For Quick Alerts
ALLOW NOTIFICATIONS  
For Daily Alerts
 

ಐಸಿಸಿ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳು; ಟಾಪ್ 5ರಲ್ಲಿ ಕೊಹ್ಲಿ, ಸಚಿನ್

ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿಯಂತಹ ಐಸಿಸಿ ಪಂದ್ಯಾವಳಿಗಳು ಕ್ರಿಕೆಟ್ ಆಟದಲ್ಲಿ ದೊಡ್ಡ ವೇದಿಕೆಗಳಾಗಿವೆ. ಇಲ್ಲಿ ಅಗ್ರ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪರಸ್ಪರ ಪೈಪೋಟಿ ನಡೆಸುತ್ತವೆ.

ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಇನ್ನು ಪುರುಷರ ಟಿ20 ವಿಶ್ವಕಪ್ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುತ್ತದೆ. ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಅಗ್ರ 8 ತಂಡಗಳು ಮಾತ್ರ ಸ್ಪರ್ಧಿಸುತ್ತವೆ.

Most Run-Scoring Batsmen In ICC Tournaments; Virat Kohli, Sachin Tendulkar In Top 5

ಐಸಿಸಿ ಪಂದ್ಯಾವಳಿಗಳಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ. ವೆಸ್ಟ್ ಇಂಡೀಸ್‌ನ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದರೆ, ಭಾರತದ ವಿರಾಟ್ ಕೊಹ್ಲಿ ಮತ್ತು ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೂಡ ಸ್ಥಾನ ಪಡೆದಿದ್ದಾರೆ.

1) ಕ್ರಿಸ್ ಗೇಲ್ - ವೆಸ್ಟ್ ಇಂಡೀಸ್ - 2,942 ರನ್

ವೆಸ್ಟ್ ಇಂಡೀ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರು 2,942 ರನ್ ಗಳಿಸುವ ಮೂಲಕ ಐಸಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ ಏಕದಿನ ವಿಶ್ವಕಪ್‌ನಲ್ಲಿ 1,186 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

2) ಕುಮಾರ ಸಂಗಕ್ಕಾರ - ಶ್ರೀಲಂಕಾ - 2,876 ರನ್

ಶ್ರೀಲಂಕಾ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್-ಬ್ಯಾಟರ್ ಕುಮಾರ ಸಂಗಕ್ಕಾರ ಅವರು ಐಸಿಸಿ ಪಂದ್ಯಾವಳಿಗಳಲ್ಲಿ 2,876 ರನ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕುಮಾರ ಸಂಗಕ್ಕಾರ ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ 1,532 ರನ್ ಗಳಿಸಿರುವುದು ವಿಶೇಷ.

Most Run-Scoring Batsmen In ICC Tournaments; Virat Kohli, Sachin Tendulkar In Top 5

3) ಮಹೇಲಾ ಜಯವರ್ಧನೆ - ಶ್ರೀಲಂಕಾ - 2,858 ರನ್

ಶ್ರೀಲಂಕಾ ತಂಡದ ಮಾಜಿ ನಾಯಕ ಮಹೇಲಾ ಜಯವರ್ಧನೆ ಅವರು ಐಸಿಸಿ ಪಂದ್ಯಾವಳಿಗಳಲ್ಲಿ 2,858 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮಹೇಲಾ ಜಯವರ್ಧನೆ ಏಕದಿನ ವಿಶ್ವಕಪ್‌ನಲ್ಲಿ 1,100 ರನ್ ಮತ್ತು ಟಿ20 ವಿಶ್ವಕಪ್‌ನಲ್ಲಿ 1,016 ರನ್ ಗಳಿಸಿದ್ದಾರೆ.

4) ವಿರಾಟ್ ಕೊಹ್ಲಿ - ಭಾರತ - 2,820 ರನ್

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೂರ್ನಿಗಳಲ್ಲಿ 2,820 ರನ್ ಬಾರಿಸಿದ್ದಾರೆ. ಈ ವರ್ಷದ ಐಸಿಸಿ ಪುರುಷರ ಏಕದಿನ ವಿಶ್ವಕಪ್ ನಂತರ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ದಾಖಲೆಯನ್ನು ಮೀರಿಸುವ ಮೂಲಕ ಐಸಿಸಿ ಪಂದ್ಯಾವಳಿಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಬಹುದು.

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ 1,141 ರನ್ ಮತ್ತು ಏಕದಿನ ವಿಶ್ವಕಪ್‌ನಲ್ಲಿ 1,030 ರನ್ ಗಳಿಸಿದ್ದಾರೆ.

5) ಸಚಿನ್ ತೆಂಡೂಲ್ಕರ್ - ಭಾರತ - 2,719 ರನ್

ಭಾರತದ ಲೆಜೆಂಡ್ ಕ್ರಕೆಟಿಗ ಸಚಿನ್ ತೆಂಡೂಲ್ಕರ್ ಅವರು ಐಸಿಸಿ ಪಂದ್ಯಾವಳಿಗಳಲ್ಲಿ 2,719 ರನ್ ಗಳಿಸುವ ಮೂಲಕ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಈ ಪೈಕಿ ಸಚಿನ್ ತೆಂಡೂಲ್ಕರ್ ಏಕದಿನ ವಿಶ್ವಕಪ್‌ನಲ್ಲಿ 2,278 ರನ್ ಬಾರಿಸಿದ್ದಾರೆ.

6) ರಿಕಿ ಪಾಂಟಿಂಗ್ - ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರು ಐಸಿಸಿ ಟೂರ್ನಿಗಳಲ್ಲಿ 2,422 ರನ್ ಗಳಿಸುವಲ್ಲಿ ಯಶಸ್ವಿಯಾದರು. ಈ ಪೈಕಿ ರಿಕಿ ಪಾಂಟಿಂಗ್ ಅವರು ಏಕದಿನ ವಿಶ್ವಕಪ್‌ಗಳಲ್ಲಿ 1,743 ರನ್ ಬಾರಿಸಿದ್ದಾರೆ.

Story first published: Thursday, June 15, 2023, 10:58 [IST]
Other articles published on Jun 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+