Champions Trophy 2025: ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ತಂಡ ಸೇರುವ ಸಾಧ್ಯತೆ!
ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಟಾರ್ ವೇಗದ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾದ 'ಒನ್ ಮ್ಯಾನ್ ಆರ್ಮಿ' ಎಂದು ತೋರಿಸಿದ್ದಾರೆ. ಏಕಾಂಗಿಯಾಗಿ ಬುಮ್ರಾ ಆತಿಥೇಯರನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಆದರೆ ಭಾರತ ಟೆಸ್ಟ್ ಸರಣಿ ಗೆಲ್ಲಲು ಸಾಧ್ಯವಾಗಲಿಲ್ಲ. ಬುಮ್ರಾ ಅವರಿಗೆ ಭಾರತದ ಮತ್ತೊಬ್ಬ ವೇಗದ ಬೌಲರ್‌ನ ಬೆಂಬಲ ಸಿಕ್ಕಿದ್ದರೆ ಫಲಿತಾಂಶವೇ ಬೇರೆಯಾಗುತ್ತಿತ್ತು. ಆದರೆ ಇದೀಗ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ ಬಂದಿದೆ. ಏಕೆಂದರೆ ಟೀಮ್ ಇಂಡಿಯಾ ಎದುರು ನೋಡುತ್ತಿದ್ದ ಅಪಾಯಕಾರಿ ವೇಗದ ಬೌಲರ್ ಮೊಹಮ್ಮದ್ ಶಮಿ ಕಮ್ ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ನಿಂದ ಟೀಮ್ ಇಂಡಿಯಾ ಹೊರಗುಳಿದ ನಂತರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಾರಂಭಿಸಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಮೆಗಾ ಟೂರ್ನಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಹೊಸ ತಂಡವನ್ನು ಕಟ್ಟಲು ತಯಾರಿ ನಡೆಸುತ್ತಿದೆ.

ಸುಮಾರು ಒಂದೂವರೆ ವರ್ಷಗಳ ಕಾಲ ಆಟದಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಮತ್ತೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಯಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಲ್ಲಿ ಮೊಹಮ್ಮದ್ ಶಮಿ ಮರಳಬಹುದು ಎಂದು ವರದಿಗಳು ಹೇಳಿತ್ತಿವೆ. ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಮೊಹಮ್ಮದ್ ಶಮಿ ಉಪಸ್ಥಿತಿ ಪ್ರಮುಖವಾಗಿದೆ. ಹೀಗಾಗಿ ಅದಷ್ಟು ಬೇಗ ಶಮಿ ಟೀಮ್ ಇಂಡಿಯಾ ಸೇರಲಿ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ.
ಮೊಹಮ್ಮದ್ ಶಮಿ ಮರಳುತ್ತಾರೆ ಎಂಬ ವರದಿಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ. ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಆಡುವ ನಿರೀಕ್ಷೆ ಇತ್ತು. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುವಾಗ ಅವರ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಇದಾದ ನಂತರ ಶಮಿ ಯಾವುದೇ ಅಪಾಯವನ್ನು ತೆಗೆದುಕೊಳ್ಳಲಿಲ್ಲ. ಈಗ ಅವರು ಇಂಗ್ಲೆಂಡ್ ಸರಣಿಯಲ್ಲಿ ಮರಳಲು ಸಿದ್ಧರಾಗಿದ್ದಾರೆ.
ಭಾರತ ತಂಡ ಜನವರಿ 22 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ನಂತರ ಏಕದಿನ ಸರಣಿಯನ್ನು ಆಡಲಿದೆ. ಇಂತಹ ಸಂದರ್ಭದಲ್ಲಿ ಶಮಿ ನೆಟ್ಸ್‌ನಲ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಮೊಹಮ್ಮದ್ ಶಮಿ ನೆಟ್ಸ್‌ನಲ್ಲಿ ಬೆವರಿಳಿಸುತ್ತಿರುವ ತಮ್ಮ ತಯಾರಿಯ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಅದ್ಭುತ ಬೌಲಿಂಗ್ ಮೂಲಕ ಸದ್ದು ಮಾಡಿದ್ದರು. ಶಮಿಯನ್ನು ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ತಡವಾಗಿ ಕಾಣಿಸಿಕೊಂಡರು.
ನಂತರ ಅವರು ಒಂದರ ನಂತರ ಒಂದರಂತೆ ದಾಖಲೆಗಳನ್ನು ಮಾಡುವಲ್ಲಿ ಯಶಸ್ವಿಯಾದರು. 2023ರ ವಿಶ್ವಕಪ್‌ನಲ್ಲಿ ಶಮಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಕೊಂಡರು. ಈಗ ಚಾಂಪಿಯನ್ಸ್ ಟ್ರೋಫಿಯಲ್ಲೂ ಶಮಿ ತಮ್ಮ ಕಮಾಲ್ ತೋರಿಸಲು ಸಜ್ಜಾಗುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications