"ಈ ಯುವ ಆಟಗಾರನಿಗಾಗಿ ರಾಹುಲ್ ಅಥವಾ ಐಯ್ಯರ್‌ಗೆ ಕೊಕ್ ಕೊಡಲೇ ಬೇಕು!"

ಟೀಮ್ ಇಂಡಿಯಾದಲ್ಲಿ ಸಾಕಷ್ಟು ಯುವ ಆಟಗಾರರು ಅದ್ಭುತ ಪ್ರದರ್ಶನದ ಮೂಲಕ ಭರಬಸೆ ಮೂಡಿಸಿದ್ದಾರೆ. ಅದರಲ್ಲೂ ಕೆಲ ಆಟಗಾರರಂತೂ ಸಿಕ್ಕ ಅವಕಾಶವನ್ನು ಅದದಭುತವಾಗಿ ಬಳಸಿಕೊಳ್ಳುತ್ತಿದ್ದು ಸತತವಾಗಿ ಸ್ಥಿರ ಪ್ರದರ್ಶನ ನೀಡುತ್ತಲೇ ಬರುತ್ತಿದ್ದಾರೆ. ಹಾಗಿದ್ದರೂ ತಂಡದಲ್ಲಿ ಪೈಪೋಟಿ ಹೆಚ್ಚಾಗಿರುವ ಕಾರಣ ಆಡುವ ಬಳಗದಲ್ಲಿ ಸ್ಥಾನ ಗಟ್ಟಿಕೊಳಿಸಲು ಸಾಧ್ಯವಾಗುತ್ತಿಲ್ಲ. ಟೀಮ್ ಇಂಡಿಯಾದ ಯುವ ಆಟಗಾರ ಶುಬ್ಮನ್ ಗಿಲ್ ಇಂಥಾ ಅದ್ಭುತ ಪ್ರದರ್ಶನ ನಿಡುತ್ತಿರುವ ಆಟಗಾರರಲ್ಲಿ ಅಗ್ರಗಣ್ಯ.
ಬಹಳ ಸಮಯಗಳಿಂದ ಅತ್ಯುತ್ತಮ ಆಟವನ್ನು ಪ್ರದರ್ಶಿಸಿಕೊಂಡು ಬರುತ್ತಿದ್ದರೂ ಗಿಲ್‌ಗೆ ತಂಡದಲ್ಲಿ ಸ್ಥಾನವನ್ನು ಭದ್ರಪಡಿಸಲು ಇನ್ನು ಕೂಡ ಸಾಧ್ಯವಾಗಿಲ್ಲ. ಇನ್ನು ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚುವ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಈ ಪ್ರದರ್ಶನದ ಬಳಿಕ ಅನೇಕ ಮಾಜಿ ಕ್ರಿಕೆಟಿಗರು ಗಿಲ್ ಸಾಮರ್ಥ್ಯದ ಬಗ್ಗೆ ಮಾತನಾಡಿದ್ದು ಮೊಹಮ್ಮದ್ ಕೈಫ್ ಟೀಮ್ ಇಂಡಿಯಾದ ಇಬ್ಬರು ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಮೊದಲ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯತ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಗೆದ್ದುಕೊಂಡಿದೆ. ಅಂತಿಮ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ಬಾಂಗ್ಲಾದೇಶಕ್ಕೆ 513 ರನ್‌ಗಳ ಬೃಹತ್ ಗುರಿಯನ್ನು ನಿಗದಿಪಡಿಸಿತ್ತು. ಇದನ್ನು ಬೆನ್ನಟ್ಟಿದ ಬಾಂಗ್ಲಾ 324 ರನ್‌ಗಳಿಗೆ ಆಲೌಟ್ ಆಗುವ ಮೂಲಕ 188 ರನ್‌ಗಳ ಬೃಹತ್ ಸೋಲು ಅನುಭವಿಸಿತು.ಈ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಶುಬ್ಮನ್ ಗಿಲ್ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಮಿಂಚಿದರು. ಇನ್ನು ಅನುಭವಿ ಚೇರ್ತೇಶ್ವರ್ ಪೂಜಾರ ಮೊದಲ ಇನ್ನಿಂಗ್ಸ್‌ನಲ್ಲಿ 90 ರನ್ ಗಳಸಿದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದರು.

