Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಶ್ರೀಶಾಂತ್ ಜೊತೆಗೆ ಧೋನಿ ಬೈಕ್ ರೈಡಿಂಗ್: ವೈರಲ್ ಆಯ್ತು ಹಳೆಯ ವಿಡಿಯೋ

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಗೆ ಬೈಕ್ ಕ್ರೇಕ್ ಇರುವ ಬಗ್ಗೆ ಕ್ರಿಕೆಟ್ ಅಭಿಮಾನಿಗಳಿಗೆ ತಿಳಿದೇ ಇದೆ. ರಾಂಚಿಯಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ಧೋನಿ ಸಾಕಷ್ಟು ಬೈಕ್‌ಗಳ ಸಂಗ್ರಹವನ್ನು ಹೊಂದಿದ್ದಾರೆ. ಟೀಮ್ ಇಂಡಿಯಾ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಆಡಿದ ಬಳಿಕ ವಿಶ್ರಾಂತಿಯಲ್ಲಿರುವ ಈ ಸಂದರ್ಭದಲ್ಲಿ ಎಂಎಸ್ ಧೋನಿ ಬೈಕ್ ರೈಡಿಂಗ್ ಮಾಡಿದ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎಂಎಸ್ ಧೋನಿ ಹಾಗೂ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಅವರನ್ನು ಹಿಂಬಾಗದಲ್ಲಿ ಕುಳ್ಳಿರಿಸಿಕೊಂಡು ರೈಡಿಂಗ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳು ಇದರ ವಿಡಿಯೋವನ್ನು ಮಾಡಿದ್ದು ಈ ಸಂದರ್ಭದಲ್ಲಿ ವೈರಲ್ ಆಗಿದೆ. ಒಂದು ದಶಕಕ್ಕೂ ಹಿಂದಿನ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿಮಾನಿಗಳು ವೀಕ್ಷಿಸಿದ್ದಾರೆ.

MS Dhoni bike riding With S Sreesanth, old video viral in Social media

ಪ್ರಸ್ತುತ ಧೋನಿ ಮೇಲೆ ಅಭಿಮಾನಿಗಳ ಪ್ರೀತಿ ನಿರೀಕ್ಷೆಗೂ ಮೀರಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇದು ಪ್ರತಿಬ್ಬ ಕ್ರಿಕೆಟ್ ಅಭಿಮಾನಿಗಳ ಅನುಭವಕ್ಕೆ ಬಂದಿದೆ. ಮಾಹಿ ಮೈದಾನಕ್ಕೆ ಇಳಿಯುತ್ತಿದ್ದಂತೆಯೇ ಅಭಿಮಾನಿಗಳ ಕರತಾಡನ ಅಕ್ಷರಶಃ ಮುಗಿಲುಮುಟ್ಟುವಂತಿತ್ತು. ಅಭಿಮಾನಿಗಳ ಈ ಪ್ರೀತಿಯ ಬಗ್ಗೆ ಕ್ರಿಕೆಟ್ ಪಂಡಿತರು ಕೂಡ ಅಚ್ಚರಿ ವ್ಯಕ್ತಪಡಿಸಿದ್ದರು. ಐಪಿಎಲ್ ಟೂರ್ನಿ ನಡೆಯುವ ಯಾವುದೇ ಕ್ರೀಡಾಂಗಣದಲ್ಲಿ ಕೂಡ ಧೋನಿಗೆ ದೊರೆಯುತ್ತಿದ್ದ ಅಪಾರ ಎಲ್ಲರನ್ನೂ ಅಚ್ಚರಿಗೊಳಿಸಿದೆ.

ಇನ್ನು ಎಂಎಸ್ ಧೋನಿ ನೇತೃತ್ವದಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಂದು ಬರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಮೂಲಕ ಐಪಿಎಲ್‌ನಲ್ಲಿ ಐದನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬಳಿಕ ಈ ಸಾಧನೆ ಮಾಡಿದ ದಾಖಲೆ ಬರೆದಿದ್ದಾರೆ ಎಂಎಸ್ ಧೋನಿ.

ಇನ್ನು ಎಂಎಸ್ ಧೋನಿ ಈ ಬಾರಿಯ ಐಪಿಎಲ್‌ನ ಬಳಿಕ ನಿವೃತ್ತಿ ಘೋಷಣೆ ಮಾಡುವ ನಿರೀಕ್ಷೆಯಿತ್ತು. ಆದರೆ ಫೈನಲ್ ಪಂದ್ಯವನ್ನು ಗೆದ್ದ ಬಳಿಕ ಧೋನಿ ಈ ಬಗ್ಗೆ ತಮ್ಮ ನಿರ್ಧಾರವನ್ನು ಪ್ರಕಟಿಸಿದರು. ಅಭಿಮಾನಿಗಳು ನೀಡುತ್ತಿರುವ ಪ್ರೀತಿಗೆ ಮುಂದಿನ ಆವೃತ್ತಿಯಲ್ಲಿ ಆಡಿ ಅವರಿಗೆ ಉಡುಗೊರೆ ನೀಡುವ ಬಯಕೆಯಿದೆ. ಹಾಗಾಗಿ ದೇಹ ಅದಕ್ಕೆ ಸ್ಪಂದಿಸಿದರೆ ಮುಂದಿನ ವರ್ಷದ ಆವೃತ್ತಿಯಲ್ಲಿ ಆಡುವುದಾಗಿ ಧೋನಿ ತಿಳಿಸಿದ್ದಾರೆ.

Story first published: Friday, June 16, 2023, 12:55 [IST]
Other articles published on Jun 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+