ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮೊಟೇರಾ ಸ್ಟೇಡಿಯಂ ಮರುನಾಮಕರಣ: 'ನಾವಿಬ್ಬರು ನಮಗಿಬ್ಬರು' ಎಂದು ಟೀಕಿಸಿದ ರಾಹುಲ್ ಗಾಂಧಿ

Motera Stadium Name Change: Rahul Gandhi takes dig at renaming of Gujarat stadium

ಸರ್ದಾರ್ ವಲ್ಲಭಭಾಯ್ ಪಟೇಲ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರು ನಾಮಕರಣ ಮಾಡಿರುವುದು ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚರ್ಚೆಗಳು ತಾರಕಕ್ಕೇರಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಬಗ್ಗೆ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ.

ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಹೆಸರು ಬದಲಾವಣೆ ಮಾಡುವ ಜೊತೆಗೆ ಕ್ರೀಡಾಂಗಣದ ಎರಡು ತುದಿಗಳಿಗೆ ಅದಾನಿ ಎಂಡ್ ಹಾಗೂ ರಿಲಯನ್ಸ್ ಎಂದು ಹೆಸರಿಸಲಾಗಿದೆ. ಇದನ್ನು ಗುರಿಯಾಗಿಸಿ ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಟೀಕೆಯನ್ನು ಮಾಡಿದ್ದಾರೆ.

ಮೊಟೆರಾ ಸ್ಟೇಡಿಯಂ ಇನ್ಮುಂದೆ 'ನರೇಂದ್ರ ಮೋದಿ ಸ್ಟೇಡಿಯಂ'ಮೊಟೆರಾ ಸ್ಟೇಡಿಯಂ ಇನ್ಮುಂದೆ 'ನರೇಂದ್ರ ಮೋದಿ ಸ್ಟೇಡಿಯಂ'

"ಸತ್ಯ ಹೇಗೆ ತನ್ನನ್ನು ಬಹಿರಂಗಪಡಿಸುತ್ತದೆ ಎಂಬುದು ಸುಂದರವಾಗಿ ವ್ಯಕ್ತವಾಗಿದೆ. ನರೇಂದ್ರ ಮೋದಿ ಸ್ಟೇಡಿಯಂ, ಅದಾನಿ ಎಂಡ್, ರಿಲಯನ್ಸ್ ಎಂಡ್, ಜಯ್ ಶಾ ಅಧ್ಯಕ್ಷತೆಯಲ್ಲಿ #ನಾವಿಬ್ಬರು ನಮಗಿಬ್ಬರು" ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉದ್ಯಮಿಗಳಾದ ಅದಾನಿ ಹಾಗೂ ಮುಖೇಶ್ ಅಂಬಾನಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡುತ್ತಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ಈ ರೀತಿಯಾಗಿ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕಾಗಿ ಕುಟುಂಬ ಯೋಜನೆ ಜಾರಿಗೆ ತಂದಿದ್ದಾಗ ಸರ್ಕಾರ "ನಾವಿಬ್ಬರು ನಮಗಿಬ್ಬರು" ಎಂಬ ಘೋಷಣೆಯ ಮೂಲಕ ಜನರನ್ನು ತಲುಪುವ ಪ್ರಯತ್ನ ಮಾಡಿತ್ತು. ಈ ಘೋಷಣೆ ಸಾಕಷ್ಟು ಖ್ಯಾತವಾಗಿತ್ತು. ಇದೇ ಘೋಷಣೆಯ ಸಾಲುಗಳನ್ನು ರಾಹುಲ್ ಗಾಂಧಿ ಬಳಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರಾಹುಲ್ ಸಂಸತ್‌ನಲ್ಲೂ ರಾಹುಲ್ ಗಾಂಧಿ ಈ ಘೋಷಣೆಯ ಮೂಲಕ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು.

Story first published: Wednesday, February 24, 2021, 22:20 [IST]
Other articles published on Feb 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X