Mohammed Siraj: ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಬರೆದ '6 ದಾಖಲೆಗಳ ಪಟ್ಟಿ'
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಏಷ್ಯಾಕಪ್ ಏಕದಿನ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಕುವರ ಮನಮೋಹಕ ದಾಳಿ ಸಂಘಟಿಸಿ ವಿಶ್ವದ ಚಿತ್ತವನ್ನು ಕದ್ದಿದ್ದಾರೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಸಿರಾಜ್ ಕೇವಲ 7 ಓವರ್ ಬೌಲಿಂಗ್ ಮಾಡಿ ಬರೋಬ್ಬರಿ ಆರು ದಾಖಲೆಯನ್ನು ಬರೆದಿದ್ದಾರೆ.
ವೇಗವಾಗಿ ಐದು ವಿಕೆಟ್ ಸಾಧನೆ
ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಬಿಗುವಿನ ದಾಳಿ ನಡೆಸಿ ಆರ್ಭಟಿಸಿದರು. ಆರಂಭದಲ್ಲೇ ವಿಕೆಟ್ ಬೇಟೆ ನಡೆಸಿದ ಸಿರಾಜ್ ಲಂಕಾದ ಅರ್ಧ ತಂಡವನ್ನು ಪೆವಿಲಿಯನ್ ಗೆ ಕಳುಹಿಸಿದರು. ಅಲ್ಲದೆ ಸಿರಾಜ್ ಏಕದಿನ ಕ್ರಿಕೆಟ್ ನಲ್ಲಿ ವೇಗವಾಗಿ 5 ವಿಕೆಟ್ ಪಡೆದ ಸಾಧನೆಯನ್ನು ಮಾಡಿದರು. ಸಿರಾಜ್ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಒಂದೇ ಓವರ್ ನಲ್ಲಿ 4 ವಿಕೆಟ್ ಪಡೆದ ಸಾಧನೆ ಸಹ ಸೇರಿದೆ. ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಸಾಧನೆ

ಇನ್ನು ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಪಡೆದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಸಿರಾಜ್ ತಮ್ಮದಾಗಿಸಿಕೊಂಡಿದ್ದಾರೆ. ಸಿರಾಜ್ ತಾವು ಎಸೆದ ಎರಡನೇ ಓವರ್ ಹಾಗೂ ಇನಿಂಗ್ಸನ ನಾಲ್ಕನೇ ಓವರ್ನಲ್ಲಿ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ಈ ಸಾಧನೆಯನ್ನು ಶ್ರೀಲಂಕಾದ ವೇಗಿ ಚಮಿಂಡಾ ವಾಸ್ ಹಾಗೂ ಲಸಿತ್ ಮಾಲಿಂಗ ಮಾಡಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ವಿಕೆಟ್ ಗಳ ಅರ್ಧಶತಕ
ಮೊಹಮ್ಮದ್ ಸಿರಾಜ್ ಏಕದಿನ ಕ್ರಿಕೆಟ್ ನಲ್ಲಿ 50 ವಿಕೆಟ್ ಪಡೆದ ಸಾಧನೆಯನ್ನು ಮಾಡಿದರು. ಸಿರಾಜ್ ಕೇವಲ 1,002 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಅಜಂತಾ ಮೆಂಡಿಸ್ ಮಾತ್ರ ಇವರಿಗಿಂತ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ವೃತ್ತಿ ಬದುಕಿನ ಶ್ರೇಷ್ಠ ಪ್ರದರ್ಶನ
ಸಿರಾಜ್ ತಮ್ಮ ಏಕದಿನ ವೃತ್ತಿ ಜೀವನದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ಗಮನ ಸೆಳೆದರು. ಇದೇ ಮೊದಲ ಬಾರಿಗೆ ಸಿರಾಜ್ ಏಕದಿನ ಕ್ರಿಕೆಟ್ ನಲ್ಲಿ ಒಂದೇ ಪಂದ್ಯದಲ್ಲಿ ಐದು ವಿಕೆಟ್ ಪಡೆದ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ.
5 ವಿಕೆಟ್ ಪಡೆದ 16ನೇ ಭಾರತೀಯ
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೊಹಮ್ಮದ್ ಸಿರಾಜ್ ಅಮೋಘ ದಾಳಿ ಸಂಘಟಿಸಿ, ಏಷ್ಯಾ ಕಪ್ ಫೈನಲ್ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಅಲ್ಲದೆ ಒಂದೇ ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಸಾಧನೆ ಮಾಡಿರುವ 16ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲೇ ಬೆಸ್ಟ್ ಪ್ರದರ್ಶನ
ಏಕದಿನ ಕ್ರಿಕೆಟ್ ನಲ್ಲಿ ಭಾರತೀಯ ಆಟಗಾರನೊಬ್ಬ ನೀಡಿದ ಬೆಸ್ಟ್ ಬೌಲಿಂಗ್ ಪ್ರದರ್ಶನಗಳಲ್ಲಿ ಇದು ಒಂದು. ಇದಕ್ಕೂ ಮೊದಲು ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ, ಜಸ್ಪ್ರಿತ್ ಬುಮ್ರಾ ಇಂಗ್ಲೆಂಡ್ ವಿರುದ್ಧ, ಸ್ಟುವರ್ಟ್ ಬಿನ್ನಿ ಬಾಂಗ್ಲಾದೇಶದ ವಿರುದ್ಧ ಆರು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications