ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮುಂದಿನ ಐಪಿಎಲ್‌ನಲ್ಲಿ ಧೋನಿ ಸಿಎಸ್‌ಕೆ ಆಟಗಾರನಾಗಿರುವುದು ಅನುಮಾನ ಎಂದ ಮಾಜಿ ಕ್ರಿಕೆಟಿಗ

MS Dhoni could be a CSK mentor rather than a team player in IPL 2022 says Aakash Chopra

ಇದೇ ಯುಎಇ ನೆಲದಲ್ಲಿ ನಡೆದಿದ್ದ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆವೃತ್ತಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದೇ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಟೂರ್ನಿಯಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯ ಮುಗಿದ ನಂತರ ಮಾತನಾಡಿದ್ದ ಎಂ ಎಸ್ ಧೋನಿಗೆ ಇದೇ ನಿಮ್ಮ ಪಾಲಿನ ಕೊನೆಯ ಐಪಿಎಲ್ ಆವೃತ್ತಿಯಾ ಎಂಬ ಪ್ರಶ್ನೆ ಎದುರಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ್ದ ಎಂ ಎಸ್ ಧೋನಿ 'ಖಂಡಿತವಾಗಿಯೂ ಇಲ್ಲ' ಎಂದು ಹೇಳಿಕೆ ನೀಡುವುದರ ಮೂಲಕ ಮುಂದಿನ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಯೂ ಆಡುವುದನ್ನು ಖಚಿತಪಡಿಸಿದ್ದರು.

ಐಪಿಎಲ್: ಈ 2 ತಂಡಗಳಿಗೆ ನಾಯಕನಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ ಡೇವಿಡ್ ವಾರ್ನರ್!ಐಪಿಎಲ್: ಈ 2 ತಂಡಗಳಿಗೆ ನಾಯಕನಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ ಡೇವಿಡ್ ವಾರ್ನರ್!

ಹೀಗೆ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯೇ ಎಂಎಸ್ ಧೋನಿ ಪಾಲಿಗೆ ಕೊನೆಯ ಟೂರ್ನಿಯಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಅದಕ್ಕೆಲ್ಲಾ ಎಂಎಸ್ ಧೋನಿ ಉತ್ತರ ನೀಡಿದ್ದು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಭಾಗವಹಿಸಿದ್ದಾರೆ. ಕಳೆದ ಬಾರಿಯಂತೆ ಈ ಬಾರಿ ಎಡವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ ಹಂತದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದು, ಪ್ಲೇ ಆಫ್ ಪ್ರವೇಶಿಸಿ ಕ್ವಾಲಿಫೈಯರ್ 1 ಪಂದ್ಯದಲ್ಲಿ ಜಯ ಸಾಧಿಸಿ ನೇರವಾಗಿ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿತು. ಹೀಗೆ ಎಂಎಸ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವೇನೋ ಪ್ರಸಕ್ತ ಸಾಲಿನ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದೆ. ಆದರೆ ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನಾಗಿ ಕಣಕ್ಕಿಳಿಯುತ್ತಾರಾ ಅಥವಾ ಪ್ರಸಕ್ತ ಸಾಲಿನ ಟೂರ್ನಿಯೇ ಅವರ ಕೊನೆಯ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿ ಟೂರ್ನಿಯಾ ಎಂಬ ಪ್ರಶ್ನೆಗಳು ಇದೀಗ ಹರಿದಾಡುತ್ತಿವೆ.

ಈ ಕುರಿತಾಗಿ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿದ್ದು ಕೆಲವರು ಎಂಎಸ್ ಧೋನಿ ಮುಂಬರಲಿರುವ ಐಪಿಎಲ್ ಟೂರ್ನಿಯಲ್ಲಿ ಆಡಲಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಕೆಲವರು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯೇ ಎಂಎಸ್ ಧೋನಿ ಅವರ ಅಂತಿಮ ಐಪಿಎಲ್ ಟೂರ್ನಿ ಎಂಬ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ವಿಷಯದ ಕುರಿತಾದ ಚರ್ಚೆಗೆ ಇದೀಗ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ಸೇರಿಕೊಂಡಿದ್ದು ಎಂಎಸ್ ಧೋನಿ ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಓರ್ವ ಆಟಗಾರನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಇರುವುದು ಅನುಮಾನ ಎಂದಿದ್ದಾರೆ.

ರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾ

ರವಿ ಶಾಸ್ತ್ರಿ ಅವರ ಜಾಗದಲ್ಲಿ ಇನ್ಮುಂದೆ ರಾಹುಲ್ ದ್ರಾವಿಡ್ | Oneindia Kannada

ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಹರಾಜಿನಲ್ಲಿ ಹರಾಜಾಗುವ ಆಟಗಾರನೋರ್ವ ತಾನು ಸೇರಲಿರುವ ತಂಡದ ಪರ 3 ಆವೃತ್ತಿಗಳಲ್ಲಿ ಆಡಬೇಕಾದ ಅನಿವಾರ್ಯತೆ ಇರುತ್ತದೆ ಎನ್ನಲಾಗುತ್ತಿದೆ. ಹೀಗಾಗಿ ಈ ರೀತಿಯ ನಿಯಮವೇನಾದರೂ ಇದ್ದರೆ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಟಗಾರನಾಗುವ ಬದಲು ಮೆಂಟರ್ ಆಗಿ ಉಳಿದುಕೊಳ್ಳಲಿದ್ದಾರೆ ಎಂದು ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎಂಎಸ್ ಧೋನಿ ಇನ್ನೂ 3 ಆವೃತ್ತಿಗಳಲ್ಲಿ ಆಟಗಾರನಾಗಿ ಕಣಕ್ಕಿಳಿಯುವ ಸಾಧ್ಯತೆಗಳು ತೀರಾ ಕಡಿಮೆ, ಹೀಗಾಗಿ ಮೆಂಟರ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಎಸ್ ಧೋನಿ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂಬ ಚರ್ಚೆಗಳು ನಡೆಯುತ್ತಿವೆ.

Story first published: Friday, October 15, 2021, 14:23 [IST]
Other articles published on Oct 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X