IPL ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ತಂಡವನ್ನು ಮುನ್ನಡೆಸಿದ ನಾಯಕರ ಪಟ್ಟಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ರೋಚಕತೆ ಹೆಚ್ಚಿಸಿದೆ. ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನಿರ್ಮಿಸಿದ್ದಾರೆ. ಅಲ್ಲದೆ ಈ ವೇಳೆ ನಾಯಕರು ಸಹ ದಾಖಲೆಗಳ ಪಟ್ಟಿಗೆ ಸ್ಥಾನ ಪಡೆದಿದ್ದಾರೆ. ಐಪಿಎಲ್ ಇತಿಹಾಸದ ಪುಟಗಳನ್ನು ತಿರುವಿನೋಡಿದಾಗ ಅತಿ ಹೆಚ್ಚು ಐಪಿಎಲ್ ಪಂದ್ಯಗಳನ್ನು ಆಡಿದ ಹೆಗ್ಗಳಿಕೆ ಯಾವ ನಾಯಕನಿಗೆ ಸಲ್ಲುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪರ ನಾಯಕರಾಗಿ ಕಣಕ್ಕೆ ಇಳಿದಿದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ದೊಡ್ಡ ದಾಖಲೆ ಬರೆದರು. ಇವರು ನಾಯಕರಾಗಿ ಐಪಿಎಲ್‌ನಲ್ಲಿ 100 ಪಂದ್ಯಗಳನ್ನು ಆಡಿದ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ಶ್ರೇಯಸ್ ಎಲೈಟ್ ಕ್ಲಬ್‌ಗೆ ಸ್ಥಾನ ಪಡೆದರು.

ನಾಯಕರಾಗಿ ಅತಿ ಹೆಚ್ಚು ಪಂದ್ಯ ಆಡಿದ ಆಟಗಾರ ಯಾರು?
ಐಪಿಎಲ್ ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಅತಿ ಹೆಚ್ಚು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಕೀರ್ತಿ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಲ್ಲುತ್ತದೆ. ಧೋನಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ನಾಯಕರಾಗಿ ಮುನ್ನಡೆಸಿದ ಹೆಗ್ಗಳಿಕೆ ಹೊಂದಿದ್ದಾರೆ. ಇವರು ಆಡಿದ 235 ಪಂದ್ಯಗಳಲ್ಲಿ 136 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ.
ಅತಿ ಹೆಚ್ಚು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಎರಡನೇ ನಾಯಕ ಎಂಬ ಹೆಗ್ಗಳಿಕೆ ರೋಹಿತ್ ಶರ್ಮಾ ಅವರಿಗೆ ಸಲ್ಲುತ್ತದೆ. ಇವರು 158 ಪಂದ್ಯಗಳಲ್ಲಿ, 87 ಜಯ ಸಾಧಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಆರ್‌ಸಿಬಿ ತಂಡದ ಸ್ಟಾರ್ ನಾಯಕ ವಿರಾಟ್ ಕೊಹ್ಲಿ ಅವರದ್ದಾಗಿದೆ. ಇವರು ಆಡಿದ 143 ಪಂದ್ಯಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದು, 66 ಪಂದ್ಯಗಳಲ್ಲಿ ಜಯ ದಾಖಲಿಸಿದೆ.
ಅತಿ ಹೆಚ್ಚು ಪಂದ್ಯಗಳಲ್ಲಿ ನಾಯಕರಾಗಿ ತಂಡವನ್ನು ಮುನ್ನಡೆಸಿದ ಕೀರ್ತಿ ಗೌತಮ್ ಗಂಭೀರ್ ಅವರದ್ದಾಗಿದೆ. ಇವರು ಕೆಕೆಆರ್ ಹಾಗೂ ಡಿಸಿ ತಂಡಗಳನ್ನು ಒಟ್ಟಾರೆಯಾಗಿ 129 ಪಂದ್ಯಗಳಲ್ಲಿ ಮುನ್ನಡೆಸಿದ್ದು, 71ರಲ್ಲಿ ಜಯ ಸಾಧಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ. ಇವರು ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನೆಡಿಸಿದ್ದಾರೆ. ಇವರು ಒಟ್ಟಾರೆ 100 ಪಂದ್ಯಗಳಲ್ಲಿ 54 ಪಂದ್ಯಗಳಲ್ಲಿ ಜಯ ಸಾಧಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications