ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

WTC: ಭಾರತಕ್ಕಿಂತ ನ್ಯೂಜಿಲೆಂಡ್ ತಂಡಕ್ಕಿರುವ ಅನುಕೂಲವನ್ನು ಬಿಚ್ಚಿಟ್ಟ ಪನೇಸರ್

Monty Panesar picks his favorite side for the WTC final

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದ ಕುರಿತು ವಿಶ್ವದ ಕ್ರಿಕೆಟ್ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಯಾವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.

ಭಾರತ ಪುರುಷ ತಂಡಕ್ಕಿರುವ ಬೆಲೆ ಮಹಿಳಾ ತಂಡಕ್ಕಿಲ್ಲ; ಕಿಡಿಕಾರಿದ ಇಂಗ್ಲೆಂಡ್ ಮಾಜಿ ಕ್ರಿಕೆಟರ್ಭಾರತ ಪುರುಷ ತಂಡಕ್ಕಿರುವ ಬೆಲೆ ಮಹಿಳಾ ತಂಡಕ್ಕಿಲ್ಲ; ಕಿಡಿಕಾರಿದ ಇಂಗ್ಲೆಂಡ್ ಮಾಜಿ ಕ್ರಿಕೆಟರ್

ಈಗಾಗಲೇ ಈ ಪಂದ್ಯದ ಕುರಿತು ಹಲವಾರು ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಇದೀಗ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮಾಂಟಿ ಪನೇಸರ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಂಗ್ಲೆಂಡ್ ತಲುಪಿರುವ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ವಿರುದ್ಧ ಜೂನ್ 2ರಿಂದ ಆರಂಭವಾಗಲಿರುವ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿಕೊಹ್ಲಿ ಅಲ್ಲ ಅತಿಹೆಚ್ಚು ಸಂಭಾವನೆ ಪಡೆಯುವ ನಾಯಕ; ಇಲ್ಲಿದೆ ಟಾಪ್ 5 ನಾಯಕರ ಪಟ್ಟಿ

ಇನ್ನು ಮಾಂಟಿ ಪನೇಸರ್ ಈ ಎರಡು ಪಂದ್ಯಗಳನ್ನು ಗಣನೆಗೆ ತೆಗೆದುಕೊಂಡು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 'ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ತಂಡ 2 ಟೆಸ್ಟ್ ಪಂದ್ಯಗಳನ್ನು ಆಡುವುದರಿಂದ ನ್ಯೂಜಿಲೆಂಡ್ ತಂಡಕ್ಕೆ ಈ ಪಂದ್ಯದಲ್ಲಿ ಆಗುವ ಅನುಭವ ಅನುಕೂಲವಾಗಿ ಪರಿಣಮಿಸಲಿದೆ. ಈ 2 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ ಕಿವೀಸ್‌ಗೆ ಅದು ಪ್ಲಸ್ ಪಾಯಿಂಟ್ ಆಗಲಿದೆ, ಒಂದುವೇಳೆ ಸೋತರೆ ಅದು ಖಚಿತವಾಗಿ ಭಾರತ ತಂಡದ ವಿಶ್ವಾಸವನ್ನು ಹೆಚ್ಚಿಸಲಿದೆ' ಎಂದು ಮಾಂಟಿ ಪನೇಸರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Story first published: Tuesday, May 25, 2021, 12:52 [IST]
Other articles published on May 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X