ರೋಹಿತ್ ಶರ್ಮಾ ಬದಲಿಗೆ ಸ್ಥಾನ ಪಡೆದ ಗಿಲ್
ಇನ್ನು ಈ ಪಂದ್ಯದಲ್ಲಿ ಶುಬ್ಮನ್ ಗಿಲ್ ರೋಹಿತ್ ಶರ್ಮಾ ಬದಲಿಗೆ ಆಡುವ ಅವಕಾಶ ಗಳಿಸಿಕೊಂಡಿದ್ದರು. ರೋಹಿತ್ ಗಾಯದ ಕಾರಣ ಮೊದಲ ಪಂದ್ಯಕ್ಕೆ ಅಲಭ್ಯವಾಗಿದ್ದರು. ಈ ಅವಕಾಶವನ್ನು ಬಳಸಿಕೊಂಡ ಗಿಲ್ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಈ ವಿಚಾರವಾಗಿ ಮೊಹಮ್ಮದ್ ಕೈಫ್ ಮಾತನಾಡಿದ್ದು ಶುಬ್ಮನ್ ಗಿಲ್ ಅವರನ್ನು ಬಹಳ ಸಮಯಗಳ ಕಾಲ ಹೊರಗಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಇಷ್ಟು ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರನಿಗೆ ಆಡುವ ಬಳಗದಲ್ಲಿ ಸೇರ್ಪಡೆಗೊಳಿಸುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದಿದ್ದಾರೆ.

ಇಂಥಾ ಆಟಗಾರನನ್ನು ಹೆಚ್ಚು ಕಾಲ ತಡೆಯಲು ಸಾಧ್ಯವಿಲ್ಲ
ಮುಂದುವರಿದು ಮಾತನಾಡಿದ ಕೈಫ್ ಶುಬ್ಮನ್ ಗಿಲ್ ಕೌಶಲ್ಯದ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. "ಶುಬ್ಮನ್ ಗಿಲ್ ತಾಂತ್ರಿಕವಾಗಿ ಅದ್ಭುತವಾದ ಕೌಶಲ್ಯ ಹೊಂದಿದ್ದಾರೆ. ಅತ್ಯಂತ ಸ್ಥಿರವಾಗಿ ಆಡುತ್ತಿದ್ದು ರನ್‌ಗಳನ್ನು ಗಳಿಸುತ್ತಿದ್ದಾರೆ. ಆತ ಐಪಿಎಲ್‌ನಲ್ಲಿ ಅದ್ಭುತವಾಗಿ ಆಡುತ್ತಿದ್ದು ಗುಜರಾತ್ ಟೈಟನ್ಸ್ ಚಾಂಪಿಯನ್ ಪಟ್ಟಕ್ಕೇರಿದೆ. ಏಕದಿನ ಹಾಗೂ ಟೆಸ್ಟ್‌ನಲ್ಲಿಯೂ ಶತಕ ಸಿಡಿಸಿದ್ದಾರೆ. ಹಾಗಾಗಿ 2022ರಲ್ಲಿ ಗಿಲ್ ಆಟ ಅಮೋಘವಾಗಿತ್ತು. ಇಂಥಾ ಆಟಗಾರನ್ನು ಸುದೀರ್ಘ ಕಾಲ ತಡೆಯಲು ಸಾಧ್ಯವಿಲ್ಲ. ಕೆಎಲ್ ರಾಹುಲ್ ಅಥವಾ ರ್ಶರೇಯಸ್ ಐಯ್ಯರ್ ಅವರನ್ನು ಆ ಸ್ಥಾನಕ್ಕಾಗಿ ಹೊರಗಿಡಬೇಕಾಗಬಹುದು. ಆತನಿಗೆ ಅವಕಾಶ ಸಿಕ್ಕಾಗೆಲ್ಲಾ ಅತ್ಯುತ್ತಮವಾಗುತ್ತಲೇ ಇದ್ದಾರೆ" ಎಂದು ಮೊಹಮ್ಮದ್ ಕೈಫ್ ಪ್ರತಿಕ್ರಿಯಿಸಿದ್ದಾರೆ.

ಅಂತಿಮ ಪಂದ್ಯಕ್ಕೆ ಲಭ್ಯವಿದ್ದಾರಾ ರೋಹಿತ್
ಇನ್ನು ಈ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಡಿಸೆಂಬರ್ 22ರಿಂದ ಆರಂಭವಾಗಲಿದೆ. ಈ ಪಂದ್ಯಕ್ಕೂ ಟೀಮ್ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಲಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಮತ್ತೊಮ್ಮೆ ಭಾರತ ತಂಡವನ್ನು ಮುನ್ನಡೆಸಲಿದ್ದು ಶುಬ್ಮನ್ ಗಿಲ್ ಆರಂಭಿಕನಾಗಿ ಮತ್ತಿಂದು ಅವಕಾಶ ಪಡೆಯಲಿದ್ದಾರೆ. ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಫೀಲ್ಡಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅಂತಿಮ ಏಕದಿನ ಪಂದ್ಯ ಹಾಗೂ ಮೊದಲ ಟೆಸ್ಟ್ ಪಂದ್ಯದಿಂದಲೂ ರೋಹಿತ್ ಹೊರಗುಳಿದಿದ್ದರು. ಇದೀಗ ಅಂತಿಮ ಪಂದ್ಯಕ್ಕೂ ಅಲಭ್ಯವಾಗುವುದು ದೃಢಪಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications