Mohammed Siraj: ಚಾಂಪಿಯನ್ಸ್ ಟ್ರೋಫಿಯಿಂದ ಔಟ್ ಆದ ಸಿರಾಜ್ ದೊಡ್ಡ ನಿರ್ಧಾರ
ಟೀಮ್ ಇಂಡಿಯಾದ ಸ್ಟಾರ್ ವೇಗದ ಮೊಹಮ್ಮದ್ ಸಿರಾಜ್. ಕಳೆದ ಕೆಲವು ವರ್ಷಗಳಿಂದ ಟೀಮ್ ಇಂಡಿಯಾದ ಅವಿಭಾಜ್ಯ ಅಂಗ. ಯಾವುದೇ ಫಾರ್ಮೆಟ್ ಆಗಿದ್ದರೂ, ಸಿರಾಜ್‌ಗೆ ಸ್ಥಾನ ಫಿಕ್ಸ್. ಏಕದಿನ ಹಾಗೂ ಟಿ20ಯಲ್ಲಿ ಸ್ಥಿರ ಪ್ರದರ್ಶನ ನೀಡುರ ವೇಗಿ, ಟೆಸ್ಟ್ ಕ್ರಿಕೆಟ್‌ನಲ್ಲಿ ಆರ್ಭಟ ನಡೆಸುತ್ತಾ ಇದ್ದರು. ಆದರೆ ಈ ಬಾರಿ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಲಭಿಸಿಲ್ಲ.
ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಅವರಿಗೆ ಏಕೆ ಸ್ಥಾನ ನೀಡಲಾಗಿಲ್ಲ ಎಂಬುದರ ಬಗ್ಗೆ ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ. ನಾಯಕ ಹೇಳಿದಂತೆ, ಸಿರಾಜ್ ಓಲ್ಡ್ ಬೌಲ್‌ನಲ್ಲಿ ಅಷ್ಟಾಗಿ ಎಫೆಕ್ಟಿವ್ ಅಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿಯೇ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಿದ್ದಾರೆ. ಈ ನಿರ್ಧಾರ ಹೊರ ಬೀಳುತ್ತಿದ್ದಂತೆ ಸಿರಾಜ್ ಸಹ ಒಂದು ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರ ಅವರ ಅಭಿಮಾನಿಗಳು ಖುಷಿ ತಂದಿದೆ.

ಸಿರಾಜ್ ದೊಡ್ಡ ನಿರ್ಧಾರ
ಸಿರಾಜ್ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ಸೆಲೆಕ್ಟ್ ಆಗದೇ ಇರುವುದರಿಂದ ದೇಶೀಯ ಟೂರ್ನಿಯಲ್ಲಿ ಆಡಲು ಮುಂದಾಗಿದ್ದಾರೆ. ಅಂದಹಾಗೆ ಇವರು ದೇಶೀಯ ಟೂರ್ನಿಯಲ್ಲಿ ಹೈದರಾಬಾದ್ ತಂಡದ ಪರ ಅಖಾಡಕ್ಕೆ ಇಳಿಯುತ್ತಾರೆ. ಈ ಬಾರಿಯೂ ಇವರು ಹೈದರಾಬಾದ್ ವಿರುದ್ಧ ರಣಜಿ ಟ್ರೋಫಿ ಪಂದ್ಯಗಳನ್ನು ಆಡುವುದು ಕಾಣಬಹುದಾಗಿದೆ. ಜನವರಿ 23 ರಿಂದ ಆರಂಭವಾಗುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಸಿರಾಜ್ ಅಲಭ್ಯರಾಗಲಿದ್ದಾರೆ. ಆದರೆ ಎರಡನೇ ಪಂದ್ಯದಲ್ಲಿ ತಾವು ಲಭ್ಯರಿರುವುದಾಗಿ ಹೇಳಿದ್ದಾರೆ.
ವರ್ಕ್ ಲೋಡ್‌ನಿಂದಾಗಿ ಹಿಮಾಚಲಪ್ರದೇಶ ವಿರುದ್ಧದ ಪಂದ್ಯದಲ್ಲಿ ಆಡುವುದಿಲ್ಲ. ಆದರೆ ವಿದರ್ಭ ವಿರುದ್ಧ ಕೊನೆಯ ಪಂದ್ಯದಲ್ಲಿ ಮೈದಾನಕ್ಕೆ ಇಳಿಯಲಿದ್ದಾರೆ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಅಧಿಕಾರಿಗಳು ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಸಿರಾಜ್ ಬದಲಿಗೆ ಅರ್ಷದೀಪ್
ಮೊಹಮ್ಮದ್ ಸಿರಾಜ್ ಅವರ ಬದಲಿಗೆ ವೇಗಿ ಅರ್ಷದೀಪ್ ಸಿಂಗ್ ಅವರಿಗೆ ಸ್ಥಾನ ಸಿಕ್ಕಿದೆ. ಅರ್ಷದೀಪ್ ಸಿಂಗ್ ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶ ನೀಡಿದ್ದರಿಂದ ಸ್ಥಾನ ನೀಡಲಾಗಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲೂ ಸಿರಾಜ್ ಸ್ಥಿರ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು. ಇವರು ಆಡಿದ 5 ಪಂದ್ಯಗಳಲ್ಲಿ 20 ವಿಕೆಟ್ ಕಬಳಿಸಿದ್ದರು. ಹೀಗಾಗಿ ಇವರ ಮೇಲೂ ಟೀಕೆಗಳು ಕೇಳಿ ಬಂದಿದ್ದವು. ಸಿರಾಜ್‌ಗೆ ಈಗಾಗಲೇ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ವಕಪ್ ಆಡಿದ ಅನುಭವ ಇರುವುದರಿಂದ ಇವರನ್ನು ಕೈ ಬಿಟ್ಟಿದ್ದು ತಪ್ಪು ಎಂಬ ಭಾವನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ತಂಡ ತನ್ನ ಸಂಯೋಜನೆಗೆ ಅನುಸಾರವಾಗಿ ಕಾರ್ಯವನ್ನು ಮಾಡಲಿದೆ.
ಸಿರಾಜ್ ಸಾಧನೆ
ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಭಾರತದ ಪರ 36 ಟೆಸ್ಟ್ ಪಂದ್ಯಗಳನ್ನು ಆಡಿದ್ದು 100 ವಿಕೆಟ್ ಕಬಳಿಸಿದ್ದಾರೆ. ಇನ್ನು 44 ಏಕದಿನ ಮತ್ತು 16 ಟಿ20 ಪಂದ್ಯಗಳನ್ನು ಆಡಿದ್ದು ಕ್ರಮವಾಗಿ 71 ಹಾಗೂ 14 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications