ಟೀಮ್ ಇಂಡಿಯಾಕ್ಕೆ ಕಂ ಬ್ಯಾಕ್ ಮಾಡುವ ಸನಿಹದಲ್ಲಿ ಸ್ವಿಂಗ್ ಬೌಲರ್
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಟೀಮ್ ಇಂಡಿಯಾಕ್ಕೆ ವಾಪಸ್ ಆಗಲು ಪ್ಲ್ಯಾನ್ ನಡೆಸಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಶಮಿ, ಮೈದಾನಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಅವರು ಈ ಮೊದಲೇ ಸೂಚಿಸಿದಂತೆ, ರಾಷ್ಟ್ರೀಯ ತಂಡವನ್ನು ಸೇರುವ ಮೊದಲು, ದೇಶೀಯ ರಣಜಿ ಟೂರ್ನಿಯಲ್ಲಿ ಆಡಲು ಬಯಸಿದ್ದಾರೆ.
ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಿರುವ ಶಮಿ, ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಗಳ ಮೂಲಕ ಅಂಗಳ ಪ್ರವೇಶಿಸಲು ಯೋಜನೆ ರೂಪಿಸಿಕೊಂಡಿದ್ದಾರೆ. ಈಗಾಗಲೇ ರಣಜಿ ಟೂರ್ನಿಗೆ ಪ್ರಕಟಿಸಿರುವ ಬಂಗಾಳ ಸಂಭಾವ್ಯ 31 ಜನರ ತಂಡದಲ್ಲಿ ಶಮಿ ಅವರಿಗೆ ಅವಕಾಶ ನೀಡಲಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಶಮಿ ಅವರು, ಮೈದಾನಕ್ಕೆ ಮರಳಲು ಸನ್ನದ್ಧರಾಗಿದ್ದಾರೆ.

ಅಭ್ಯಾಸ ಆರಂಭ
ಭಾರತ ಶ್ರೀಲಂಕಾ ಪ್ರವಾಸ ಬೆಳೆಸಿದಾಗ ಬಿಸಿಸಿಐ ಆಯ್ಕೆ ಸಮಿತಿ ಮುಖಸ್ಥ ಅಜಿತ್ ಅಗರ್ಕರ್, ಶಮಿ ಬೌಲಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಸರಣಿಯಿಂದ ಅವರು ತಂಡಕ್ಕೆ ಲಭ್ಯರಾಗಬಹುದು ಎಂದು ತಿಳಿಸಿದ್ದರು. ಯಾವ ಸರಣಿಗೆ ಶಮಿ ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ರಣಜಿ ಆಡುತ್ತಾರಾ ಶಮಿ?
ಇನ್ನು ಶಮಿ ತಮ್ಮ ಫಿಟ್ನೆಸ್ ಪರೀಕ್ಷಿಸಿಕೊಳ್ಳಲು ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಅಖಾಡ ಪ್ರವೇಶಿಸಲಿದ್ದಾರೆ. ಇವರು ಉತ್ತರ ಪ್ರದೇಶ ಹಾಗೂ ಬಿಹಾರ ವಿರುದ್ಧದ ಪಂದ್ಯದಲ್ಲಿ ಮೈದಾನ ಪ್ರವೇಶಿಸಬಹುದು ಎಂದು ಅಂದಾಜಿಸಲಾಗಿದೆ. ಅಕ್ಟೋಬರ್ 11 ರಿಂದ ಉತ್ತರ ಪ್ರದೇಶ ವಿರುದ್ಧ ಮತ್ತು ಅಕ್ಟೋಬರ್ 18 ರಿಂದ ಬಿಹಾರ ವಿರುದ್ಧ ಪಂದ್ಯ ನಡೆಯಲಿದೆ. ಆದರೆ, ಶಮಿ ವಾಪಸಾತಿಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ವಿಶ್ವಕಪ್ ಶಮಿ ಅಬ್ಬರ
ಟೀಮ್ ಇಂಡಿಯಾದ ಭರವಸೆಯ ಬೌಲರ್ ಶಮಿ, 2023ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಅಮೋಘ ಬೌಲಿಂಗ್ ನಡೆಸಿದ್ದರು. ಬಾಂಗ್ಲಾದೇಶದ ವಿರುದ್ಧ ಹಾರ್ದಿಕ್ ಪಾಂಡ್ಯ ಗಾಯಕ್ಕೆ ತುತ್ತಾದ ಬಳಿಕ ಶಮಿ, ತಂಡದಲ್ಲಿ ಆಡುವ ಅವಕಾಶವನ್ನು ಪಡೆದರು. ಸಿಕ್ಕ ಅವಕಾಶದಲ್ಲಿ ಅಬ್ಬರದ ಬೌಲಿಂಗ್ ನಡೆಸಿದ ಶಮಿ, ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಫೈನಲ್ ಪಂದ್ಯದ ವೇಳೆ ಅವರ ಪಾದಕ್ಕೆ ಗಾಯವಾಗಿತ್ತು. ಪಾದದ ಗಾಯದಿಂದಾಗಿ ಶಮಿ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗದ ಬಳಿಕ ಶಮಿ ಗುಣ ಮುಖರಾಗುತ್ತಿದ್ದಾರೆ. ಟೀಮ್ ಇಂಡಿಯಾ ಅಭಿಮಾನಿಗಳು ಶಮಿ ಮೈದಾನಕ್ಕೆ ಪ್ರವೇಶಿಸುವುದು ಯಾವಾಗ ಎಂಬುದನ್ನು ಕಾಯುತ್ತಿದ್ದಾರೆ.
ದುಲೀಪ್ ಟ್ರೋಫಿಗೂ ಅಲಭ್ಯ
ಇನ್ನೇನು ಕೆಲವೇ ದಿನಗಳಲ್ಲಿ ದೇಶೀಯ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯಲ್ಲೂ ಶಮಿ ಆಡುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಈ ಊಹೆ ಸಹ ಸುಳ್ಳಾಗಿದೆ. ಇವರು ಮೊದಲೇ ಹೇಳಿದಂತೆ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ಪರ ಆಡುವ ಇರಾದೆ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications