Morne Morkel: ಟೀಮ್ ಇಂಡಿಯಾದ ನೂತನ ಬೌಲಿಂಗ್ ಕೋಚ್ ಯಾರು ಗೊತ್ತಾ?
ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಅಲ್ಲದೆ ಒಂದು ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಈಗ ಗೌತಮ್ ಗಂಭೀರ್ ಮುಂದಾಳತ್ವದಲ್ಲಿ ತಂಡ ಕಾರ್ಯ ನಿರ್ವಹಿಸಲಿದೆ. ಗೌತಮ್ ಬ್ರಿಗೇಡ್ ಸೇರಿಕೊಳ್ಳಲು ವಿದೇಶಿ ಬೌಲರ್ ಒಬ್ಬರು ರೆಡಿ ಆಗಿದ್ದಾರೆ.
ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬಳಿಕ ಕೋಚ್ ಹಾಗೂ ಸಹಾಯಕ ಸಿಬ್ಬಂದಿಯ ಒಪ್ಪಂದವೂ ಪೂರ್ಣಗೊಂಡಿತ್ತು. ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಸ್ಥಾನವನ್ನು ಗೌತಮ್ ಗಂಭೀರ್ ತುಂಬಿದ್ದಾರೆ. ಆದರೆ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಬಿಸಿಸಿಐ ಮುಂದಾಗಿದೆ. ಈಗ ಟೀಮ್ ಇಂಡಿಯಾಕ್ಕೆ ವಿದೇಶಿ ಬೌಲಿಂಗ್ ಕೋಚ್ ಒಬ್ಬರು ಸಿಕ್ಕಿದ್ದಾರೆ.

ನೂತನ ಬೌಲಿಂಗ್ ಕೋಚ್ ಯಾರು?
ದಕ್ಷಿಣ ಆಫ್ರಿಕಾದ ದಿಗ್ಗಜ ಬೌಲರ್ ಮೊರ್ನೆ ಮೊರ್ಕೆಲ್ ಈಗ ಭಾರತದ ಹೊಸ ಬೌಲಿಂಗ್ ಕೋಚ್ ಆಗಲಿದ್ದಾರೆ. ಈ ಬಗ್ಗೆ ಬಿಸಿಸಿಐನಿಂದ ಘೋಷಣೆ ಆಗುವುದು ಬಾಕಿ ಇದೆ. ಬೌಲಿಂಗ್ ಕೋಚ್ ಸ್ಥಾನವನ್ನು ಮೊರ್ಕೆಲ್ ಶೀಘ್ರದಲ್ಲಿ ತುಂಬಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಸರಣಿಯ ವೇಳೆಗೆ ಅವರು ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.
ಗೌತಮ್ ಗಂಭೀರ್ ಇತ್ತೀಚೆಗೆ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿದ್ದಾರೆ. ಬ್ಯಾಟಿಂಗ್ ಕೋಚ್ ಆಗಿ ಅಭಿಷೇಕ್ ನಾಯರ್ ಅವರನ್ನು ನೇಮಿಸಲಾಗಿದೆ. ಕ್ರಿಕ್‌ಬಜ್ ವರದಿಯ ಅನುಸಾರ ಮೊರ್ನೆ ಮೊರ್ಕೆಲ್ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

ರಾಹುಲ್ ದ್ರಾವಿಡ್ ಅವಧಿಯಲ್ಲಿ ಟಿ ದಿಲೀಪ್ ಫೀಲ್ಡಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಇವರೇ ಸದ್ಯ ಈ ಪಾತ್ರದಲ್ಲಿ ಮುಂದುವರೆದಿದ್ದಾರೆ. ಸದ್ಯ ಟೀಂ ಇಂಡಿಯಾ ವಿಶ್ರಾಂತಿಯಲ್ಲಿದ್ದು, ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಈ ಸರಣಿಯ ವೇಳೆಗೆ ಭಾರತ ತಂಡದ ಸಂಪೂರ್ಣ ಕೋಚಿಂಗ್ ಸಿಬ್ಬಂದಿಗಳ ಪಟ್ಟಿ ರಿಲೀಸ್ ಆಗಬಹುದು.
ಮೋರ್ನೆ ಮೊರ್ಕೆಲ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ ಎಂದು ತಿಳಿದು ಬಂದಿದೆ. ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತರಬೇತಿ ನೀಡಿದ ಅನುಭವ ಹೊಂದಿದ್ದಾರೆ. ಇವರು ಪಾಕ್ ತಂಡದ ಬೌಲಿಂಗ್ ಕೋಚ್ ಆಗಿದ್ದರು.
ಮೊರ್ನೆ ಮೊರ್ಕೆಲ್ ವೃತ್ತಿಜೀವನ
ಮೊರ್ನೆ ಮೊರ್ಕೆಲ್ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ವೇಗದ ಬೌಲರ್‌ಗಳಲ್ಲಿ ಒಬ್ಬರು. ಇವರು 86 ಟೆಸ್ಟ್ ಪಂದ್ಯಗಳಲ್ಲಿ 309 ವಿಕೆಟ್ ಕಬಳಿಸಿದ್ದಾರೆ. ಇನ್ನು 117 ಏಕದಿನ ಪಂದ್ಯಗಳನ್ನು ಆಡಿದ್ದು, 188 ವಿಕೆಟ್ ಪಡೆದಿದ್ದಾರೆ. ಚುಟುಕು ಕ್ರಿಕೆಟ್‌ನಲ್ಲೂ ದಕ್ಷಿಣ ಆಫ್ರಿಕಾ ಪರ 44 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 47 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications