ಐಪಿಎಲ್ 2020: ಚೆನ್ನೈಗೆ ಬಂದಿಳಿದ ಸಿಎಸ್‌ಕೆ ನಾಯಕ ಎಂಎಸ್ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈಗೆ ಬಂದಿಳಿದಿದ್ದಾರೆ. ಸಿಎಸ್‌ಕೆ ತಂಡದ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಧೋನಿ ಅವರು ರಾಂಚಿಯಿಂದ ಚೆನ್ನೈಗೆ ಆಗಮಿಸಿದ್ದಾರೆ. ಧೋನಿ ಚೆನ್ನೈ ತಲುಪಿರುವ ಚಿತ್ರವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ತನ್ನ ಅಧಿಕೃತ ಖಾತೆಯಲ್ಲಿ ಪ್ರಕಟಿಸಿದೆ.
ಹಳದಿ ಬಣ್ಣದ ಟಿ ಶರ್ಟ್ ಹಾಗೂ ಸೇನಾವಸ್ತ್ರದ ಬಣ್ಣದ ಮಾಸ್ಕ್ ಹಾಕಿಕೊಂಡು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ಚಿತ್ರವನ್ನು ಸಿಎಸ್‌ಕೆ ತಂಡ ಪೋಸ್ಟ್ ಮಾಡಿದೆ. ಈ ಮೂಲಕ ಧೋನಿ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
ಮಹೇಂದ್ರ ಸಿಂಗ್ ಧೋನಿ ಗುರುವಾರವಷ್ಟೇ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು ಬಳಿಕ ಚೆನ್ನೈಗೆ ಪ್ರಯಾಣವನ್ನು ಬೆಳೆಸಿದ್ದಾರೆ. ಶನಿವಾರದಿಂದ ಆರು ದಿನಗಳ ಕಾಲ ಚೆನ್ನಯ ತಂಡದ ತರಬೇತಿ ಶಿಬಿರ ನಡೆಯಲಿದೆ. ಲಾಕ್‌ಡೌನ್ ಸಮಯದಲ್ಲಿ ಧೋನಿ ರಾಂಚಿಯ ತಮ್ಮ ಫಾರ್ಮ್ ಹೌಸ್‌ನಲ್ಲಿ ಕುಟುಂಬದ ಜೊತೆಗೆ ಸಮಯವನ್ನು ಕಳೆದಿದ್ದರು.
ಧೋನಿಗೂ ಮುನ್ನ ಸಿಎಸ್‌ಕೆ ತಂಡದ ಉಪನಾಯಕ ಸುರೇಶ್ ರೈನಾ ಸಹ ಆಟಗಾರರಾದ ಪಿಯೂಷ್ ಚಾವ್ಲಾ ಹಾಗೂ ದೀಪಕ್ ಚಾಹರ್ ದೆಹಲಿ ವಿಮಾನ ನಿಲ್ದಾಣದಿಂದ ಜೊತೆಯಾಗಿ ಪ್ರಯಾಣಿಸಿದ್ದರು. ಅವರು ಕೂಡ ಈಗಾಗಲೆ ಚೆನ್ನೈ ತಲುಪಿದ್ದಾರೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನಯ ತಂಡದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಒಂದು ವಾರಗಳ ಕಾಲ ಈ ತರಬೇತಿ ಶಿಬಿರ ನಡೆಯಲಿದ್ದು ಬಳಿಕ ಯುಎಇಗೆ ಸದಸ್ಯರು ಪ್ರಯಾಣವನ್ನು ಬೆಳೆಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications