Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mohammed Shami: 804 ದಿನಗಳ ಬಳಿಕ ಟೀಮ್ ಇಂಡಿಯಾಕ್ಕೆ ವೇಗಿ ಕಂ ಬ್ಯಾಕ್‌

ಟೀಮ್ ಇಂಡಿಯಾ ಸೂಪರ್ ಸ್ಟಾರ್ ಬೌಲರ್‌ ಒಬ್ಬ ಸುಮಾರು 2 ವರ್ಷದ ಬಳಿಕ ಟಿ20 ಕ್ರಿಕೆಟ್‌ಗೆ ಕಂ ಬ್ಯಾಕ್ ಮಾಡುತ್ತಿದ್ದಾರೆ. ಈ ಬೌಲರ್‌ ತಮ್ಮ ಧಮಾಕೆದಾರ್ ಬೌಲಿಂಗ್‌ನಿಂದಲೇ ಹೆಸರುವಾಸಿಯಾದವರು. ಇವರು ಕೊನೆಯದಾಗಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಮೈದಾನ ಪ್ರವೇಶಿಸಿದ್ದರು. ಈಗ 804 ದಿನಗಳ ಮತ್ತೆ ಚೆಂಡು ಹಿಡಿದು ಎದುರಾಳಿಗಳನ್ನು ಕಾಡಲು ಸಿದ್ಧರಾಗಿದ್ದಾರೆ.

ಟೀಮ್ ಇಂಡಿಯಾ ಪರ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ ಧಮಾಕೆದಾರ್ ಬೌಲಿಂಗ್ ಮೂಲಕ ಹೆಸರು ಮಾಡಿರುವ ಆಟಗಾರ ಮೊಹಮ್ಮದ್ ಶಮಿ. ಇವರು ಈಗ ಬಹು ತಿಂಗಳುಗಳ ಬಳಿಕ ಟಿ20 ಕ್ರಿಕೆಟ್‌ಗೆ ಕಂ ಬ್ಯಾಕ್ ಮಾಡಲಿದ್ದಾರೆ. ಶಮಿ ಗಾಯದ ಸಮಸ್ಯೆಯಿಂದ ಬಳಲಿದ್ದರಿಂದ ಅವರು ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಈಗ ಸಂಪೂರ್ಣ ಫಿಟ್‌ ಆಗಿದ್ದು ತಂಡಕ್ಕೆ ಕಂ ಬ್ಯಾಕ್ ಮಾಡಲು ಸಿದ್ಧತೆ ನಡೆಸಿಕೊಂಡಿದ್ದಾರೆ.

Mohammed Shami Makes Long-Awaited Comeback to T20 Cricket After 2 Years

ಇಂಗ್ಲೆಂಡ್ ಕಾಡಲಿರುವ ಶಮಿ

ಮೊಹಮ್ಮದ್ ಶಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ತಮ್ಮ ತವರು ನೆಲದಲ್ಲಿ ಕಂ ಬ್ಯಾಕ್ ಮಾಡುತ್ತಿರುವುದು ಖುಷಿಯ ವಿಚಾರ. ಶಮಿ ದೇಶೀಯ ಟೂರ್ನಿಗಳಲ್ಲಿ ಬಂಗಾಳ ಪರ ಮೈದಾನ ಪ್ರವೇಶಿಸುತ್ತಾರೆ. ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಣ ಪಂದ್ಯ ಈಡನ್‌ ಗಾರ್ಡನ್‌ನಲ್ಲಿ ನಡೆಯಲಿದೆ. ಹೀಗಾಗಿ ತವರು ನೆಲದಲ್ಲಿ ಶಮಿ ಭರ್ಜರಿಯಾಗಿ ಕಂ ಬ್ಯಾಕ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಯಾರ್ಕರ್‌ ಸ್ಪೇಷಲಿಸ್ಟ್‌ ಜಸ್ಪ್ರಿತ್ ಬುಮ್ರಾ ಅವರು ಬೆನ್ನು ನೋವಿನ ಸಮಸ್ಯೆಯಿಂದ ಅಖಾಡದಿಂದ ಕಣಕ್ಕೆ ಇಳಿಯುತ್ತಿಲ್ಲ. ಹೀಗಾಗಿ ಎಲ್ಲರ ಚಿತ್ತ ಶಮಿ ಅವರ ಮೇಲೆ ನೆಟ್ಟಿರಲಿದೆ. ಹೀಗಾಗಿ ಮೊಹಮ್ಮದ್ ಶಮಿ ಮೇಲೆ ಹೆಚ್ಚಿನ ಜವಾಬ್ದಾರಿ ಬೀಳುವಂತೆ ಆಗಿದೆ. ಗಾಯದಿಂದ ಚೇತರಿಸಿಕೊಂಡ ನಂತರ, ಶಮಿ ಕಳೆದ ವರ್ಷ ಬಂಗಾಳ ಪರ ರಣಜಿ ಟ್ರೋಫಿಗೆ ಮರಳಿದ್ದು 7 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದರು. ಇದಾದ ನಂತರ, ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 11 ವಿಕೆಟ್‌ಗಳು ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ಐದು ವಿಕೆಟ್‌ಗಳನ್ನು ಪಡೆದು ತಮ್ಮ ಕ್ಷಮತೆಯನ್ನು ಸಾಬೀತು ಪಡಿಸಿದ್ದರು.

Mohammed Shami Makes Long-Awaited Comeback to T20 Cricket After 2 Years

ಟಿ20 ಕ್ರಿಕೆಟ್‌ನಲ್ಲಿ ಮೊಹಮ್ಮದ್‌ ಶಮಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇವರು ಚುಟುಕು ಕ್ರಿಕೆಟ್‌ನಲ್ಲಿ ಕೇವಲ 23 ಪಂದ್ಯಗಳನ್ನು ಆಡಿದ್ದು, 24 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಅಂಕಿ ಅಂಶಗಳನ್ನು ಸುಧಾರಿಸಿಕೊಳ್ಳಲು ಬೆಸ್ಟ್‌ ವೇದಿಕೆ ಇದಾಗಿದೆ. ಈ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ವಿಕೆಟ್‌ ಬೇಟೆ ನಡೆಸುವ ಜವಾಬ್ದಾರಿ ಶಮಿ ಅವರ ಮೇಲಿದೆ. ಈ ಸರಣಿಯಲ್ಲಿ ಶಮಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬ ಬಗ್ಗೆ ಕುತೂಹಲ ಮನೆ ಮಾಡಿದೆ.

ಭಾರತದ ಸಂಭಾವ್ಯ ಆಟಗಾರರು: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ/ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.

Story first published: Wednesday, January 22, 2025, 12:05 [IST]
Other articles published on Jan 22, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+