ಮುಂಬೈ ಇಂಡಿಯನ್ಸ್ ವಿರುದ್ಧ ಕೆಟ್ಟ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಅಂತಿಮ ಹಂತಕ್ಕೆ ಬಂದಿದೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಿವೆ.
ಐಪಿಎಲ್ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿರುವುದು ಇದೇ ಮೊದಲಬಾರಿ. ಮುಂಬೈ ನಾಲ್ಕು ಬಾರಿ ಟ್ರೋಫಿ ಗೆದ್ದಿದ್ದರೆ, ಡೆಲ್ಲಿ ಫೈನಲ್‌ಗೆ ಪ್ರವೇಶಿಸುತ್ತಿರುವುದು ಇದೇ ಮೊದಲ ಬಾರಿ. ಈ ಪಂದ್ಯದಲ್ಲಿ ಒಂದಿಷ್ಟು ಬೇಡದ ದಾಖಲೆಗಳು ನಿರ್ಮಾಣವಾಗಿವೆ.
ಮಂಗಳವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಪರ ಆರಂಭಿಕರಾಗಿ ಬಂದಿದ್ದ ಮಾರ್ಕಸ್ ಸ್ಟೋಯ್ನಿಸ್ ಮೊದಲನೇ ಎಸೆತಕ್ಕೆ ಟ್ರೆಂಟ್ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಡೆಲ್ಲಿಯ ಆರಂಭಿಕ ಬ್ಯಾಟ್ಸ್‌ಮನ್‌ಗಳು 2020ರ ಐಪಿಎಲ್‌ನಲ್ಲಿ 9 ಬಾರಿ ಡಕ್‌ಗೆ ಔಟಾದ ದಾಖಲೆ ನಿರ್ಮಾಣವಾಗಿದೆ.
2020ರ ಐಪಿಎಲ್‌ನಲ್ಲಿ ಡೆಲ್ಲಿಯ ಆರಂಭಿಕ ಬ್ಯಾಟ್ಸ್‌ಮನ್‌ಗಳು ಒಟ್ಟು 9 ಬಾರಿ ಡಕ್ ಔಟಾಗಿದ್ದರೆ, ಉಳಿದ ಏಳು ತಂಡಗಳ ಬ್ಯಾಟ್ಸ್‌ಮನ್‌ಗಳು ಸೇರಿ 12 ಸಾರಿ ಡಕ್ ಔಟ್ ಆದಂತಾಗಿದೆ. ಆರಂಭಿಕ ವಿಕೆಟ್ ಬೇಗ ಹೋಗಿಲ್ಲದಿದ್ದರೆ ಡೆಲ್ಲಿ 156 ರನ್‌ಗೆ ಬದಲು 180+ ರನ್ ಗುರಿ ನೀಡಲು ಅವಕಾಶವಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications