Mohammed Shami: ಐಸಿಸಿ ಏಕದಿನ ಟೂರ್ನಿಯಲ್ಲಿ ಭಾರತದ ಪರ ಶಮಿ ವಿಶೇಷ ದಾಖಲೆ
ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ಅವರು ಗುರುವಾರ (ಫೆಬ್ರವರಿ 20) ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶ ವಿರುದ್ಧ ಮಾರಕ ಬೌಲಿಂಗ್ ಮಾಡಿದರು. ಶಮಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಬಾಂಗ್ಲಾದೇಶ ತಂಡವನ್ನು ಕಟ್ಟಿ ಹಾಕಿದರು. ಈ ಮೂಲಕ ತಮ್ಮ ಹೆಸರಿನಲ್ಲಿ ಅನೇಕ ದಾಖಲೆಗಳನ್ನು ನಿರ್ಮಿಸಿದರು. ಶಮಿಗೆ ಐಸಿಸಿ ಟೂರ್ನಿ ಮೇಲೆ ವಿಶೇಷ ಒಲವು ಇದ್ದು, ಅದರಲ್ಲಿ ಅವರು ವಿಶೇಷ ಸಾಧನೆ ಮಾಡಿದ್ದಾರೆ.
ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅವರು ಈಗ ಐಸಿಸಿ ಟೂರ್ನಿಗಳಲ್ಲಿ 60 ವಿಕೆಟ್‌ಗಳನ್ನು ಹೊಂದಿದ್ದಾರೆ. ಇದರೊಂದಿಗೆ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಮತ್ತು ಅಜಿತ್ ಅಗರ್ಕರ್ ದಾಖಲೆಯನ್ನು ಮುರಿದಿದ್ದಾರೆ.

ದಿಗ್ಗಜ ಮಾಜಿ ವೇಗಿ ಜಹೀರ್ ಖಾನ್ ಅವರು ಏಕದಿನ ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ ಸೇರಿದಂತೆ ಟೀಮ್ ಇಂಡಿಯಾ ಪರ 59 ವಿಕೆಟ್‌ಗಳನ್ನು ಕಬಳಿಸಿದ್ದರು. ದುಬೈನಲ್ಲಿ ಶಮಿ 5 ವಿಕೆಟ್‌ಗಳನ್ನು ಪಡೆಯುವ ಮೂಲಕ ಅವರಿಗಿಂತ ಮುನ್ನುಗಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಮಿ 10 ಓವರ್‌ಗಳಲ್ಲಿ 53 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಪಡೆದು ಮಿಂಚಿದರು.
ಐಸಿಸಿ ಟೂರ್ನಿಗಳಲ್ಲಿ ಹೆಚ್ಚು ವಿಕೆಟ್ ಪಡೆದವರು
ಮೊಹಮ್ಮದ್ ಶಮಿ - 60 ವಿಕೆಟ್
ಜಹೀರ್ ಖಾನ್ - 59 ವಿಕೆಟ್
ಜಾವಗಲ್ ಶ್ರೀನಾಥ್ - 47 ವಿಕೆಟ್
ರವೀಂದ್ರ ಜಡೇಜಾ - 43 ವಿಕೆಟ್
ಜಸ್ಪ್ರೀತ್ ಬುಮ್ರಾ - 42 ವಿಕೆಟ್
ಅನಿಲ್ ಕುಂಬ್ಳೆ - 42 ವಿಕೆಟ್
ವಿಶೇಷ ಪಟ್ಟಿಯಲ್ಲಿ ಶಮಿ ಹೆಸರು
ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ 53 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದ ಶಮಿ ಮತ್ತೊಂದು ದಾಖಲೆ ಮಾಡಿದರು. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಭಾರತದ ಪರ ಎರಡನೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಶಮಿ ಸಚಿನ್ ತೆಂಡೂಲ್ಕರ್ ಮತ್ತು ಜಹೀರ್ ಖಾನ್ ಅವರನ್ನು ಹಿಂದಿಕ್ಕಿದ್ದಾರೆ. ರವೀಂದ್ರ ಜಡೇಜಾ ಅವರಿಗಿಂತ ಮುಂದಿದ್ದಾರೆ. ಜಡೇಜಾ 2013ರ ಚಾಂಪಿಯನ್ಸ್ ಟ್ರೋಫಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 36 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications