದಲ್ಲಿ ಸಿರಾಜ್ ಒಟ್ಟು 17 ಪಂದ್ಯಗಳಲ್ಲಿ 61 ವಿಕೆಟ್ ಕಬಳಿಸಿದ್ದಾರೆ.

Story first published: Wednesday, October 23, 2024, 9:21 [IST]
Other articles published on Oct 23, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+