Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs NZ: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತಕ್ಕೆ ಬಿಗ್ ರಿಲೀಫ್

ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ 2025ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಎ ಗುಂಪಿನಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಭಾರತ ಸುಲಭ ಗೆಲುವು ದಾಖಲಿಸಿತು. ಈಗ ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಭಾರತ ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

ವೈಯಕ್ತಿಕ ತುರ್ತು ಪರಿಸ್ಥಿತಿಯಿಂದಾಗಿ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ದುಬೈನಲ್ಲಿ ತಂಡ ಸೇರಿಕೊಂಡಿದ್ದಾರೆ. ಮೊರ್ನೆ ಮೊರ್ಕೆಲ್ ಅವರು ಫೆಬ್ರವರಿ 26, ರಂದು ಬುಧವಾರ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡದ ಅಭ್ಯಾಸ ಸಮಯದಲ್ಲಿ ಭಾಗವಹಿಸಿದ್ದಾರೆ.

Morne Morkel joined Team India before Champions Trophy 2025 match against New Zealand

ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯಕ್ಕೆ ಕೆಲವು ದಿನಗಳ ಮೊದಲು ಮೊರ್ನೆ ಮೊರ್ಕೆಲ್ ಟೀಮ್ ಇಂಡಿಯಾ ತೊರೆಯಬೇಕಾಯಿತು. ತಂದೆಯ ಸಾವಿನ ಸುದ್ದಿ ತಿಳಿದ ಕೂಡಲೇ ಮಾರ್ನೆ ಮಾರ್ಕೆಲ್ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದರು. ಮೊರ್ನೆ ಮೊರ್ಕೆಲ್ ಅನುಪಸ್ಥಿತಿಯಲ್ಲಿ ಭಾರತ ತಂಡವು ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ಸೋಲಿಸಿತು ಈಗ ದುಬೈನಲ್ಲಿರುವ ಐಸಿಸಿ ಅಕಾಡೆಮಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದು, ಹೆಡ್‌ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಬೌಲಿಂಗ್ ಕೋಚ್ ಚರ್ಚೆ ನಡೆಸುತ್ತಿದ್ದರು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಪರ ಅತ್ಯುತ್ತಮ ಬ್ಯಾಟರ್ ಆಗಿದ್ದ ಶುಭಮನ್ ಗಿಲ್ ಅಭ್ಯಾಸ ಅವಧಿಗೆ ಹಾಜರಾಗಿಲ್ಲ. ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಗಿಲ್ ಭರ್ಜರಿ ಶತಕ ಬಾರಿಸಿದ್ದರು. ಇದಾದ ನಂತರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 35 ರನ್‌ಗಳ ಇನ್ನಿಂಗ್ಸ್ ಆಡಿದರು.

ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ತಂಡದ ಸಹಾ ಆಟಗಾರರೊಂದಿಗೆ ಅಭ್ಯಾಸ ನಡೆಸಿದ್ದಾರೆ. ಪಾಕಿಸ್ತಾನವನ್ನು ಸೋಲಿಸಿದ ನಂತರ ಟೀಮ್ ಇಂಡಿಯಾ ಆಟಗಾರರು ಎರಡು ದಿನಗಳ ರಜೆಯಲ್ಲಿದ್ದರು. ಇದೀಗ ನ್ಯೂಜಿಲೆಂಡ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ನ್ಯೂಜಿಲೆಂಡ್ ತನ್ನ ಎ ಗುಂಪು ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಎ ಗುಂಪಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮಾರ್ಚ್ 2 ರಂದು ಮುಖಾಮುಖಿಯಾಗಲಿವೆ.

Story first published: Thursday, February 27, 2025, 18:41 [IST]
Other articles published on Feb 27, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+