Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB ವಿರುದ್ಧ ಒಂದು ಸಿಕ್ಸರ್ ಬಾರಿಸುತ್ತಿದ್ದಂತೆ ದಾಖಲೆ ಬರೆದ ಎಂಎಸ್ ಧೋನಿ

ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 2 ರನ್‌ಗಳಿಂದ ಸೋತು ನಿರಾಸೆ ಅನುಭವಿಸಿದೆ. ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಈ ಮೂಲಕ ಇಂತಹ ವಿಶಿಷ್ಠ ದಾಖಲೆಯನ್ನು ಮಾಡಿದ ಕೆಲವೇ ಕೆಲವು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಆರ್‌ಸಿಬಿ 2 ರನ್‌ಗಳ ರೋಚಕ ಗೆಲುವು ದಾಖಲಿಸಿ 2 ಅಂಕ ಕಲೆ ಹಾಕಿ 18 ಅಂಕಗಳನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ. ಈ ಪಂದ್ಯದಲ್ಲಿ ಚೆನ್ನೈ ಒಂದು ಹಂತದಲ್ಲಿ ಸುಲಭವಾಗಿ ಗೆಲ್ಲಬಹುದು ಎಂದು ಭಾವಿಸಲಾಗಿತ್ತು. ಆದರೆ ಆರ್‌ಸಿಬಿ ಡೆತ್‌ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸ ಅಬ್ಬರಿಸಿತು. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಮಹೇಂದ್ರ ಸಿಂಗ್ ಧೋನಿ ಅವರ ಮೇಲೆ ಇದ್ದವು. ಇವರು ಈ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್‌ ಕಟ್ಟದೇ ಇದ್ದರೂ, ಆಡಿದ ಚಿಕ್ಕ ಇನಿಂಗ್ಸ್‌ನಿಂದಲೇ ದಾಖಲೆಯ ಪುಟಕ್ಕೆ ಎಂಟ್ರಿ ಪಡೆದರು.

MS Dhoni Creates IPL History with 50 Sixes Against RCB Despite CSK s Narrow Loss

ಆರ್‌ಸಿಬಿ ವಿರುದ್ಧ ಪಂದ್ಯದಲ್ಲಿ ಧೋನಿ 8 ಎಸೆತಗಳಲ್ಲಿ ಕೇವಲ 12 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು ಒಂದು ಸಿಕ್ಸರ್ ಬಾರಿಸಿದರು. ಈ ಸಿಕ್ಸರ್‌ ಸಹಾಯದಿಂದ ಧೋನಿ ಅಪರೂಪದ ದಾಖಲೆಗೆ ಭಾಜನರಾದ್ರು.

ಭುವನೇಶ್ವರ್ ಕುಮಾರ್ ಎಸೆದ 19ನೇ ಓವರ್‌ನ 5ನೇ ಎಸೆತದಲ್ಲಿ ಧೋನಿ ಅದ್ಭುತ ಸಿಕ್ಸರ್ ಬಾರಿಸಿದರು. ಇದರೊಂದಿಗೆ ಧೋನಿ ಆರ್‌ಸಿಬಿ ವಿರುದ್ಧ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಧೋನಿ ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಬರೆದರು. ಮಾಹಿ ಒಂದೇ ತಂಡದ ವಿರುದ್ಧ 50 ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಈ ಸಾಧನೆಯನ್ನು ಇಬ್ಬರು ಆಟಗಾರರು ಮಾತ್ರ ಮಾಡಿದ್ದರು. ಧೋನಿಗಿಂತ ಮೊದಲು ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ಸಾಧನೆ ಮಾಡಿದ್ದರು.

MS Dhoni Creates IPL History with 50 Sixes Against RCB Despite CSK s Narrow Loss

ಐಪಿಎಲ್‌ನಲ್ಲಿ ಅತಿ ಹೆಚ್ಚಿ ಸಿಕ್ಸರ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯನ್ನು ನೋಡಿದಾಗ ಧೋನಿಗೆ ನಾಲ್ಕನೇ ಸ್ಥಾನ. ಇವರು ಐಪಿಎಲ್‌ನಲ್ಲಿ ಒಟ್ಟು 262 ಸಿಕ್ಸರ್ ದಾಖಲಿಸಿದ್ದಾರೆ. ಇನ್ನು ಧೋನಿ ಇನ್ನು ಎರಡು ಸಿಕ್ಸರ್‌ಗಳನ್ನು ಮುಂದಿನ ಪಂದ್ಯಗಳಲ್ಲಿ ಬಾರಿಸಿದ್ದೇ ಆದಲ್ಲಿ 350 ಸಿಕ್ಸರ್‌ ಸಿಡಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಧೋನಿ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 402 ಪಂದ್ಯಗಳಲ್ಲಿ 348 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಒಂದೇ ತಂಡದ ವಿರುದ್ಧ ಹೆಚ್ಚು ಸಿಕ್ಸರ್‌

ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಹೆಚ್ಚಿ ಸಿಕ್ಸರ್ ಬಾರಿಸಿದ ದಾಖಲೆ ಕ್ರಿಸ್‌ ಗೇಲ್‌ ಹೆಸರಿನಲ್ಲಿದೆ. ಇವರು ಪಂಜಾಬ್ ಕಿಂಗ್ಸ್‌ ವಿರುದ್ಧ 61 ಸಿಕ್ಸರ್ ದಾಖಲಿಸಿದ್ದಾರೆ. ಇನ್ನು ಯುನಿವರ್ಸಲ್‌ ಬಾಸ್‌ ಕೆಕೆಆರ್‌ ವಿರುದ್ಧವೂ 54 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್‌ ತಂಡದ ಭರವಸೆಯ ಬ್ಯಾಟರ್ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ.

Story first published: Sunday, May 4, 2025, 13:06 [IST]
Other articles published on May 4, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+