IPL 2023 MS Dhoni : ಸಿಎಸ್‌ಕೆ ತಂಡಕ್ಕೆ ಶುಭ ಸುದ್ದಿ: ಮೊದಲ ಪಂದ್ಯಕ್ಕೆ ಧೋನಿ ಸಂಪೂರ್ಣ ಫಿಟ್!
MS Dhoni Fit For CSK Vs GT Match: ಇಂಡಿಯನ್ ಪ್ರೀಮಿಯರ್ ಲೀಗ್ 2023 ಆರಂಭಕ್ಕೆ ಮುನ್ನ ಸಿಎಸ್‌ಕೆ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಆರಂಭಿಕ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರು, ಮೊದಲನೇ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿತ್ತು. ಆದರೆ ಈಗ ಬಂದಿರುವ ಸುದ್ದಿಯ ಪ್ರಕಾರ ಧೋನಿ ಫಿಟ್ ಆಗಿದ್ದು, ಮೊದಲನೇ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಮಾರ್ಚ್ 31ರಂದು ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ವಿರುದ್ಧ ಸೆಣೆಸಲಿದೆ. ಹಲವು ದಿನಗಳಿಂದ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸಿರುವ ಸಿಎಸ್‌ಕೆ ತಂಡ, ಮೊದಲ ಪಂದ್ಯಕ್ಕಾಗಿ ಅಹಮದಾಬಾದ್‌ಗೆ ಪ್ರಯಾಣ ಮಾಡಿದೆ. ಗುರುವಾರ ಐಪಿಎಲ್‌ನ ಎಲ್ಲಾ ತಂಡಗಳ ನಾಯಕರು ಐಪಿಎಲ್ ಟ್ರೋಫಿ ಜೊತೆ ಫೋಟೊಗೆ ಫೋಸ್ ನೀಡಿದ್ದಾರೆ.

41 ವರ್ಷದ ಧೋನಿ ಈ ಬಾರಿಯ ಐಪಿಎಲ್‌ಗೆ ಕಳೆದ ಒಂದು ತಿಂಗಳಿನಿಂದ ತಯಾರಿ ಮಾಡಿಕೊಂಡಿದ್ದಾರೆ. ಒಂದು ತಿಂಗಳ ಮುಂಚೆಯೇ ಚೆನ್ನೈಗೆ ಬಂದಿದ್ದ ಅವರು ಭರ್ಜರಿಯಾಗಿ ಅಭ್ಯಾಸ ನಡೆಸಿದ್ದರು. ಕಳೆದ ಒಂದು ವಾರದಿಂದ ಇಡೀ ತಂಡ ಚೆನ್ನೈನಲ್ಲಿ ಕಠಿಣ ಅಭ್ಯಾಸ ನಡೆಸಿದೆ, ಭಾನುವಾರ ಅಭ್ಯಾಸ ಮಾಡುವ ಸಂದರ್ಭದಲ್ಲಿ ಧೋನಿ ಮೊಣಕಾಲು ನೋವಿನಿಂದ ಬಳಲಿದ್ದರು.
ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಮೊಣಕಾಲು ನೋವು ಕಾಣಿಸಿಕೊಂಡಿತ್ತು. ಅಭ್ಯಾಸ ಪಂದ್ಯದ ವೇಳೆ ರನ್ ಓಡಲು ಕೂಡ ಅವರು ಕಷ್ಟಪಟ್ಟಿದ್ದರು. ಮೊದಲ ಪಂದ್ಯಕ್ಕೆ ಮುನ್ನವೇ ಧೋನಿ ಮೊಣಕಾಲು ನೋವಿಗೆ ತುತ್ತಾಗಿದ್ದು, ತಂಡದ ಮ್ಯಾನೇಜ್‌ಮೆಂಟ್ ಮತ್ತು ಅಭಿಮಾನಿಗಳಲ್ಲಿ ಆತಂಕ ಉಂಟುಮಾಡಿತ್ತು. ತಂಡದ ಮತ್ತೊಬ್ಬ ಆಟಗಾರ ಬೆನ್‌ಸ್ಟೋಕ್ಸ್ ಕೂಡ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಸ್ಟೋಕ್ಸ್ ಆರಂಭದ ಐಪಿಎಲ್ ಪಂದ್ಯಗಳಲ್ಲಿ ಬೌಲಿಂಗ್ ಮಾಡದಿರಲು ನಿರ್ಧರಿಸಿದ್ದಾರೆ.

ಧೋನಿ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ, ಗುಜರಾತ್ ಜೈಂಟ್ಸ್ ವಿರುದ್ಧದ ಮೊದಲನೇ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಸಿಎಸ್‌ಕೆ ತಂಡದ ಸಿಇಒ ಕಾಶಿ ವಿಶ್ವನಾಥನ್ ತಿಳಿಸಿದ್ದಾರೆ ಎಂದು ಇನ್‌ಸೈಡ್‌ಸ್ಪೋರ್ಟ್ ವರದಿ ಮಾಡಿದೆ. ಕಳೆದ ಒಂದು ತಿಂಗಳಿಂದ ಅಭ್ಯಾಸ ಮಾಡಿರುವ ಎಂಎಸ್ ಧೋನಿ ಮಿಂಚಲು ಸಿದ್ಧವಾಗಿದ್ದಾರೆ.

ಮೊದಲನೇ ಪಂದ್ಯಕ್ಕೆ ಮಹೀಶ್ ತೀಕ್ಷಣ ಅಲಭ್ಯ
ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರಂಭಿಕ ಪಂದ್ಯದಲ್ಲಿ ಪ್ರಮುಖ ಬೌಲರ್ ಮಹೀಶ್ ತೀಕ್ಷಣ ಅಲಭ್ಯರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಆಡುತ್ತಿದ್ದು ಏಪ್ರಿಲ್ 8ರ ನಂತರ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ. ಮತೀಶ ಚೌಧರಿ ಕೂಡ ಗಾಯದ ಸಮಸ್ಯೆಯಿಂದಾಗಿ ಐಪಿಎಲ್‌ನಿಂದ ಹೊರಗುಳಿದಿದ್ದಾರೆ. ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ತೀಕ್ಷಣ ಬದಲಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂದು ಕಾದುನೋಡಬೇಕಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಮತೀಶ ಚೌಧರಿ, ಮಹೀಶ ತೀಕ್ಷಾಣ, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಕ್ ರಶೀದ್, ನಿಶಾಂತ್ ಸಿಂಧು, ಕೈಲ್ ಜೇಮಿಸನ್, ಅಜಯ್ ಮಂಡಲ್, ಭಗತ್ ವರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications