World cup 2023: ಪಾದದಲ್ಲಿ ನೋವಿದ್ದರೂ ಚುಚ್ಚುಮದ್ದು ತೆಗೆದುಕೊಂಡು ಬೌಲಿಂಗ್ ಮಾಡಿದ್ದ ಶಮಿ
ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ. ಮೊಹಮ್ಮದ್ ಶಮಿ 7 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಆದರೆ ಮೊಹಮ್ಮದ್ ಶಮಿ ಭಾರತ ತಂಡದ ಭಾಗವಾಗಿಲ್ಲ. ಮೊಹಮ್ಮದ್ ಶಮಿ ಗಾಯದ ಕಾರಣದಿಂದ ದಕ್ಷಿಣ ಆಫ್ರಿಕಾದ ಪ್ರವಾಸ ಬೆಳಿಸಲಿಲ್ಲ. ಅದೇ ಸಮಯದಲ್ಲಿ, ಮೊಹಮ್ಮದ್ ಶಮಿ ಅವರ ಫಿಟ್ನೆಸ್‌ಗೆ ಸಂಬಂಧಿಸಿದ ದೊಡ್ಡ ಮಾಹಿತಿಯು ಇದೀಗ ಹೊರಬಂದಿದೆ. ಪಿಟಿಐ ಪ್ರಕಾರ, ಮೊಹಮ್ಮದ್ ಶಮಿ ವಿಶ್ವಕಪ್ ಪಂದ್ಯಗಳ ಸಮಯದಲ್ಲಿ ನೋವಿನಿಂದ ಬಳಲುತ್ತಿದ್ದರು. ಅಲ್ಲದೆ ಅವರು ಪಂದ್ಯವನ್ನು ಆಡುವ ಮುನ್ನ ಚುಚ್ಚುಮದ್ದು ತೆಗೆದುಕೊಳ್ಳುವುದನ್ನು ಮುಂದುವರೆಸಿದರು.

ವಿಶ್ವಕಪ್ ವೇಳೆ ನಿರಂತರವಾಗಿ ಚುಚ್ಚುಮದ್ದು
ವೇಗದ ಬೌಲರ್‌ಗೆ ಎಡ ಹಿಮ್ಮಡಿ ಸಮಸ್ಯೆ ಹಳೆಯದಾಗಿದೆ ಎಂದು ಅವರ ಜೊತೆ ಆಡಿದ ಕ್ರಿಕೆಟಿಗರೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ. ವಿಶ್ವಕಪ್ ಪಂದ್ಯಗಳ ವೇಳೆ ಮೊಹಮ್ಮದ್ ಶಮಿ ನೋವಿನಿಂದ ಬಳಲುತ್ತಿದ್ದರು. ಆದರೆ ನಿರಂತರವಾಗಿ ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಿದ್ದರು ಎಂದು ಅವರು ಹೇಳಿದರು. ಈ ಮೂಲಕ ಮೊಹಮ್ಮದ್ ಶಮಿ ವಿಶ್ವಕಪ್‌ನಲ್ಲಿ ಆಟ ಮುಂದುವರಿಸಿದ್ದಾರೆ.
ಶಮಿ ಬದಲಿಗೆ ಕನ್ನಡಿಗನಿಗೆ ಸ್ಥಾನ
ವಿಶ್ವಕಪ್ ನಂತರ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿದೆ. ಆದರೆ ಮೊಹಮ್ಮದ್ ಶಮಿ ಟೀಂ ಇಂಡಿಯಾ ಪರ ಆಡುತ್ತಿಲ್ಲ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 2 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ಟೀಮ್ ಇಂಡಿಯಾ ಸೋಲು ಕಂಡಿದೆ.

ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ಪ್ಲೇಯಿಂಗ್ ಇಲೆವೆನ್‌ನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಪ್ರಸಿದ್ಧ ಕೃಷ್ಣ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ಪ್ರಸಿದ್ಧ್ ಕೃಷ್ಣ ಸೆಂಚುರಿಯನ್ ಟೆಸ್ಟ್ ನಲ್ಲಿ 20 ಓವರ್ ಬೌಲ್ ಮಾಡಿದ್ದರು. ಇದರಲ್ಲಿ 93 ರನ್‌ಗಳನ್ನು ನೀಡಿ 4.7 ರ ಸರಾಸರಿಯಲ್ಲಿ ರನ್ ನೀಡಿದ್ದಾರೆ. ಅಲ್ಲದೆ, ಕೇವಲ 1 ವಿಕೆಟ್ ಅನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ.
ಮೊಹಮ್ಮದ್ ಶಮಿ ಕಳೆದ ಬಾರಿಯ ಏಕದಿನ ವಿಶ್ವಕಪ್‌ನಲ್ಲೂ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದರು. ಅಲ್ಲದೆ ಅಫ್ಘಾನಿಸ್ತಾನ ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿ ಬೀಗಿದ್ದರು.
2023ರ ಏಕದಿನ ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಶಮಿ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಆದರೆ ಬಾಂಗ್ಲಾದೇಶದ ವಿರುದ್ಧ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಕ್ಕೆ ತುತ್ತಾದರು. ಅವರು ಗಾಯಕ್ಕೆ ತುತ್ತಾದ ಕಾರಣ ಬೆಂಚ್ ಕಾಯುತ್ತಿದ್ದ ಮೊಹಮ್ಮದ್ ಶಮಿ ಆಡುವ ಹನ್ನೊಂದರ ಬಳಗ ಸೇರಿಕೊಂಡರು.
ಮೊಹಮ್ಮದ್ ಶಮಿ ಟೀಮ್ ಇಂಡಿಯಾಕ್ಕೆ ಸೇರಿಕೊಂಡ ನಂತರ ಟೀಮ್ ಇಂಡಿಯಾದ ಲಕ್ ಬದಲಾಯಿತು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಶಮಿ ಅಬ್ಬರಿಸಿದರು. ಮಿಡ್ಲ್ ಓವರ್‌ಗಳಲ್ಲಿ ನಿರಂತರವಾಗಿ ವಿಕೆಟ್ ಕಬಳಿಸಿದ ಶಮಿ ತಂಡಕ್ಕೆ ಆಧಾರವಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications