ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಗಾಯಗೊಂಡ ವೇಗಿ ಶಾನ್ ಅಬಾಟ್ ಆಸಿಸ್ ತಂಡದಿಂದ ಹೊರಕ್ಕೆ, ಮೋಯ್ಸಿಸ್ ಸೇರ್ಪಡೆ

Moises Henrqieus added Australia test squad, Sean Abbot ruled out

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡಕ್ಕೆ ಆಲ್‌ರೌಂಡರ್ ಮೋಯ್ಸಿಸ್ ಹೆನ್ರಿಕ್ಯೂಸ್ ಅವರನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಸೋಮವಾರ ತಿಳಿಸಿದೆ. ಆಸಿಸ್ ತಂಡದ ವೇಗ ಶಾನ್ ಅಬಾಟ್ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದು ಈ ಹಿನ್ನೆಲೆಯಲ್ಲಿ ಮೋಯ್ಸಿಸ್ ತಂಡವನ್ನು ಕೂಡಿಕೊಂಡಿದ್ದಾರೆ.

ಸಿಡ್ನಿಯಲ್ಲಿ ಭಾರತದ ವಿರುದ್ಧ ನಡೆದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ವೇಗಿ ಶಾನ್ ಅಬಾಟ್ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಡ್ನಿಯಿಂದ ಅಡಿಲೇಡ್‌ಗೆ ಆಸ್ಟ್ರೇಲಿಯಾ ತಂಡದ ಜೊತೆಗೆ ಮೋಯ್ಸಿಸ್ ಕೂಡ ಪ್ರಯಾಣ ಬೆಳೆಸಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್‌ಗೆ ಮುಹೂರ್ತ ಫಿಕ್ಸ್: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಚಾಲನೆಪ್ರಥಮ ದರ್ಜೆ ಕ್ರಿಕೆಟ್‌ಗೆ ಮುಹೂರ್ತ ಫಿಕ್ಸ್: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಚಾಲನೆ

ಮೋಯ್ಸಿಸ್ ಹೆನ್ರಿಕ್ಯೂಸ್ ಅವರು ಆಸ್ಟ್ರೇಲಿಯಾ ಎ ತಂಡದ ಪರವಾಗಿ ಎರಡನೇ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಬೇಕಾಗಿತ್ತು. ಆದರೆ ಅವರು ಕಡಿಮೆ ಪ್ರಮಾಣದ ಮಂಡಿರಜ್ಜು ಗಾಯಕ್ಕೊಳಗಾಗಿದ್ದ ಕಾರಣ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದರು. ಈಗ ಅವರು ಸಂಪೂರ್ಣವಾಗಿ ಚೇತರಿಕೆ ಕಂಡಿದ್ದು ಅಡಿಲೇಡ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಮೋಯ್ಸಿಸ್ ಹೆನ್ರಿಕ್ಯೂಸ್ ಭಾರತದ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಪಾಲ್ಗೊಂಡಿದ್ದರು. ಎರಡು ಏಕದಿನ ಪಂದ್ಯಗಳಲ್ಲಿ ಪಾಲ್ಗೊಂಡಿದ್ದ ಅವರು ಚುಟುಕು ಕ್ರಿಕೆಟ್‌ ಸರನಿಯ ಎಲ್ಲಾ ಮೂರು ಪಂದ್ಯಗಳಲ್ಲೂ ಆಸಿಸ್ ತಂಡವನ್ನು ಪ್ರತಿನಿಧಿಸಿದ್ದರು.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಗ್ರ ಸ್ಥಾನಕ್ಕೇರಿದ ನ್ಯೂಜಿಲೆಂಡ್ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಅಗ್ರ ಸ್ಥಾನಕ್ಕೇರಿದ ನ್ಯೂಜಿಲೆಂಡ್

ಇನ್ನು ಆಸ್ಟ್ರೇಲಿಯಾದ ಯುವ ಆಟರಂಬಿಕ ಆಟಗಾರ ಪುಕೋವ್ಸ್ಕಿ ಕೂಡ ಗಾಯಗೊಂಡಿದ್ದು ಮೊದಲ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಆದರೆ ಎರಡನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಪರವಾಗಿ ಕಣಕ್ಕಿಳಿಯುವ ಭರವಸೆಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ವ್ಯಕ್ತಪಡಿಸಿದೆ. ಈ ಮಧ್ಯೆ ಮೊದಲ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಬಳಿಕ ಗಾಯಗೊಂಡಿದ್ದ ಕ್ಯಾಮರೂನ್ ಗ್ರೀನ್ ಚೇತರಿಕೆ ಕಂಡಿದ್ದು ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

Story first published: Monday, December 14, 2020, 13:55 [IST]
Other articles published on Dec 14, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X