Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ತವರು ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಮೊಹಮ್ಮದ್ ಸಿರಾಜ್

ಐಪಿಎಲ್ 2025 ರ 19 ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಅನುಭವಿ ವೇಗದ ಮೊಹಮ್ಮದ್ ಸಿರಾಜ್ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಮೊಹಮ್ಮದ್ ಸಿರಾಜ್ ತಮ್ಮ ತವರಿನ ಮೈದಾನದಲ್ಲಿ ಪವರ್‌ಪ್ಲೇನಲ್ಲಿ ಅಪಾಯಕಾರಿಯಾಗಿ ಬೌಲಿಂಗ್ ಮಾಡಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಾಕ್ ನೀಡಿದರು. ಇದರೊಂದಿಗೆ ಅವರು ದೊಡ್ಡ ಸಾಧನೆ ಮಾಡಿದರು.

ಮೊಹಮ್ಮದ್ ಸಿರಾಜ್ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿಯೇ ಗುಜರಾತ್‌ ಟೈಟಾನ್ಸ್ ತಂಡ ಯಶಸ್ಸನ್ನು ತಂದುಕೊಟ್ಟರು. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅದ್ಭುತ ಬೌಲಿಂಗ್ ಮಾಡಿದ್ದ ಸಿರಾಜ್ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿಯೂ ಇದೇ ರೀತಿಯ ಪ್ರದರ್ಶನ ನೀಡಿದರು.

Mohammed Siraj completes 100 wickets in IPL

ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡುವ ಮೂಲಕ ಅವರು ಸನ್‌ರೈಸರ್ಸ್‌ಗೆ ಶಾಕ್ ನೀಡಿದರು. ಹೆಡ್ 5 ಎಸೆತಗಳಲ್ಲಿ 8 ರನ್ ಗಳಿಸಿ ಸಿರಾಜ್ ಎಸೆತದಲ್ಲಿ ಸಾಯಿ ಸುದರ್ಶನ್ ಅವರಿಗೆ ಕ್ಯಾಚ್ ನೀಡಿದರು. ಹೆಡ್ ಔಟ್ ಮಾಡಿದ ನಂತರ, ಸಿರಾಜ್ ಅಭಿಷೇಕ್ ಶರ್ಮಾ ವಿಕೆಟ್ ಪಡೆದರು.

ಅಭಿಷೇಕ್ ಶರ್ಮಾ ಕೂಡ 16 ಎಸೆತಗಳಲ್ಲಿ 18 ರನ್ ಗಳಿಸಿದ್ದಾಗ ಅಭಿಷೇಕ್ ರಾಹುಲ್ ತೆವಾಟಿಯಾಗೆ ಕ್ಯಾಚ್ ನೀಡಿದರು. ಇದರೊಂದಿಗೆ ಹೋಮ್ ಬಾಯ್ ಮೊಹಮ್ಮದ್ ಸಿರಾಜ್ ಐಪಿಎಲ್‌ನಲ್ಲಿ 100 ವಿಕೆಟ್‌ಗಳನ್ನು ಪೂರೈಸಿದರು. ಸನ್‌ ರೈಸರ್ಸ್ ಹೈದರಾಬಾದ್ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಸಿರಾಜ್ 100 ವಿಕೆಟ್‌ಗಳನ್ನು ಪೂರ್ಣಗೊಳಿಸಲು ಕೇವಲ 2 ವಿಕೆಟ್‌ಗಳ ದೂರದಲ್ಲಿದ್ದರು. 94 ಐಪಿಎಲ್ ಪಂದ್ಯಗಳಲ್ಲಿ 98 ವಿಕೆಟ್‌ಗಳನ್ನು ಪಡೆದಿದ್ದರು.

ಮೊಹಮ್ಮದ್ ಸಿರಾಜ್ ತಮ್ಮ ನಾಲ್ಕನೇ ಓವರ್‌ನಲ್ಲಿ ಅನಿಕೇತ್ ವರ್ಮಾ ಅವರನ್ನು ಎಲ್‌ಬಿಡಬ್ಲ್ಯೂ ಔಟ್ ಮಾಡಿದರು. ಅದೇ ಓವರ್‌ನ ಕೊನೆಯ ಎಸೆತದಲ್ಲಿ ಅವರು ಸಿಮರ್‌ಜೀತ್ ಸಿಂಗ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಐಪಿಎಲ್ ಇತಿಹಾಸದಲ್ಲಿ 100 ವಿಕೆಟ್ ಪಡೆದ 26ನೇ ಬೌಲರ್ ಎಂಬ ಹೆಗ್ಗಳಿಕೆಗೆ ಸಿರಾಜ್ ಪಾತ್ರರಾದರು. ಪ್ರಸ್ತುತ ಅವರು 97 ಪಂದ್ಯಗಳಲ್ಲಿ 102 ವಿಕೆಟ್‌ಗಳನ್ನು 100 ಪಡೆದಿದ್ದಾರೆ.

ಮೊಹಮ್ಮದ್ ಸಿರಾಜ್ ಐಪಿಎಲ್‌ನಲ್ಲಿ ಪಡೆದ 100 ವಿಕೆಟ್‌ಗಳಲ್ಲಿ 42 ವಿಕೆಟ್‌ಗಳು ಪವರ್‌ಪ್ಲೇ ಸಮಯದಲ್ಲಿ ಬಂದಿವೆ. ಐಪಿಎಲ್ 2025 ರಲ್ಲಿ ಅವರು ಇಲ್ಲಿಯವರೆಗೆ 4 ಪಂದ್ಯಗಳನ್ನು ಆಡಿದ್ದು. 9 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಆರ್‌ಸಿಬಿ ವಿರುದ್ಧದ ಕೊನೆಯ ಪಂದ್ಯದಲ್ಲಿ ಅವರು 4 ಓವರ್‌ಗಳಲ್ಲಿ ಕೇವಲ 19 ರನ್‌ಗಳನ್ನು ನೀಡಿದ್ದರು. ಈಗ ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಅವರು 4 ಓವರ್‌ಗಳಲ್ಲಿ 17 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು.

ಸಿರಾಜ್‌ ಐಪಿಎಲ್‌ ಪ್ರಯಾಣ

ಮೊಹಮ್ಮದ್ ಸಿರಾಜ್ 2017 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಜೊತೆ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಸನ್‌ರೈಸರ್ಸ್ ಅವರನ್ನು ಅವರ ಮೂಲ ಬೆಲೆ 20 ಲಕ್ಷದಿಂದ 2.6 ಕೋಟಿ ರೂ.ಗೆ ಖರೀದಿಸಿತು. ಅವರು ಆರೆಂಜ್ ಆರ್ಮಿ ಪರ ಆರು ಪಂದ್ಯಗಳನ್ನು ಆಡಿದರು. ಈ ವೇಳೆ ಅವರು 21.20 ರ ಸರಾಸರಿಯಲ್ಲಿ 10 ವಿಕೆಟ್‌ಗಳನ್ನು ಪಡೆದರು.

ಇದಾದ ನಂತರ, 2018 ರಲ್ಲಿ ಆರ್‌ಸಿಬಿ ಅವರನ್ನು 2.20 ಕೋಟಿ ರೂ.ಗೆ ಖರೀದಿಸಿತು. ಇದಾದ ನಂತರ ಮಿಂಚಿದ ಅವರು ಆರ್‍‌ಸಿಬಿ ಪರ 87 ಪಂದ್ಯಗಳಲ್ಲಿ 83 ವಿಕೆಟ್‌ಗಳನ್ನು ಪಡೆದಿದ್ದಾರೆ. ಕಳೆದ ವರ್ಷದ ಕೊನೆಯಲ್ಲಿ ಅವರನ್ನು ಆರ್‌ಸಿಬಿ ಬಿಡುಗಡೆ ಮಾಡಿತು. ನವೆಂಬರ್‌ನಲ್ಲಿ ನಡೆದ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಗುಜರಾತ್ ಅವರನ್ನು 12.25 ಕೋಟಿ ರೂ.ಗೆ ಖರೀದಿಸಿತು.

Story first published: Monday, April 7, 2025, 9:00 [IST]
Other articles published on Apr 7, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+