Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mohammed Shami: ಸಚಿನ್ ತೆಂಡೂಲ್ಕರ್ ದಾಖಲೆಯ ಮೇಲೆ ಮೊಹಮ್ಮದ್ ಶಮಿ ಚಿತ್ತ

ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದೆ. "ಬಿ" ಗುಂಪಿನ ಮೊದಲ ಪಂದ್ಯ ಗುರುವಾರ ದುಬೈನಲ್ಲಿ ನಡೆಯಲಿದೆ. ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಕಣಕ್ಕೆ ಇಳಿಯಲಿದ್ದಾರೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ಭರವಸೆ ಮೂಡಿಸಿದೆ. ಇನ್ನು ಈ ಪಂದ್ಯದಲ್ಲಿ ಮೊಹಮ್ಮದ್‌ ಶಮಿ ಕಣಕ್ಕೆ ಇಳಿಯಲಿದ್ದಾರೆ. ಈ ವೇಳೆ ಶಮಿ ವಿಶಿಷ್ಠ ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಆ ದಾಖಲೆ ಯಾವುದು ಇಲ್ಲಿದೆ ವರದಿ.

ಏಕದಿನ ಕ್ರಿಕೆಟ್‌ನಲ್ಲಿ ಮೊಹಮ್ಮದ್‌ ಶಮಿ ಮತ್ತೆ ಕಣಕ್ಕೆ ಇಳಿದಿದ್ದಾರೆ. ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನ ಫೈನಲ್‌ ಬಳಿಕ ಗಾಯಕ್ಕೆ ತುತ್ತಾಗಿದ್ದ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಅವರು ಕಳೆದ 14 ತಿಂಗಳಿನಿಂದ ಅಂಗಳದಿಂದ ದೂರ ಉಳಿದಿದ್ದರು. ಆ ಬಳಿಕ ಚೇತರಿಸಿಕೊಂಡು ಮೈದಾನಕ್ಕೆ ಇಳಿದಿದ್ದಾರೆ. ಮೊದಲು ರಣಜಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಶಮಿ, ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಶಮಿ, ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Mohammed Shami Eyes Sachin Tendulkar s Record in India vs Bangladesh Champions Trophy Clash

ಯಾವ ದಾಖಲೆ ನಿರ್ಮಿಸಲಿದ್ದಾರೆ ಶಮಿ?

ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ಮೊಹಮ್ಮದ್ ಶಮಿ ದೊಡ್ಡ ಸಾಧನೆ ಮಾಡಲಿದ್ದಾರೆ. ಈ ಪಂದ್ಯದಲ್ಲಿ ಶಮಿ ಲಯ ಬದ್ಧ ದಾಳಿ ನಡೆಸಿದರೆ, ಇತಿಹಾಸ ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಪಂದ್ಯದಲ್ಲಿ ಶಮಿ ಅವರು 4 ವಿಕೆಟ್‌ ಪಡೆದಿದ್ದೇ ಆದಲ್ಲಿ, ಸಚಿನ್ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿಯುವ ಕನಸಿನಲ್ಲಿದ್ದಾರೆ. ಈ ಪಂದ್ಯಲ್ಲಿ ಶಮಿ ನಾಲ್ಕು ವಿಕೆಟ್‌ ಕಬಳಿಸುವಲ್ಲಿ ಯಶಸ್ವಿಯಾದರೆ, ಸಚಿನ್‌, ಜಾಹಿರ್ ಖಾನ್‌, ಜಸ್ಪ್ರಿತ್‌ ಬುಮ್ರಾ ಅವರ ದಾಖಲೆಯನ್ನು ಅಳಿಸಬಲ್ಲರು.

ಬಾಂಗ್ಲಾದೇಶ ವಿರುದ್ಧ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಹೆಗ್ಗಳಿಕೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಿತ್ ಅಗರ್ಕರ್‌ ಅವರಿಗೆ ಸಲ್ಲುತ್ತದೆ. ಇವರು ಬಾಂಗ್ಲಾ ವಿರುದ್ಧ 16 ವಿಕೆಟ್‌ ಕಬಳಿಸಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ (14) ಎರಡನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಜಸ್ಪ್ರಿತ್ ಬುಮ್ರಾ, ಜಾಹೀರ್ ಖಾನ್‌, ಸಚಿನ್‌ ತೆಂಡೂಲ್ಕರ್‌ ಅವರ ಬುಟ್ಟಿಯಲ್ಲಿ 12 ವಿಕೆಟ್‌ಗಳಿವೆ.

ಮೊಹಮ್ಮದ್ ಶಮಿ ಸಾಧನೆ

ಈಗಾಗಲೇ ಮೊಹಮ್ಮದ್ ಶಮಿ 103 ಏಕದಿನ ಪಂದ್ಯಗಳನ್ನು ಭಾರತದ ಪರ ಆಡಿದ್ದು, 197 ವಿಕೆಟ್‌ ಪಡೆದಿದ್ದಾರೆ. ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದಲ್ಲಿ ಇತಿಹಾಸ ನಿರ್ಮಿಸಲಿದ್ದಾರೆ.

Mohammed Shami Eyes Sachin Tendulkar s Record in India vs Bangladesh Champions Trophy Clash

ಭಾರತದ ಸಂಭಾವ್ಯ ತಂಡ: ರೋಹಿತ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ ಮತ್ತು ಅರ್ಷದೀಪ್ ಸಿಂಗ್.

Story first published: Wednesday, February 19, 2025, 21:38 [IST]
Other articles published on Feb 19, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+