ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆತ ಎಲ್ಲಾ ಪಿಚ್‌ಗಳಲ್ಲೂ ಉತ್ತಮ ಬೌಲಿಂಗ್ ಮಾಡುತ್ತಿದ್ದಾನೆ: ಭಾರತದ ವೇಗಿ ಬಗ್ಗೆ ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಶ್ಲಾಘನೆ

Mohammed Siraj Will Bowling Well On All Kinds Of Pitches - Salman Butt

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣೀಯ ಎರಡನೇ ಪಂದ್ಯದಲ್ಲಿ ಭಾರತದ ಬೌಲಿಂಗ್ ಪ್ರದರ್ಶನಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸಲ್ಮಾನ್ ಬಟ್ ಕೂಡ ಭಾರತದ ಬೌಲರ್ ಗಳನ್ನು ಶ್ಲಾಘಿಸಿದ್ದಾರೆ.

ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಬೌಲಿಂಗ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವ ಮೊಹಮ್ಮದ್ ಸಿರಾಜ್‌ರನ್ನು ಹೊಗಳಿದ್ದಾರೆ.

IND Vs NZ 3rd ODI: ಇಂದೋರ್ ತಲುಪಿದ ಟೀಂ ಇಂಡಿಯಾ, ಸರಣಿ ವೈಟ್‌ವಾಶ್ ಮಾಡಿದರೆ ನಂಬರ್ 1 ಪಟ್ಟIND Vs NZ 3rd ODI: ಇಂದೋರ್ ತಲುಪಿದ ಟೀಂ ಇಂಡಿಯಾ, ಸರಣಿ ವೈಟ್‌ವಾಶ್ ಮಾಡಿದರೆ ನಂಬರ್ 1 ಪಟ್ಟ

ಮೊಹಮ್ಮದ್ ಸಿರಾಜ್ ಎಲ್ಲಾ ರೀತಿಯ ಪಿಚ್‌ಗಳಲ್ಲಿ ಯಶಸ್ವಿಯಾಗಿ ವಿಕೆಟ್ ಪಡೆಯಬಹುದು ಎನ್ನುವುದನ್ನು ತೋರಿಸಿದ್ದಾರೆ ಎಂದು ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೊಹಮ್ಮದ್ ಸಿರಾಜ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಪಡೆದ ಮೊಹಮ್ಮದ್ ಶಮಿ ಬೌಲಿಂಗ್‌ ಬಗ್ಗೆ ಕೂಡ ಸಲ್ಮಾನ್ ಬಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಲಿಷ್ಠ ತಂಡದ ವಿರುದ್ಧ ಭಾರತದ ವೇಗಿಗಳು ಯಶಸ್ವಿಯಾಗಿ ಬೌಲಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅದರಲ್ಲೂ ಪಿಚ್‌ನಲ್ಲಿ ಸ್ವಿಂಗ್‌ಗೆ ಅನುಕೂಲವಿದ್ದಾಗ ಶಮಿ ಮಾರಕ ಬೌಲರ್ ಎಂದು ಬಟ್ ಅಭಿಪ್ರಾಯಪಟ್ಟಿದ್ದಾರೆ.

Mohammed Siraj Will Bowling Well On All Kinds Of Pitches - Salman Butt

ಪವರ್ ಪ್ಲೇನಲ್ಲಿ ಮಾರಕ ಬೌಲಿಂಗ್

ಮೊಹಮ್ಮದ್ ಶಮಿ ಮತ್ತು ಸಿರಾಜ್ ಹೊಸ ಚೆಂಡಿನಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದಾರೆ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ. "ಸಿರಾಜ್ ಎಲ್ಲಾ ರೀತಿಯ ಪಿಚ್‌ಗಳಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಪಂದ್ಯದಲ್ಲೂ ಆರಂಭಿಕ ವಿಕೆಟ್‌ಗಳನ್ನು ಪಡೆದಿದ್ದಾರೆ." ಎಂದು ಹೇಳಿದ್ದಾರೆ.

ವೇಗಿಗಳಿಗೆ ಸಹಾಯ ದೊರೆಯುವ ಪಿಚ್‌ಗಳಲ್ಲಿ ಮೊಹಮ್ಮದ್ ಶಮಿಯನ್ನು ಎದುರಿಸುವುದು ಅಸಾಧ್ಯ. ಚೆಂಡು ಸ್ವಲ್ಪ ಸಿಂಗ್‌ ಆಗುತ್ತಿದ್ದರಂತೂ ಅವರ ಬೌಲಿಂಗ್‌ನಲ್ಲಿ ಆಡುವುದು ತುಂಬಾ ಕಷ್ಟ ಎಂದು ಬಟ್ ಹೇಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಶಮಿ ಅದ್ಭುತ ಬೌಲಿಂಗ್ ಮಾಡಿದರು. ಪ್ರಮುಖ 3 ವಿಕೆಟ್ ಪಡೆದು ನ್ಯೂಜಿಲೆಂಡ್‌ಗೆ ಆಘಾತ ನೀಡಿದರು. ಆರಂಭದಲ್ಲೇ ವಿಕೆಟ್ ಪಡೆಯುವ ಮೂಲಕ ಕಿವೀಸ್ ಮೇಲೆ ಒತ್ತಡ ಹೇರಿದರು. ಇವರಿಗೆ ಅತ್ಯುತ್ತಮವಾಗಿ ಜೊತೆಯಾದ ಸಿರಾಜ್ ಕೂಡ ಒಂದು ಪ್ರಮುಖ ವಿಕೆಟ್ ಪಡೆದರು.

ಭಾರತದ ಬೌಲಿಂಗ್ ದಾಳಿಗೆ ಸಿಕ್ಕ ನ್ಯೂಜಿಲೆಂಡ್ ಕೇವಲ 108 ರನ್‌ಗಳಿಗೆ ಆಲೌಟ್ ಆಯಿತು. ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ನಾಯಕ ರೋಹಿತ್ ಶರ್ಮಾ ಅರ್ಧಶತಕದ ನೆರವಿನಿಂದ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

Story first published: Sunday, January 22, 2023, 16:51 [IST]
Other articles published on Jan 22, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X