Mohammed Shami: ಟಿ20 ಕ್ರಿಕೆಟ್‌ನಲ್ಲಿ ದೊಡ್ಡ ಮೈಲಿಗಲ್ಲು ತಲುಪಿದ ಮೊಹಮ್ಮದ್ ಶಮಿ
ಟೀಮ್ ಇಂಡಿಯಾ ಅಭಿಮಾನಿಗಳಲ್ಲಿ ಸದ್ಯ ಇರುವುದೇ ಒಂದೇ, ಸ್ಟಾರ್ ಪೇಸ್ ಬೌಲರ್ ಮೊಹಮ್ಮದ್ ಶಮಿ ತಂಡಕ್ಕೆ ಯಾವಗ ತಂಡಕ್ಕೆ ಸೇರುತ್ತಾರೆ ಎಂದು. ಟೀಮ್ ಇಂಡಿಯಾ ಸೇರಲು ಮೊಹಮ್ಮದ್ ಶಮಿ ಭರ್ಜರಿ ಸರ್ಕಸ್ ನಡೆಸುತ್ತಿದ್ದಾರೆ. ಅಲ್ಲದೆ ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ತಂಡ ಕ್ವಾರ್ಟರ್ ಫೈನಲ್‌ನಲ್ಲಿ ಸೋಲು ಕಂಡರೂ, ಮೊಹಮ್ಮದ್ ಶಮಿ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬರೋಡಾ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 172 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬಂಗಾಳ 18 ಓವರ್‌ಗಳಲ್ಲಿ 131 ರನ್‌ಗಳಿಗೆ ಆಲೌಟ್ ಆಯಿತು. ಈ ವೇಳೆ ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದು ಅಬ್ಬರಿಸಿದರು.

ಬರೋಡಾ ವಿರುದ್ಧ ಶಮಿಗೆ 2 ವಿಕೆಟ್
ಮೊಹಮ್ಮದ್ ಶಮಿ ಟೀಮ್ ಇಂಡಿಯಾಕ್ಕೆ ಯಾವಾಗ ಸೇರುತ್ತಾರೆ ಎಂಬ ಬಗ್ಗೆ ಇನ್ನು ನಿಖರ ಮಾಹಿತಿ ಇಲ್ಲ. ಆದರೆ ದೇಶೀಯ ಟೂರ್ನಿಯಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಇವರು ಅಬ್ಬರದ ಪ್ರದರ್ಶನ ನೀಡುತ್ತಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಮೊನಚಾದ ಬೌಲಿಂಗ್‌ನಿಂದ ಎದುರಾಳಿಯನ್ನು ಕಾಡುವಲ್ಲಿ ಶಮಿ ಯಶಸ್ವಿ ಆಗಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬರೋಡಾ ವಿರುದ್ಧದ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಆಡುವಾಗ, ಮೊಹಮ್ಮದ್ ಶಮಿ 4 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆದು, ವಿಶೇಷ ದಾಖಲೆಯನ್ನು ಬರೆದಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ
ಟಿ20 ಕ್ರಿಕೆಟ್‌ನಲ್ಲಿ ಶಮಿ 200 ವಿಕೆಟ್ ಪಡೆದ ಸಾಧನೆ ಮಾಡಿದರು. ಬರೋಡಾ ವಿರುದ್ಧ 2 ವಿಕೆಟ್ ಪಡೆಯುತ್ತಿದ್ದಂತೆ ಶಮಿ ಈ ದಾಖಲೆ ಬರೆದರು. ಶಮಿ ಈಗ ಟಿ20 ಕ್ರಿಕೆಟ್‌ನಲ್ಲಿ ವೇಗದ ಬೌಲರ್ ಆಗಿ 200 ವಿಕೆಟ್ ಪಡೆದ ಭಾರತದ 8ನೇ ಆಟಗಾರ. ಶಮಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 165 ಟಿ20 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 201 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆ ಭುವನೇಶ್ವರ್ ಕುಮಾರ್ ಅವರಿಗೆ ಸಲ್ಲುತ್ತದೆ. ಇವರ ಬುಟ್ಟಿಯಲ್ಲಿ 310 ವಿಕೆಟ್‌ಗಳು ಇವೆ. ಈ ಪಟ್ಟಿಯಲ್ಲಿ ಜಸ್ಪ್ರಿತ್ ಬುಮ್ರಾ ವೇಗದ ಬೌಲರ್ ಹೆಸರು ಎರಡನೇ ಸ್ಥಾನದಲ್ಲಿದೆ. ಇವರು ಒಟ್ಟು ಟಿ20 ಕ್ರಿಕೆಟ್‌ನಲ್ಲಿ 295 ವಿಕೆಟ್ ಪಡೆದು ಬೀಗಿದ್ದಾರೆ.
ಪಂದ್ಯದ ಫಲಿತಾಂಶ
ಬರೋಡಾ ತಂಡದ ಪರ ಶಾಶ್ವತ್ ರಾವತ್ 40, ಅಭಿಮನ್ಯುಸಿಂಗ್ ರಜಪೂತ್ 37, ಶಿವಾಲಿಕ್ ಶರ್ಮಾ 24 ರನ್ ಸೇರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಪಾಂಡ್ಯ ಬ್ರದರ್ಸ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಬಂಗಾಳ 172 ರನ್ ಕಲೆ ಹಾಕಿತು. ಗುರಿಯನ್ನು ಬೆನ್ನಟ್ಟಿದ ಪರ ಶಹಬಾಜ್ ಅಹ್ಮದ್ 55 ರನ್, ಅಭಿಷೇಕ್ ಪೋರೆಲ್ 22 ರನ್ ಸೇರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಈ ಪಂದ್ಯದಲ್ಲಿ 41 ರನ್‌ಗಳಿಂದ ಗೆದ್ದ ಬರೋಡಾ ಉಪಾಂತ್ಯ ಪ್ರವೇಶಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications